ಭೂಸ್ವಾಧೀನ ಕಾಯ್ದೆ ತಿದ್ದುಪಡಿಗೆ ಆಕ್ರೋಶ

•ಬಂಡವಾಳಶಾಹಿಗಳ ಪರವಾಗಿರುವ ಕಾಯ್ದೆ ತಿದ್ದುಪಡಿ ಕೈಬಿಡಲು ಅನ್ನದಾತರ ಆಗ್ರಹ

Team Udayavani, Jun 11, 2019, 9:05 AM IST

cd-tdy-1..

ಚಿತ್ರದುರ್ಗ: ಭೂಸ್ವಾಧೀನ ಕಾಯ್ದೆ ತಿದ್ದುಪಡಿ ವಿರೋಧಿಸಿ ಗುಡ್ಡದರಂಗವ್ವನಹಳ್ಳಿ ಸಮೀಪದ ರಾಷ್ಟ್ರೀಯ ಹೆದ್ದಾರಿ-13ರಲ್ಲಿ ರೈತರು ರಸ್ತೆ ತಡೆ ನಡೆಸಿದರು.

ಚಿತ್ರದುರ್ಗ: ಭೂಸ್ವಾಧೀನ ಕಾಯ್ದೆ ತಿದ್ದುಪಡಿ ವಿರೋಧಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಸೋಮವಾರ ರಾಷ್ಟ್ರೀಯ ಹೆದ್ದಾರಿ ರಸ್ತೆ ತಡೆಗಟ್ಟಿ ಪ್ರತಿಭಟನೆ ನಡೆಸಲಾಯಿತು.

ಚಿತ್ರದುರ್ಗ ತಾಲೂಕಿನ ಗುಡ್ಡದರಂಗವ್ವನಹಳ್ಳಿ ಸಮೀಪದ ರಾಷ್ಟ್ರೀಯ ಹೆದ್ದಾರಿ-13ರಲ್ಲಿ ಭಾರೀ ಸಂಖ್ಯೆಯಲ್ಲಿ ಸೇರಿದ್ದ ರೈತರು, ಕೇಂದ್ರ ಸರ್ಕಾರದ 2013ರ ಭೂಸ್ವಾಧಿಧೀನ ಕಾಯ್ದೆ ತಿದ್ದುಪಡಿ ಮಸೂದೆಗೆ ತಿದ್ದುಪಡಿ ಮಾಡಲಾಗಿದೆ. ಕೂಡಲೇ ಆ ಮಸೂದೆಯನ್ನು ವಾಪಸ್‌ ಪಡೆಯಬೇಕು ಎಂದು ಆಗ್ರಹಿಸಿದರು.

ರೈತರ ಅನುಮತಿ ಇಲ್ಲದೆ ಫಲವತ್ತಾದ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವ ರೈತ ವಿರೋಧಿ ಮಸೂದೆಯಾಗಿದೆ. ರೈತರು ಮತ್ತು ಜನಪರ ಸಂಘಟನೆಗಳ ಹೋರಾಟದ ಫಲವಾಗಿ 1894ರ ಭೂಸ್ವಾಧಿಧೀನ ಕಾಯ್ದೆಯನ್ನು ರದ್ದುಪಡಿಸಿ 2013ರಲ್ಲಿ ಹೊಸ ಕಾಯ್ದೆಯನ್ನು ರೂಪಿಸಲಾಯಿತು. ಇದರಲ್ಲಿ ಒಂದಷ್ಟು ಸಮಾಧಾನಕರವಾದ ಅಂಶಗಳಿದ್ದವು. ಆದರೆ ಈ ಮಸೂದೆಯಲ್ಲಿನ ಮೂಲ ಉದ್ದೇಶಕ್ಕೆ ವಿರುದ್ಧವಾಗಿ ಕೆಲವು ತಿದ್ದುಪಡಿ ತರಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮುಂದಾದಾಗ ಅದರ ವಿರುದ್ಧ ವಿರೋಧ ವ್ಯಕ್ತವಾಗಿತ್ತು. ಜತೆಗೆ ಎರಡು ಬಾರಿ ಮೇಲ್ಮನೆಯಲ್ಲಿ ಬಿಲ್ ಮಂಡನೆಯಾಗದ ಹಿನ್ನೆಲೆಯಲ್ಲಿ ತಿದ್ದುಪಡಿ ಸಾಧ್ಯವಾಗಲಿಲ್ಲ. ಆದರೆ ಆಯಾ ರಾಜ್ಯ ಸರ್ಕಾರಗಳಿಗೆ ತಿದ್ದುಪಡಿ ಮಾಡಲು ಅವಕಾಶ ಕಲ್ಪಿಸಿದ ಹಿನ್ನೆಲೆಯಲ್ಲಿ ಕರ್ನಾಟಕ 2013ರ ಕಾಯ್ದೆಗೆ ಇತ್ತೀಚಿಗೆ ನಡೆದ ವಿಧಾನ ಮಂಡಲ ಅಧಿವೇಶನದದಲ್ಲಿ ತಿದ್ದುಪಡಿ ಬಿಲ್ ಮಂಡಿಸಿ ಚರ್ಚೆಯೇ ಇಲ್ಲದೆ ಅಂಗೀಕಾರ ಪಡೆದು ರಾಜ್ಯಪಾಲರ ಸಹಿಗೆ ಕಳುಹಿಸಲಾಗಿದೆ. ಈ ತಿದ್ದುಪಡಿ ಬಿಲ್ 2013ರ ಕಾಯ್ದೆಯ ಮೂಲ ಉದ್ದೇಶಕ್ಕೆ ವ್ಯತಿರಿಕ್ತವಾಗಿದೆ. ಈಗ ತಿದ್ದುಪಡಿಗೆ ಮುಂದಾಗಿರುವ ರಾಜ್ಯ ಸರ್ಕಾರ ಕ್ರಮ ಖಂಡನೀಯ. ಇದು ಬ್ರಿಟಿಷರು ರೂಪಿಸಿದ್ದ ಕಾಯ್ದೆಯ ಮುಂದುವರೆದ ಭಾಗವಾಗಿದ್ದು ಬಂಡವಾಳಶಾಹಿಗಳ ಪರವಾಗಿದೆ. ಆದ್ದರಿಂದ ಕೂಡಲೇ ತಿದ್ದುಪಡಿ ಕಾಯ್ದೆ ಆದೇಶ ವಾಪಸ್‌ ಪಡೆಯಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಬೆಳೆ ವಿಮೆ ಪರಿಹಾರ, ಇನ್‌ಪುಟ್ ಸಬ್ಸಿಡಿ ಹಣವನ್ನು ಕೂಡಲೇ ರೈತರ ಖಾತೆಗಳಿಗೆ ಜಮಾ ಮಾಡಬೇಕು. ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಕಾನೂನು ಮೀರಿ ವಂತಿಕೆ ವಸೂಲಿ ಮಾಡುತ್ತಿದ್ದು ಅದಕ್ಕೆ ಕಡಿವಾಣ ಹಾಕುವಲ್ಲಿ ಜಿಲ್ಲಾಡಳಿತ ಸಂಪೂರ್ಣ ವಿಫಲವಾಗಿದೆ. ಕೂಡಲೇ ಅಕ್ರಮವಾಗಿ ವಸೂಲಿ ಮಾಡಿರುವ ವಂತಿಕೆಯನ್ನು ವಾಪಸ್‌ ಕೊಡಿಸಬೇಕು ಎಂದರು.

ಭದ್ರಾ ಮೇಲ್ದಂಡೆ ಯೋಜನೆಯನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಿ ಜಿಲ್ಲೆಯ ರೈತರನ್ನು ರಕ್ಷಿಸಬೇಕು. ಅಕ್ರಮ-ಸಕ್ರಮ ಯೋಜನೆಯಡಿ ಹಣ ಕಟ್ಟಿರುವ ರೈತರಿಗೆ ವಿದ್ಯುತ್‌ ಕಂಬ, ವಿದ್ಯುತ್‌ ಪರಿವರ್ತಕ ಅಳವಡಿಸಿ ಮೂಲ ಸೌಲಭ್ಯ ಕಲ್ಪಿಸಬೇಕು. ಜಿಲ್ಲೆ ಕಳೆದ ಹತ್ತು ವರ್ಷಗಳಿಂದ ಸತತ ಬರಕ್ಕೆ ತುತ್ತಾಗುತ್ತಿದೆ. ಈ ಜಿಲ್ಲೆಯನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ದತ್ತು ಪಡೆದು ವಿಶೇಷ ಪ್ಯಾಕೇಜ್‌ ಘೋಷಣೆ ಮಾಡಿ ರೈತರನ್ನು ಉಳಿಸಬೇಕು ಎಂದು ಆಗ್ರಹಿಸಿದರು.

ಪ್ರಧಾನಮಂತ್ರಿಗಳ ಫಸಲ್ ಬಿಮಾ ಯೋಜನೆ ಮೂಲಕ ಸರ್ಕಾರ ವಿಮಾ ಕಂಪನಿಗಳಿಗೆ ರತ್ನಗಂಬಳಿ ಹಾಸಿದೆ. ಇದು ರೈತರಿಗೆ ಅದರಲ್ಲೂ ಸತತ ಬರಕ್ಕೆ ತುತ್ತಾಗುವ ಚಿತ್ರದುರ್ಗ ಜಿಲ್ಲೆಯ ರೈತರಿಗೆ ಮಾರಕವಾಗಿದೆ. ಐದು ವರ್ಷಗಳ ಸರಾಸರಿ ಇಳುವರಿಯನ್ನು ಲೆಕ್ಕ ಹಾಕಿ ಬೆಳೆ ವಿಮೆ ನೀಡುವುದರಿಂದ ಭಾರೀ ಅನ್ಯಾಯ ಆಗುತ್ತಿದೆ. ಕಳೆದ ಹತ್ತು ವರ್ಷಗಳಿಂದ ಮಳೆ ಬೀಳದೆ ತೀವ್ರ ಬರ ಆವರಿಸಿದ್ದು ಉಳುವರಿ ಶೂನ್ಯವಾಗಿದೆ. ಇಂತಹ ಸಂದರ್ಭದಲ್ಲಿ ಐದು ವರ್ಷಗಳ ಇಳುವರಿ ಲೆಕ್ಕಾಚಾರ ಅವೈಜ್ಞಾನಿಕವಾಗಿದ್ದು ಚಿತ್ರದುರ್ಗ ಜಿಲ್ಲೆಗೆ ಪ್ರತ್ಯೇಕ ಬೆಳೆ ವಿಮೆ ನಿಯಯಗಳನ್ನು ರೂಪಿಸಬೇಕು ಎಂದು ತಿಳಿಸಿದರು. ಪ್ರತಿಭಟನೆಯಲ್ಲಿ ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಈಚಘಟ್ಟ ಸಿದ್ದವೀರಪ್ಪ, ಜಿಲ್ಲಾಧ್ಯಕ್ಷ ರೆಡ್ಡಿಹಳ್ಳಿ ವೀರಣ್ಣ, ಪ್ರಧಾನ ಕಾರ್ಯದರ್ಶಿ ದೊಡ್ಡಸಿದ್ದವ್ವನಹಳ್ಳಿ ಮಲ್ಲಿಕಾರ್ಜುನ ಹಾಗೂ ನೂರಾರು ರೈತರು ಭಾಗವಹಿಸಿದ್ದರು.

ಟಾಪ್ ನ್ಯೂಸ್

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.