ಉಪ ಚುನಾವಣಾ ಪ್ರಚಾರಕ್ಕೆ ನಾಳೆಯಿಂದಲೇ ಕೈ ಪಡೆ ಸಜ್ಜು: ಕೇಶವರೆಡ್ಡಿ

Team Udayavani, Sep 22, 2019, 11:15 AM IST

ಚಿಕ್ಕಬಳ್ಳಾಪುರ: ಉಪ ಚುನಾವಣೆ ಘೋಷಣೆ ಆಗಿರುವ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಸೋಮವಾರದಿಂದ ಪ್ರತಿ ಗ್ರಾಮಪಂಚಾಯಿತಿವಾರು ಚುನಾವಣಾ ಪ್ರಚಾರ ಸಭೆಗಳನ್ನು ಆಯೋಜಿಸಲಾಗಿದೆ ಎಂದು  ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಎನ್.ಕೇಶವರೆಡ್ಡಿ ತಿಳಿಸಿದರು.

ನಗರದ ಪತ್ರಕರ್ತ ಭವನದಲ್ಲಿ ಭಾನುವಾರ ಸುದ್ದಿಗೋಷ್ಟಿ ನಡೆಸಿದ ಕಾಂಗ್ರೆಸ್ ಮುಖಂಡರು, ಪಕ್ಷಾಂತರ ಮೂಲಕ ಶಾಸಕ ಸುಧಾಕರ್ ಕ್ಷೇತ್ರದ ಮತದಾರರಿಗೆ ಪಕ್ಷಕ್ಕೆ ದ್ರೋಹ ಬಗೆದಿದ್ದಾರೆ. ಚುನಾವಣೆ ಅವಶ್ಯಕತೆ ಇರಲಿಲ್ಲ. ಆದರೆ ಸುಧಾಕರ್  ಬಿಜೆಪಿ ನೀಡಿದ ಹಣ, ಅಧಿಕಾರ ಆಸೆಗೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದರು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಚುನಾವಣೆ ಸ್ವಾಭಿಮಾನ ಪ್ರಶ್ನೆ ಅಗಿದೆ. ಸಾಮೂಹಿಕ ನಾಯಕತ್ವದಲ್ಲಿ ಪಕ್ಷ ಚುನಾವಣೆ ಪ್ರಚಾರ ನಡೆಸಲಿದೆ ಎಂದು ಚುನಾವಣಾ ರಣಕಹಳೆ ಮೊಳಗಿಸಿದರು.

ಸುಧಾಕರ್ ರಾಜೀನಾಮೆ ನೀಡಿರುವುದರಿಂದ ಕ್ಷೇತ್ರದಲ್ಲಿ ಯಾವುದೇ ಅಭಿವೃದ್ಧಿ ಅಗಿಲ್ಲ. ಆದರೇ ಹಿಂದಿನ ಕಾಂಗ್ರೆಸ್ ಸರ್ಕಾರದಲ್ಲಿ ಸಿದ್ದರಾಮಯ್ಯ ಅವರು  ಕೊಟ್ಟ ಅನುದಾನದಿಂದ ಚಿಕ್ಕಬಳ್ಳಾಪುರ ಜಿಲ್ಲೆ ಅಭಿವೃದ್ಧಿ ಅಗಿದೆ. ನಾಳೆಯಿಂದಲೇ  ಚುನಾವಣೆ  ಪ್ರಚಾರವನ್ನು ಅಧಿಕೃತವಾಗಿ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾಜಿ ಶಾಸಕರಾದ ಎಸ್.ಎಂ.ಮುನಿಯಪ್ಪ, ಎಂ,ಶಿವಾನಂದ್, ಅನುಸೂಯಮ್ಮ, ಹಿರಿಯ ಮುಖಂಡರಾದ ಯಲುವಹಳ್ಳಿ ರಮೇಶ, ಕೆ.ವಿ.ನವೀನ್ ಕುಮಾರ್, ನಂದಿ ಅಂಜಿನಪ್ಪ, ಜಿ.ಹೆಚ್.ನಾಗರಾಜ್, ಪಿ.ಎನ್.ಮುನೇಗೌಡ, ಎಸ್.ಪಿ.ಶ್ರೀನಿವಾಸ ಇದ್ದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ