ಹುತಾತ್ಮ ಪೊಲೀಸ್‌ ಕುಟುಂಬಗಳಿಗೆ ಆಸರೆಯಾಗಿ

Team Udayavani, Oct 22, 2020, 6:09 PM IST

cd-tdy-1

ಚಿತ್ರದುರ್ಗ: ಪೊಲೀಸರು ಕರ್ತವ್ಯ ನಿರ್ವಹಿಸುತ್ತಲೇ ಬಲಿದಾನ ಮಾಡಿದಾಗ ಸರ್ಕಾರ ಹಾಗೂ ಸಮಾಜ ಅಂಥವರ ಕುಟುಂಬಗಳಿಗೆ ಆಸರೆಯಾಗಿ ನಿಲ್ಲಬೇಕು. ಅವರಿಗೆ ಸಿಗಬೇಕಾದ ಎಲ್ಲಾ ಸೌಲಭ್ಯಗಳನ್ನು ತಲುಪಿಸಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಮನಗೂಳಿ ಪ್ರೇಮಾವತಿ ಎಂ. ಕರೆ ನೀಡಿದರು.

ನಗರದ ಸಶಸ್ತ್ರ ಮೀಸಲು ಪಡೆ ಆವರಣದಲ್ಲಿರುವ ಹುತಾತ್ಮ ಪೊಲೀಸ್‌ ಸ್ಮಾರಕದ ಬಳಿ ಬುಧವಾರ ನಡೆದ ಪೊಲೀಸ್‌ ಹುತಾತ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕೋವಿಡ್‌-19 ಸಂದರ್ಭದಲ್ಲಿ ಪೊಲೀಸರು ಮನೆಗಳಿಗೂ ಹೋಗದೆ ಜೀವದ ಹಂಗು ತೊರೆದು ಕರ್ತವ್ಯ ನಿರ್ವಹಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸರ್ಕಾರ ಹುತಾತ್ಮರಾದ ಪೊಲೀಸರಕುಟುಂಬದ ಹಿತ ಕಾಯುವ ಕೆಲಸ ಮಾಡಬೇಕು. ಸಮಾಜ ಕೂಡ ಅವರಿಗೆ ಬೆಂಬಲವಾಗಿರಬೇಕು. ಕರ್ತವ್ಯದಲ್ಲಿರುವ ಎಲ್ಲ ಪೊಲೀಸರಿಗೂ ಸರ್ಕಾರ ಅಗತ್ಯವಾದ ಎಲ್ಲ ಸೌಲಭ್ಯಗಳನ್ನು ಒದಗಿಸಬೇಕು ಎಂದು ಒತ್ತಾಯಿಸಿದರು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಜಿ. ರಾಧಿಕಾ ಮಾತನಾಡಿ, 1959ರಲ್ಲಿ ನಡೆದ ಚೀನಾ ಸೈನಿಕರ ಜತೆಗಿನ ಕಾಳಗದಲ್ಲಿ ಹುತಾತ್ಮರಾದ ಹತ್ತು ಸೈನಿಕರ ಸ್ಮರಣೆಯೊಂದಿಗೆ ಹುತಾತ್ಮರ ದಿನಾಚರಣೆ ಆರಂಭವಾಗಿದೆ. ದೇಶಾದ್ಯಂತ ಆಯಾ ವರ್ಷದಲ್ಲಿ ಹುತಾತ್ಮರಾದ ಪೊಲೀಸರ ಸ್ಮರಣೆ ಮಾಡುವ ಮೂಲಕ ಅವರ ಕರ್ತವ್ಯ ಹಾಗೂ ಬಲಿದಾನವನ್ನು ಸ್ಮರಿಸುತ್ತಿದ್ದೇವೆ ಎಂದರು.

2019ರ ನವೆಂಬರ್‌ನಿಂದ ಈವರೆಗೆ ದೇಶಾದ್ಯಂತ 264 ಪೊಲೀಸರು ಹುತಾತ್ಮರಾಗಿದ್ದಾರೆ. ಇದರಲ್ಲಿ ಕರ್ನಾಟಕದ 17 ಪೊಲೀಸ್‌ ಸಿಬ್ಬಂದಿ ಹಾಗೂ ಅಧಿಕಾರಿಗಳು ಸೇರಿದ್ದಾರೆ ಎಂದು ತಿಳಿಸಿ ಹುತಾತ್ಮರಾದ ಎಲ್ಲರನ್ನೂ ಸ್ಮರಿಸಿದರು. ಕಾರ್ಯಕ್ರಮದಲ್ಲಿ ಐಮಂಗಲ ಪೊಲೀಸ್‌ ತರಬೇತಿ ಶಾಲೆಯ ವರಿಷ್ಠಾಧಿಕಾರಿ ಪಾಪಣ್ಣ, ಹೆಚ್ಚುವರಿ

ಪೊಲೀಸ್‌ ಅಧೀಕ್ಷಕ ಮಹಾನಿಂಗ ಬಿ. ನಂದಗಾವಿ, ಡಿವೈಎಸ್ಪಿಗಳಾದ ಪಾಂಡುರಂಗಪ್ಪ, ರೋಷನ್‌ ಜಮೀರ್‌, ತಿಪ್ಪೇಸ್ವಾಮಿ, ರಮೇಶ್‌, ಸಿಪಿಐಗಳಾದ ಫೈಜುಲ್ಲಾ, ನಯೀಮ್‌ ಅಹಮ್ಮದ್‌, ಪ್ರಕಾಶ್‌, ಜಿಲ್ಲಾ ಕಾಂಗ್ರೆಸ್‌ ಮಾಜಿ ಅಧ್ಯಕ್ಷ ಫಾತ್ಯರಾಜನ್‌ ಮೊದಲಾದವರು ಭಾಗವಹಿಸಿದ್ದರು.

ಪೊಲೀಸ್‌ ಹುದ್ದೆ ಅತ್ಯಂತ ಸವಾಲಿನಿಂದ ಕೂಡಿದೆ. ಸೈನಿಕರು ಗಡಿಯಲ್ಲಿದ್ದುದೇಶ ರಕ್ಷಣೆ ಮಾಡಿದರೆ, ಪೊಲೀಸರುದೇಶದೊಳಗಿದ್ದು ಕಾನೂನು ಸುವ್ಯವಸ್ಥೆ ಕಾಪಾಡುತ್ತಾರೆ. ತಮ್ಮ ಕುಟುಂಬದ ಹಿತ ಬಲಿ ಕೊಟ್ಟು ಸಮಾಜದ ಹಿತಾಸಕ್ತಿಗಾಗಿ ಕೆಲಸ ಮಾಡುತ್ತಾರೆ. ನಾವೆಲ್ಲರೂ ಹಬ್ಬದ ಸಂಭ್ರಮದಲ್ಲಿದ್ದರೆ ಪೊಲೀಸರು ಮಾತ್ರ ರಸ್ತೆಯಲ್ಲಿ ನಿಂತು ಬಂದೋಬಸ್ತ್ ನೋಡಿಕೊಳ್ಳುತ್ತಿರುತ್ತಾರೆ. -ಮನಗೂಳಿ ಪ್ರೇಮಾವತಿ ಎಂ. ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು

ಟಾಪ್ ನ್ಯೂಸ್

IPL; To win the RCB Cup first….: What did Robin Uthappa say?

IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

8

Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Nalkane Ayama Movie Review

Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!

IPL; To win the RCB Cup first….: What did Robin Uthappa say?

IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

B. Y. Raghavendra: “ಕಾಂಗ್ರೆಸ್‌ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’

B. Y. Raghavendra: “ಕಾಂಗ್ರೆಸ್‌ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.