ಬಿಜೆಪಿ ಸರ್ಕಾರದಿಂದ ಜನರಿಗೆ ಭ್ರಮನಿರಸನ

ಜೆಡಿಎಸ್‌-ಬಿಜೆಪಿ ಮುಖಂಡರು ಬೇಷರತ್‌ ಆಗಿ ಕಾಂಗ್ರೆಸ್‌ಗೆ ಸೇರ್ಪಡೆ: ಶಾಸಕ ಟಿ. ರಘುಮೂರ್ತಿ

Team Udayavani, May 3, 2022, 3:56 PM IST

bjp

ಚಳ್ಳಕೆರೆ: ರಾಜ್ಯದಲ್ಲಿ ಬೆಲೆ ಏರಿಕೆ ನಿಯಂತ್ರಣ ಸೇರಿದಂತೆ ಎಲ್ಲಾ ರಂಗದಲ್ಲೂ ಆಡಳಿತ ಪಕ್ಷ ಬಿಜೆಪಿ ವಿಫಲವಾಗಿದೆ. ಹಾಗಾಗಿ ಬಿಜೆಪಿಯ ಹಲವಾರು ಕಾರ್ಯಕರ್ತರು, ಮುಖಂಡರು ಬೇಷರತ್ತಾಗಿ ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದಾರೆ. ಅಲ್ಲದೆ ಜೆಡಿಎಸ್‌ ಬೆಂಬಲಿತ ಗ್ರಾಮ ಪಂಚಾಯಿತಿ ಸದಸ್ಯರೂ ಸಹ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ರವರ ಕಾರ್ಯವೈಖರಿ ಮೆಚ್ಚಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ ಎಂದು ಶಾಸಕ ಟಿ. ರಘುಮೂರ್ತಿ ತಿಳಿಸಿದರು.

ಪರಶುರಾಂಪುರದಲ್ಲಿ ಕಾಂಗ್ರೆಸ್‌ಗೆ ಸೇರ್ಪಡೆಯಾದ ಬಿಜೆಪಿ ಮತ್ತು ಜೆಡಿಎಸ್‌ ಮುಖಂಡರು ಹಾಗೂ ಕಾರ್ಯಕರ್ತರನ್ನು ಸ್ವಾಗತಿಸಿ ಅವರು ಮಾತನಾಡಿದರು. ಕಾಂಗ್ರೆಸ್‌ ಪಕ್ಷ ರಾಷ್ಟ್ರ ಹಾಗೂ ರಾಜ್ಯದಲ್ಲಿ ಬಡವರು, ದೀನ ದಲಿತರು, ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ವರ್ಗ, ಹಿಂದುಳಿದ ವರ್ಗಗಳ ಪರವಾಗಿ ಕಾರ್ಯ ನಿರ್ವಹಿಸುತ್ತಿದೆ. ಕಾಂಗ್ರೆಸ್‌ ಪಕ್ಷದ ಆಡಳಿತ ಇದ್ದಾಗ ಬೆಲೆ ಏರಿಕೆಯನ್ನು ಸಂಪೂರ್ಣವಾಗಿ ನಿಯಂತ್ರಿಸಲಾಗಿತ್ತು. ಆದರೆ ಇತ್ತೀಚೆಗೆ ಪ್ರತಿನಿತ್ಯ ಬೆಲೆ ಏರಿಕೆಯೇ ಪ್ರಧಾನ ವಿಷಯವಾಗಿಬಿಟ್ಟಿದೆ ಎಂದು ದೂರಿದರು.

ಜೆಡಿಎಸ್‌ ಬೆಂಬಲಿತ ಗ್ರಾಪಂ ಸದಸ್ಯ ಶ್ರೀನಿವಾಸ್‌ ಮಾತನಾಡಿ, ಕಳೆದ 9 ವರ್ಷಗಳಿಂದ ಶಾಸಕ ಟಿ. ರಘುಮೂರ್ತಿ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ನಡೆಸಿದ್ದಾರೆ. ಎಲ್ಲಾ ವರ್ಗದ ಜನರ ಹಿತಕ್ಕೆ ದುಡಿದಿದ್ದಾರೆ. ಮುಂಬರುವ ಚುನಾವಣೆಯಲ್ಲೂ ಅವರ ಗೆಲುವಿನ ಅಗತ್ಯವಿದೆ ಎಂದರು.

ಜೆಡಿಎಸ್‌ ಬೆಂಬಲಿತ ಗ್ರಾಪಂ ಸದಸ್ಯರಾದ ಹನುಮಕ್ಕ, ರಂಗಮ್ಮ, ಹನುಮಂತರಾಯ, ನಾಗರಾಜು, ಬಿಜೆಪಿ ಮುಖಂಡರಾದ ರುದ್ರೇಶ್‌, ಪ್ರಕಾಶ್‌, ಸಿದ್ದೇಶ್‌, ಚಿಕ್ಕಣ್ಣ, ಪ್ರಹ್ಲಾದ್‌, ಈರಣ್ಣ, ಅಂಜನಮೂರ್ತಿ, ಹನುಮಂತಪ್ಪ, ವೀರೇಶ್‌, ಶರಣಪ್ಪ, ಬಿ. ರಾಮಾಂಜನೇಯ ಮೊದಲಾದವರು ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾದರು. ಪರಶುರಾಂಪುರ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಅನಿತಾ ವೆಂಕಟೇಶ್‌, ಕಾಂಗ್ರೆಸ್‌ ಮುಖಂಡರಾದ ಚನ್ನಕೇಶವ, ಚೌಳೂರು ಪ್ರಕಾಶ್‌, ನಿಜಲಿಂಗಪ್ಪ, ಯುವ ಕಾಂಗ್ರೆಸ್‌ ಅಧ್ಯಕ್ಷ ಸಿ.ಎಂ. ಶಿವಕುಮಾರಸ್ವಾಮಿ, ಪರಶುರಾಂಪುರ ಯುವ ಕಾಂಗ್ರೆಸ್‌ ಘಟಕದ ಅಧ್ಯಕ್ಷ ಬಾಬು, ದೊಡ್ಡರಂಗಪ್ಪ, ನಗರಸಭಾ ಸದಸ್ಯ ಬಿ.ಟಿ. ರಮೇಶ್‌ ಗೌಡ ಮುಂತಾದವರು ಉಪಸ್ಥಿತರಿದ್ದರು.

ಕಾಂಗ್ರೆಸ್‌ ಪಕ್ಷದ ಆಡಳಿತ ಇದ್ದಾಗ ಬೆಲೆ ಏರಿಕೆಯನ್ನು ಸಂಪೂರ್ಣವಾಗಿ ನಿಯಂತ್ರಿಸಲಾಗಿತ್ತು. ಆದರೆ ಇತ್ತೀಚೆಗೆ ಪ್ರತಿನಿತ್ಯ ಬೆಲೆ ಏರಿಕೆಯೇ ಪ್ರಧಾನ ವಿಷಯವಾಗಿರುವುದು ದುರಂತ. -ಟಿ. ರಘುಮೂರ್ತಿ, ಶಾಸಕರು

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.