ಲೋಪವಾಗದಂತೆ ಸರ್ವೇ ಕಾರ್ಯ ನಿರ್ವಹಿಸಿ: ವೆಂಕಟೇಶಯ್ಯ

ಆರೋಗ್ಯ ಇಲಾಖೆ ಸಿಬ್ಬಂದಿ-ಆಶಾ ಕಾರ್ಯಕರ್ತೆಯರಿಗೆ ಚಿತ್ರದುರ್ಗ ತಹಶೀಲ್ದಾರ್‌ ಸೂಚನೆ

Team Udayavani, Jun 30, 2020, 11:29 AM IST

ಲೋಪವಾಗದಂತೆ ಸರ್ವೇ ಕಾರ್ಯ ನಿರ್ವಹಿಸಿ: ವೆಂಕಟೇಶಯ್ಯ

ಚಿತ್ರದುರ್ಗ: ತಾಪಂ ಸಭಾಂಗಣದಲ್ಲಿ ಮನೆ ಮನೆ ಸರ್ವೇ ತರಬೇತಿ ಕಾರ್ಯಾಗಾರ ನಡೆಯಿತು.

ಚಿತ್ರದುರ್ಗ: ಕೋವಿಡ್ ಹಾವಳಿಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಮನೆ ಮನೆ ಸರ್ವೇ ಕಾರ್ಯ ನಡೆಸುತ್ತಿದ್ದು, ಸರ್ವೆಯಲ್ಲಿ ತೊಡಗುವ ಸಿಬ್ಬಂದಿ ಯಾವುದೇ ಲೋಪವಾಗದಂತೆ ಗಮನಹರಿಸಬೇಕು ಎಂದು ತಹಶೀಲ್ದಾರ್‌ ಜೆ.ಸಿ. ವೆಂಕಟೇಶಯ್ಯ ಹೇಳಿದರು.

ಐಎಲ್‌ಐ, ಸಾರಿ ಪ್ರಕರಣಗಳಿಗೆ ಸಂಬಂಧಿಸಿ ಮನೆ ಮನೆ ಸಮೀಕ್ಷೆ ಕುರಿತು ಕಂದಾಯ, ಆರೋಗ್ಯ ಇಲಾಖೆ ಹಾಗೂ ನಗರಸಭೆ ಸಹಯೋಗದಲ್ಲಿ ತಾಪಂ ಸಭಾಂಗಣದಲ್ಲಿ
ಸೋಮವಾರ ಹಮ್ಮಿಕೊಂಡಿದ್ದ ತರಬೇತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. ಸಮೀಕ್ಷೆ ವೇಳೆ ಯಾವುದೇ ಮನೆ ಅಥವಾ ಮನೆಯ ಸದಸ್ಯ ಸಮೀಕ್ಷೆಯಿಂದ ತಪ್ಪಿಸಿಕೊಳ್ಳದಂತೆ ಎಚ್ಚರವಹಿಸಬೇಕು. ಕಂದಾಯ ಇಲಾಖೆಯ ಗ್ರಾಮಲೆಕ್ಕಿಗರು, ಆರೋಗ್ಯ ಇಲಾಖೆಯ ಆಶಾ ಕಾರ್ಯಕರ್ತೆಯರು ಹಾಗೂ ನಗರಸಭೆಯ ಆರೋಗ್ಯ ನಿರೀಕ್ಷಕರು ಸರ್ವೇಯಲ್ಲಿ ಭಾಗವಹಿಸಲಿದ್ದಾರೆ. ನಗರದಲ್ಲಿ ಒಟ್ಟು 36 ವಾರ್ಡ್‌ಗಳಿದ್ದು, 27,609 ಮನೆಗಳಿವೆ. 1,61,161 ಜನಸಂಖ್ಯೆ ಇದೆ. ಈ ಸಮೀಕ್ಷಾ ಕಾರ್ಯಕ್ಕೆ ಮೂರು ಇಲಾಖೆಗಳಿಂದ ತಲಾ 35
ಸಿಬ್ಬಂದಿಯಂತೆ ಒಟ್ಟು 105 ಜನ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಪ್ರತಿ ಮೂರು ಜನ ತಂಡ ಮಾಡಿಕೊಂಡು ಸಮೀಕ್ಷೆ ಕಾರ್ಯ ನಡೆಸಬೇಕೆಂದು ಸೂಚಿಸಿದರು.

ಚಿತ್ರದುರ್ಗ ತಾಲೂಕು ಆರೋಗ್ಯಾಧಿಕಾರಿ ಡಾ| ಬಿ.ವಿ.ಗಿರೀಶ್‌ ಮಾತನಾಡಿ, ನಗರದಲ್ಲಿ  ನಡೆಸಲು ಉದ್ದೇಶಿಸಿರುವ ಐಎಲ್‌ಐ ಹಾಗೂ ಸಾರಿ ಸಂಬಂಸಿದ ಸರ್ವೆಯನ್ನು 12 ದಿನಗಳ
ಒಳಗಾಗಿ ಪೂರ್ಣಗೊಳಿಸಬೇಕು. ಇದಕ್ಕಾಗಿ ಆರೋಗ್ಯ ಇಲಾಖೆ, ಕಂದಾಯ ಇಲಾಖೆ ಹಾಗೂ ನಗರಸಭೆ ಸಿಬ್ಬಂದಿಯನ್ನು ನಿಯೋಜಿಸಲಾಗುತ್ತಿದೆ. ಮೂರು ಇಲಾಖೆಗಳಿಂದ ತಲಾ ಒಬ್ಬೊಬ್ಬರಂತೆ ಮೂರು ಜನರ ತಂಡ ಮಾಡಿ ಸರ್ವೆ ಕಾರ್ಯ ನಡೆಸಲಾಗುವುದು. ಪ್ರತಿ ಮೂರು ಜನರ ತಂಡ ಪ್ರತಿದಿನ 90 ಮನೆಗಳ ಸರ್ವೇ ಮಾಡಬೇಕು
ಎಂದು ತಿಳಿಸಿದರು.

ಸರ್ವೇ ಮಾಡುವ ಮನೆಯ ಸದಸ್ಯರ ದೇಹದ ಉಷ್ಣಾಂಶವನ್ನು ಪರಿಶೀಲಿಸಬೇಕು. 38 ಡಿಗ್ರಿಗಿಂತ ಅಧಿಕ ಇದ್ದರೆ ಅದನ್ನು ಜ್ವರ ಎಂದು ಪರಿಗಣಿಸಬೇಕು. ಹತ್ತು ದಿನಗಳಿಂದ ಕೆಮ್ಮು,
ನೆಗಡಿ ಇದ್ದಲ್ಲಿ ಅಂತಹ ಸದಸ್ಯರ ಹೆಸರುಗಳನ್ನು ಐಎಲ್‌ಐ ಪ್ರಕರಣಗಳೆಂದು ನಮೂದಿಸಬೇಕು. ಇದಕ್ಕಿಂತ ತೀವ್ರ ಪ್ರಮಾಣದ ಜ್ವರ, ಶೀತ, ಕೆಮ್ಮು ಇದ್ದಲ್ಲಿ ಅದನ್ನು ಸಾರಿ (ಎಸ್‌ಎಆರ್‌ಐ) ಎಂದು ಪರಿಗಣಿಸಬೇಕು. ಅಂತಹ ವ್ಯಕ್ತಿಗಳಿಗೆ ಆಸ್ಪತ್ರೆಗೆ ದಾಖಲಾಗುವಂತೆ ಸಲಹೆ ನೀಡಬೇಕು ಎಂದರು. ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಮಂಜುನಾಥ್‌, ಕಂದಾಯ ಇಲಾಖೆಯ
ಶರಣಬಸವೇಶ್ವರ, ನಗರಸಭೆ ಪರಿಸರ ಇಂಜಿನಿಯರ್‌ ಜಾಫರ್‌ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.