ಮಹತ್ವ ಪಡೆದುಕೊಂಡ ರಾಹುಲ್ ಮುರುಘಾ ಮಠ ಭೇಟಿ : 20ಕ್ಕೂ ಹೆಚ್ಚು ಮಠಾಧೀಶರ ಜೊತೆಗೆ ಸಂವಾದ
Team Udayavani, Aug 3, 2022, 11:20 AM IST
ಚಿತ್ರದುರ್ಗ: ಇಲ್ಲಿನ ಐತಿಹಾಸಿಕ ಮುರುಘಾ ಮಠಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭೇಟಿ ನೀಡಿ ಡಾ. ಶ್ರೀಶಿವಮೂರ್ತಿ ಮುರುಘಾ ಶರಣರಿಂದ ಆಶೀರ್ವಾದ ಪಡೆದುಕೊಂಡರು.
ಇದೇ ವೇಳೆ ಮಠದಲ್ಲಿ ಸುಮಾರು 20ಕ್ಕೂ ಹೆಚ್ಚು ಮಠಾಧೀಶರ ಜೊತೆಗೆ ರಾಹುಲ್ ಗಾಂಧಿ ಸಂವಾದ ನಡೆಸಿದರು.
ಇತ್ತೀಚೆಗೆ ಮಾದಾರ ಚನ್ನಯ್ಯ ಗುರುಪೀಠಕ್ಕೆ ಆರೆಸ್ಸೆಸ್ಸ್ ಮುಖ್ಯಸ್ಥ ಮೋಹನ್ ಭಾಗವತ್ ಭೇಟಿ ನೀಡಿ ಅಲ್ಲಿಯೇ ವಾಸ್ತವ್ಯ ಹೂಡಿದ್ದ ಹಿನ್ನೆಲೆಯಲ್ಲಿ ರಾಹುಲ್ ಭೇಟಿ ಮಹತ್ವ ಪಡೆದುಕೊಂಡಿದೆ.
ಕಳೆದ ತಿಂಗಳಷ್ಟೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಕೂಡಾ ಮುರುಘಾ ಮಠಕ್ಕೆ ಭೇಟಿ ನೀಡಿದ್ದನ್ನು ಇಲ್ಲಿ ಸ್ಮರಿಸಬಹುದು. ರಾಹುಲ್ ಭೇಟಿ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ನಾಯಕರು ಇದ್ದರು.