ಒನಕೆ ಓಬವ್ವ ಜಯಂತಿ ಸರ್ಕಾರಿ ಆಚರಣೆಯಾಗಲಿ

Team Udayavani, Dec 23, 2018, 11:39 AM IST

cta-3.jpg

ಚಿತ್ರದುರ್ಗ: ನಾಡಿನ ಮಹಿಳೆಯರ ಗೌರವದ ಪ್ರತೀಕವಾಗಿ ಒನಕೆ ಓಬವ್ವ ಜಯಂತಿಯನ್ನು ರಾಜ್ಯ ಸರ್ಕಾರವೇ ಆಚರಿಸುವ ನಿಟ್ಟಿನಲ್ಲಿ ಗಟ್ಟಿ ತೀರ್ಮಾನ ಕೈಗೊಳ್ಳಬೇಕು ಎಂದು ಛಲವಾದಿ ಗುರುಪೀಠದ ಶ್ರೀ ಬಸವನಾಗಿದೇವ ಸ್ವಾಮೀಜಿ ಒತ್ತಾಯಿಸಿದರು. 

ಇಲ್ಲಿನ ಪತ್ರಕರ್ತರ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶ್ರೀಗಳು, ಒನಕೆ ಓಬವ್ವ ಕೇವಲ ಛಲವಾದಿ
ಸಮುದಾಯಕ್ಕಷ್ಟೇ ಮೀಸಲಾಗಿಲ್ಲ. ಇಡೀ ಮಹಿಳಾ ಸಮುದಾಯದ ಸ್ಫೂರ್ತಿಯಾಗಿದ್ದಾರೆ. ಇಂತಹ ಧೀರ ಮಹಿಳೆಯ ಜಯಂತಿಯನ್ನು ಆಚರಿಸದೇ ಇರುವುದಕ್ಕೆ ಕಾರಣವಾದರೂ ಏನು ಎಂದು ಸ್ವಾಮೀಜಿ ಪ್ರಶ್ನಿಸಿದರು.

ಓಬವ್ವ ವಂಶಸ್ಥರೂ ಈಗಲೂ ಚಿತ್ರದುರ್ಗದಲ್ಲಿದ್ದಾರೆ. ನಾವೂ ಕೂಡ ಓಬವ್ವಳ ವಂಶಸ್ಥರೇ. ಮೂರನೇ ತಲೆಮಾರಿನವರಾಗಿದ್ದಾರೆ. ಓಬವ್ವಳ ವಂಶಸ್ಥರಿದ್ದಾರೆ ಎಂಬುದಕ್ಕೆ ಅನೇಕ ದಾಖಲೆಗಳಿವೆ. ಸರ್ಕಾರಿ ಗೆಜೆಟಿಯರ್‌ನಲ್ಲಿ ಇತಿಹಾಸ ಪ್ರಕಟಿಸಲಾಗಿದೆ. ಒನಕೆ ಓಬವ್ವ
ಸ್ಮಾರಕಕ್ಕೆ ರಾಜ್ಯ ಸರ್ಕಾರ ಐದು ಕೋಟಿ ರೂ. ಗಳನ್ನು ಮೀಸಲಿಟ್ಟಿದೆ. ಚಿತ್ರದುರ್ಗದಲ್ಲಿ ಎಲ್ಲಿಯಾದರೂ ಒಂದು ಎಕರೆ ಜಾಗ ಸಿಕ್ಕ ಕೂಡಲೇ ಸ್ಮಾರಕ ಸಿದ್ಧವಾಗಲಿದೆ ಎಂದರು.

ವೀರವನಿತೆ ಒನಕೆ ಓಬವ್ವ ಜಯಂತ್ಯುತ್ಸವ ಸಮಿತಿ ಕಾರ್ಯಾಧ್ಯಕ್ಷ ಎಚ್‌.ಸಿ. ನಿರಂಜನಮೂರ್ತಿ ಮಾತನಾಡಿ ಒನಕೆಯಿಂದ ಶತ್ರುಗಳನ್ನು ಸದೆಬಡಿದು ಐತಿಹಾಸಿಕ ಚಿತ್ರದುರ್ಗದ ಕೋಟೆಯನ್ನು ರಕ್ಷಿಸಿದ ವೀರವನಿತೆ ಒನಕೆ ಓಬವ್ವಳ ರಾಜ್ಯ ಮಟ್ಟದ ಜಯಂತ್ಯುತ್ಸವವನ್ನು ಡಿ. 30 ರಂದು ನಗರದ ಹಳೆ ಮಾಧ್ಯಮಿಕ ಶಾಲೆ ಆವರಣದಲ್ಲಿ ನಡೆಸಲಾಗುವುದು. ಬೆಳಿಗ್ಗೆ ಹೊಳಲ್ಕೆರೆ ರಸ್ತೆಯ ಕನಕ ವೃತ್ತದಿಂದ ವಿವಿಧ ಜಾನಪದ ಕಲಾ ತಂಡಗಳ ಮೆರವಣಿಗೆ ಆರಂಭವಾಗಲಿದೆ. 

ಎಲ್ಲರನ್ನೂ ಒಗ್ಗೂಡಿಸುವ ಉದ್ದೇಶದಿಂದ ಒನಕೆ ಓಬವ್ವ ಜಯಂತಿ ಆಚರಿಸುತ್ತಿದ್ದೇವೆ. ಉಪಮುಖ್ಯಮಂತ್ರಿ ಡಾ| ಜಿ. ಪರಮೇಶ್ವರ್‌ ಸೇರಿದಂತೆ ಛಲವಾದಿ ಸಮುದಾಯದ ಅನೇಕ ನಾಯಕರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

ಈ ಹಿಂದೆ 2007ರಲ್ಲಿ ರಾಜ್ಯ ಮಟ್ಟದ ಒನಕೆ ಓಬವ್ವ ಜಯಂತಿಯನ್ನು ಚಿತ್ರದುರ್ಗದಲ್ಲೇ ಆಚರಿಸಿದ್ದೆವು. ಇನ್ನು ಮುಂದೆ ಪ್ರತಿ ವರ್ಷ ಸರ್ಕಾರವೇ ಒನಕೆ ಓಬವ್ವ ಜಯಂತಿಯನ್ನು ಆಚರಿಸಲಿ ಎಂಬುದು ನಮ್ಮ ಬೇಡಿಕೆ ಎಂದರು.

ಛಲವಾದಿ ಗುರುಪೀಠ ಟ್ರಸ್ಟ್‌ ಅಧ್ಯಕ್ಷ ಎನ್‌. ಲಕ್ಷ್ಮೀನರಸಯ್ಯ ಮಾತನಾಡಿದರು. ಶಾರದ ಬ್ರಾಸ್‌ ಬ್ಯಾಂಡ್‌ನ‌ ಎಸ್‌.ವಿ.
ಗುರುಮೂರ್ತಿ, ಮುಖಂಡರಾದ ಎಸ್‌.ಎನ್‌. ರವಿಕುಮಾರ್‌, ಎಸ್‌.ಎಚ್‌.ಪರಮೇಶ್‌, ಪ್ರೊ| ಡಿ.ಎಚ್‌.ನಟರಾಜ್‌, ತಿಪ್ಪೇಸ್ವಾಮಿ ಸುದ್ದಿಗೋಷ್ಠಿಯಲ್ಲಿದ್ದರು. 

ಟಾಪ್ ನ್ಯೂಸ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.