ಬೆಳೆ ಹಾನಿಗೆ ಶೀಘ್ರ ವಿಮೆ ಪರಿಹಾರ ನೀಡಿ

Team Udayavani, Oct 28, 2020, 5:56 PM IST

ಬೆಳೆ ಹಾನಿಗೆ ಶೀಘ್ರ ವಿಮೆ ಪರಿಹಾರ ನೀಡಿ

ಚಿತ್ರದುರ್ಗ: ಅಕಾಲಿಕ ಮಳೆಯಿಂದ ಬೆಳೆ ಹಾನಿಯಾಗಿದ್ದು, ವಿಮೆ ಮಾಡಿಸಿರುವ ರೈತರಿಗೆ ವಿಮಾ ಕಂಪನಿಗಳು ಸ್ಪಂದಿಸಿ ಸೂಕ್ತ ಪರಿಹಾರ ನೀಡಬೇಕು ಎಂದು ಜಿಲ್ಲಾ ಧಿಕಾರಿ ಕವಿತಾ ಎಸ್‌. ಮನ್ನಿಕೇರಿ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್‌ ಬೀಮಾ ಯೋಜನೆ ಕುರಿತು ರೈತರ ಅಹವಾಲು ಆಲಿಸಿ ಮಾತನಾಡಿದರು. ಅಕಾಲಿಕ ಮಳೆಯಿಂದಾಗಿ ಜಿಲ್ಲೆಯಲ್ಲಿ ಶೇ.75ಕ್ಕಿಂತ ಹೆಚ್ಚು ಬೆಳೆ ನಷ್ಟವಾಗಿದ್ದು, ಬೆಳೆ ಸಮೀಕ್ಷೆ ಮಾಡಿಸಬೇಕು. ಶೀಘ್ರದಲ್ಲಿ ರೈತರಿಗೆ ಬೆಳೆವಿಮೆ ಪರಿಹಾರ ಕೊಡಿಸಬೇಕು. ಜೊತೆಗೆ ತುರ್ತಾಗಿ ಶೇಂಗಾ, ರಾಗಿ, ಮೆಕ್ಕೆಜೋಳ ಖರೀದಿ ಕೇಂದ್ರ ತೆರೆಯಬೇಕು ಎಂದು ರೈತ ಮುಖಂಡರು ಆಗ್ರಹಿಸಿದರು.

2016 ರಿಂದ ಈವರೆಗೆ ವಿಮಾ ಕಂಪನಿಗಳು ಸರಿಯಾಗಿ ಪರಿಹಾರ ನೀಡಿಲ್ಲ. ಆಧಾರ್‌ ಕಾರ್ಡ್‌, ಬ್ಯಾಂಕ್‌ ಖಾತೆ ಸರಿಯಿಲ್ಲಎಂದು ವಿಮಾ ಕಂಪನಿಗಳು ಸಬೂಬು ಹೇಳಿರೈತರನ್ನು ಅಲೆದಾಡಿಸುತ್ತಿದ್ದಾರೆ. ಬೆಳೆ ವಿಮೆ ಕಟ್ಟಲು ದಿನಾಂಕ ನಿಗದಿ ಮಾಡುತ್ತಾರೆ. ಅದೇ ರೀತಿಯಾಗಿ ಬೆಳೆ ವಿಮೆ ಪರಿಹಾರ ನೀಡಲು ದಿನಾಂಕ ನಿಗದಿ ಮಾಡಬೇಕು ಎಂದು ರೈತರು ಸಭೆಯ ಗಮನಕ್ಕೆ ತಂದರು. ವಿಮಾ ಕಂಪನಿ ಅಧಿ ಕಾರಿಗಳು ರೈತರಿಗೆ ಸರಿಯಾಗಿ ಮಾಹಿತಿ ನೀಡಬೇಕು. ರೈತರೊಂದಿಗೆ ತಾಳ್ಮೆಯಿಂದ ವರ್ತಿಸಬೇಕು ಎಂದು ಜಿಲ್ಲಾಧಿಕಾರಿ ಕವಿತಾ ಎಸ್‌. ಮನ್ನಿಕೇರಿ ಸೂಚಿಸಿದರು.

ಕೃಷಿ ಇಲಾಖೆ ಜಂಟಿ ನಿರ್ದೇಶಕ ಸದಾಶಿವ ಮಾತನಾಡಿ, 2019-20ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ 76538 ರೈತರು ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್‌ ಬೀಮಾ ಯೋಜನೆಯಡಿ ನೋಂದಾಯಿಸಿದ್ದಾರೆ. ಚಳ್ಳಕೆರೆ ತಾಲ್ಲೂಕಿನಲ್ಲಿ 39 ಗ್ರಾಮ ಪಂಚಾಯಿತಿ, ಹಿರಿಯೂರು ತಾಲೂಕಿನ33 ಗ್ರಾಪಂ, ಚಿತ್ರದುರ್ಗ ತಾಲ್ಲೂಕಿನ 28 ಗ್ರಾಪಂ, ಮೊಳಕಾಲ್ಮುರು ತಾಲ್ಲೂಕಿನ 11 ಗ್ರಾಪಂ ಹಾಗೂ ಹೊಸದುರ್ಗ ತಾಲೂಕಿನ 4 ಹೋಬಳಿಗಳು ಸೇರಿದಂತೆ ಒಟ್ಟು 50577 ಫಲಾನುಭವಿಗಳಿಗೆ ರೂ.7123.08 ಲಕ್ಷಗಳ ವಿಮಾ ಪರಿಹಾರವನ್ನು ಪಾವತಿಸಲಾಗಿದೆ ಎಂದು ತಿಳಿಸಿದರು.

ಇಳುವರಿ ಆಧಾರದ ಮೇಲೆ 459 ಫಲಾನುಭವಿಗಳಿಗೆ ರೂ.61.12 ಲಕ್ಷ ವಿಮಾ ಪರಿಹಾರ ನೀಡಲಾಗಿದೆ. 2019-20ನೇ ಸಾಲಿನ ಹಿಂಗಾರು ಹಂಗಾಮಿಗೆ 16385 ರೈತರು ನೋಂದಣಿ ಮಾಡಿದ್ದು, ವಿಮಾ ಪರಿಹಾರ ಘೋಷಣೆ ಆಗಬೇಕಿದೆ. ಪ್ರಸಕ್ತ 2020-21ನೇ ಸಾಲಿನ ಮುಂಗಾರು ಹಂಗಾಮಿಗೆ 85912 ರೈತರು ಬೆಳೆವಿಮೆ ನೋಂದಣಿ ಮಾಡಿಸಿದ್ದಾರೆ ಎಂದು ಸಭೆಗೆ ಮಾಹಿತಿ ನೀಡಿದರು.

ಪರಿಶೀಲಿಸಿ ಕ್ರಮ: ಬಿತ್ತನೆ ಸಮಯದಲ್ಲಿ ಕಳಪೆ ಈರುಳ್ಳಿ ಬಿತ್ತನೆ ಬೀಜ ವಿತರಿಸಿದ ಮಾರಾಟಗಾರರ ವಿರುದ್ಧ ಯಾವ ಕ್ರಮ ಕೈಗೊಂಡಿದ್ದೀರಾ ಎಂದು ರೈತರು ತೋಟಗಾರಿಕೆ ಇಲಾಖೆ ಉಪನಿರ್ದೇಶಕಿ ಸವಿತಾ ಅವರನ್ನು ಪ್ರಶ್ನಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸವಿತಾ, ಬೀಜಗಳನ್ನು ಪರೀಕ್ಷೆಗಾಗಿ ಕಳುಹಿಸಿದ್ದು, ಬೀಜ ಕಳಪೆ ವರದಿ ಬಂದ ನಂತರ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದರು. ಸಭೆಯಲ್ಲಿ ಪಶುಸಂಗೋಪನಾ ಇಲಾಖೆ ಉಪನಿರ್ದೇಶಕ ಡಾ| ಕೃಷ್ಣಪ್ಪ, ಜಿಲ್ಲಾ ಕೈಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಹನುಮಂತರಾಜು, ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿ ಡಾ| ಓಂಕಾರಪ್ಪ ಹಾಗೂ ಲೀಡ್‌ ಬ್ಯಾಂಕ್‌ ಅಧಿಕಾರಿಗಳು, ವಿಮಾ ಕಂಪನಿ ಅಧಿ ಕಾರಿಗಳು, ರೈತ ಮುಂಖಡರು ಹಾಜರಿದ್ದರು.

ಟಾಪ್ ನ್ಯೂಸ್

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.