ಉತ್ತಮ ಕೆಲಸ ಮಾಡಿದ ತೃಪ್ತಿಯಿದೆ: ಜ್ಯೋತ್ಸ್ನಾ

Team Udayavani, Sep 24, 2018, 5:27 PM IST

cta.jpg

ಚಿತ್ರದುರ್ಗ: ಮೊದಲ ಬಾರಿ ಜಿಲ್ಲಾ ಧಿಕಾರಿಯಾಗಿ ಚಿತ್ರದುರ್ಗದಲ್ಲಿ ಕೆಲಸ ಮಾಡಿದ್ದೇನೆ. ಇಲ್ಲಿನ ಜನರು, ಅಧಿಕಾರಿಗಳ ಪ್ರೀತಿ, ವಿಶ್ವಾಸವನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ ಎಂದು ಜಿಲ್ಲಾ ಧಿಕಾರಿ ವಿ.ವಿ.ಜ್ಯೋತ್ಸ್ನಾ ಹೇಳಿದರು. ಇಲ್ಲಿನ ಜಿಲ್ಲಾ ಪಂಚಾಯತ್‌ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ನೂತನ ಜಿಲ್ಲಾಧಿಕಾರಿ ಆರ್‌. ಗಿರೀಶ್‌ ಅವರಿಗೆ ಸ್ವಾಗತ ಹಾಗೂ ತಮ್ಮ ಬೀಳ್ಕೊಡುಗೆ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಒಂದು ವರ್ಷ ಮೂರು ತಿಂಗಳ ಕಾಲ ಸೇವೆ ಸಲ್ಲಿಸಿದ್ದೇನೆ. ಈ ವೇಳೆ ವಿಧಾನಸಭಾ ಚುನಾವಣೆ, ವಿಧಾನಪರಿಷತ್‌ ಹಾಗೂ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಲಾಗಿದೆ. ಈ ಎಲ್ಲಾ ಚುನಾವಣೆಗಳನ್ನು ಅತ್ಯಂತ ಯಶಸ್ವಿಯಾಗಿ ಮಾಡಲು ಸಾಧ್ಯವಾಗಿರುವುದು ಅತ್ಯುತ್ತಮ ಅಧಿಕಾರಿಗಳ ತಂಡದ ಸಹಕಾರದಿಂದ ಎಂದರು.

ಮಕ್ಕಳು ಶಾಲೆಯಿಂದ ಹೊರಗುಳಿಯಬಾರದೆಂದು “ವಿದ್ಯಾಶಕ್ತಿ’ ಕಾರ್ಯಕ್ರಮದ ಮೂಲಕ ಅನೇಕ ಮಕ್ಕಳನ್ನು ಶಾಲೆಗೆ ಮರಳಿ ತರಲು ಸಾಧ್ಯವಾಯಿತು. ಒಂದೇ ದಿನ ಏಕಕಾಲದಲ್ಲಿ 189 ಗ್ರಾಮಗಳಲ್ಲಿ ಅಧಿಕಾರಿಗಳ ತಂಡ ವಾಸ್ತವ್ಯ ಹೂಡುವ ಮೂಲಕ ಜನರ ಸಮಸ್ಯೆ ಅರಿತೆವು. ಸಾವಿರಾರು ಮಕ್ಕಳನ್ನು ಶಾಲೆಗೆ ಕರೆತಂದ ತೃಪ್ತಿ ಇದೆ ಎಂದು ತಿಳಿಸಿದರು.

ನೂತನ ಜಿಲ್ಲಾಧಿಕಾರಿ ಆರ್‌. ಗಿರೀಶ್‌ ಮಾತನಾಡಿ, ಸಂವಿಧಾನದ ಮೂರು ಅಂಗಗಳಲ್ಲಿ ಕಾರ್ಯಾಂಗ ಪ್ರಮುಖ ಅಂಗವಾಗಿದೆ. ಸ್ವಾತಂತ್ರ್ಯಾ ಬಂದು ಇಷ್ಟು ವರ್ಷಗಳಾದರೂ ಇನ್ನೂ ಅನೇಕ ಸಮಸ್ಯೆಗಳಿವೆ. ಅನೇಕ ಸಾಮಾಜಿಕ ಸಮಸ್ಯೆಗಳಿಂದ ಶೌಚಾಲಯಗಳನ್ನು ಎಲ್ಲರೂ ಹೊಂದಲು ಸಾಧ್ಯವಾಗಿಲ್ಲ. ಇಂತಹ ಸಾಮಾಜಿಕ ಸಮಸ್ಯೆಗಳನ್ನು ಎಲ್ಲರೂ ಒಟ್ಟಾಗಿ ಹೋಗಲಾಡಿಸಬೇಕು ಎಂದರು. ಅಧಿಕಾರಿಗಳಾದ ನಾವೆಲ್ಲರೂ ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡಬೇಕಾಗಿದೆ. ಈ ನಿಟ್ಟಿನಲ್ಲಿ ನಮ್ಮ ಪ್ರಾಮಾಣಿಕ ಪ್ರಯತ್ನ ಮಾಡಬೇಕು. ಚಿತ್ರದುರ್ಗ ಜಿಲ್ಲೆಗೆ ಹಿಂದುಳಿದ ಜಿಲ್ಲೆ, ಬರಪೀಡಿತ ಜಿಲ್ಲೆ ಎಂಬ ಹೆಸರಿದೆ. ಯೋಜನೆಗಳನ್ನು ಅನುಷ್ಠಾನ ಮಾಡುವ ಮೂಲಕ ಮುಂದೊಂದು ದಿನ ಮುಂದುವರೆದ ಜಿಲ್ಲೆಯನ್ನಾಗಿಸಬೇಕಾಗಿದೆ. ಇದಕ್ಕೆ ಎಲ್ಲರ ಸಹಕಾರ ಬೇಕು ಎಂದು ಕೋರಿದರು.

ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧಿಧೀಶ ಎಸ್‌.ಬಿ. ವಸ್ತ್ರಮಠ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಿಲ್ಲೆಯಲ್ಲಿ ಹಿಂದುಳಿದವರು, ಬಡತನದಲ್ಲಿರುವವರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಜನರಿಗೆ ಕುಡಿಯುವ ನೀರು, ಉತ್ತಮ ರಸ್ತೆ ಹಾಗೂ ಆರೋಗ್ಯ ಕಲ್ಪಿಸಿಕೊಡುವ ನಿಟ್ಟಿನಲ್ಲಿ ನೂತನ ಜಿಲ್ಲಾಧಿಕಾರಿಯವರು ಗಮನ ನೀಡಬೇಕು. ಹಿಂದಿನ ಜಿಲ್ಲಾಕಾರಿ ಸಹ ಉತ್ತಮವಾಗಿ ಕೆಲಸ ಮಾಡಿದ್ದಾರೆ ಎಂದರು.

ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಿ.ಎನ್‌. ರವೀಂದ್ರ, ಪ್ರೊಬೇಷನರಿ ಐಎಎಸ್‌ ಅಧಿಕಾರಿ ಡಾ| ನಂದಿನಿ, ಅಪರ ಜಿಲ್ಲಾಧಿಕಾರಿ ಸಂಗಪ್ಪ, ಉಪವಿಭಾಗಾಧಿಕಾರಿ ವಿಜಯಕುಮಾರ್‌ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು. 

ಟಾಪ್ ನ್ಯೂಸ್

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.