ನಾಳೆಯಿಂದ ಶಾಲಾ ಲಸಿಕಾ ಅಭಿಯಾನ: ವಿನೋತ್‌ ಪ್ರಿಯಾ

Team Udayavani, Dec 10, 2019, 2:29 PM IST

ಚಿತ್ರದುರ್ಗ: ಡಿಪಿಟಿ ಬೂಸ್ಟರ್‌ ಹಾಗೂ ಟಿ.ಡಿ. ಲಸಿಕೆ ಹಾಕುವ ಶಾಲಾ ಲಸಿಕಾ ಅಭಿಯಾನವನ್ನು ಡಿ. 11 ರಿಂದ 31 ರವರೆಗೆ ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗಿದೆ. 2.67 ಲಕ್ಷ ಮಕ್ಕಳಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾಧಿಕಾರಿ ವಿನೋತ್‌ ಪ್ರಿಯಾ ತಿಳಿಸಿದರು.

ಶಾಲಾ ಲಸಿಕಾ ಅಭಿಯಾನದ ಕುರಿತು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು. ಗಂಟಲುಮಾರಿ ಹಾಗೂ ಧನುರ್ವಾಯು ರೋಗಗಳನ್ನು ತಡೆಗಟ್ಟಬಹುದಾದ ಲಸಿಕೆಯನ್ನು ಮಕ್ಕಳಿಗೆ ಹಾಕುವ ಸಲುವಾಗಿ ಜಿಲ್ಲೆಯಲ್ಲಿ ಡಿ. 11 ರಿಂದ 31 ರವರೆಗೆ ವಿಶೇಷ ಲಸಿಕಾ ಅಭಿಯಾನ ಆರೋಗ್ಯ ಇಲಾಖೆಯಿಂದ ನಡೆಯಲಿದೆ. ಒಟ್ಟು 2,67,989 ಮಕ್ಕಳಿಗೆ ಲಸಿಕೆ ಹಾಕಲಿದ್ದು, ಜಿಲ್ಲೆಯ ಎಲ್ಲ ಸರ್ಕಾರಿ, ಖಾಸಗಿ ಶಾಲೆಗಳು, ಅಂಗನವಾಡಿಗಳಲ್ಲಿ ಮಕ್ಕಳಿಗೆ ಲಸಿಕೆ ದೊರೆಯಲಿದೆ.

ಅಂಗನವಾಡಿಯಿಂದ ಹೊರಗುಳಿದ ಮಕ್ಕಳನ್ನು ಗುರುತಿಸಲಾಗಿದ್ದು, ಎಲ್ಲ ಅಂಗನವಾಡಿ ಕೇಂದ್ರಗಳಲ್ಲಿ, ಶಾಲೆಗಳಲ್ಲಿ ತರಬೇತಿ ಹೊಂದಿದ ವ್ಯಾಕ್ಸಿನೇಟರ್ ಲಸಿಕೆ ನೀಡುತ್ತಾರೆ. ಖಾಸಗಿ ಶಾಲೆಗಳು ಸೇರಿದಂತೆ ಲಸಿಕಾ ಕಾರ್ಯಕ್ರಮದ ಅನುಷ್ಠಾನದಲ್ಲಿ ಯಾರೂ ನಿರ್ಲಕ್ಷ್ಯ ತೋರುವಂತಿಲ್ಲ ಎಂದು ಜಿಲ್ಲಾಧಿ ಕಾರಿಗಳು ತಾಕೀತು ಮಾಡಿದರು. ಜಿಪಂ ಸಿಇಒ ಸಿ. ಸತ್ಯಭಾಮ ಮಾತನಾಡಿ, ಮಕ್ಕಳಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಈ ಲಸಿಕೆಗಳನ್ನು ಹಾಕಿಸಿದವರು ಲಸಿಕೆ ಹಾಕಿಸಿದ ಬಗ್ಗೆ ದಾಖಲೆ ತೋರಿಸಿದರೆ ಆ ಮಕ್ಕಳಿಗೆ ಪುನಃ ಲಸಿಕೆ ನೀಡುವುದಿಲ್ಲ. ಖಾಸಗಿ ವೈದ್ಯರು ಮಕ್ಕಳಿಗೆ ಲಸಿಕೆ ಹಾಕುವ ಮೊದಲು ಮಕ್ಕಳಿಗೆ ಈಗಾಗಲೇ ಲಸಿಕೆ ಹಾಕಲಾಗಿದೆಯೇ ಎಂಬುದನ್ನು ಪರಿಶೀಲಿಸಬೇಕು. ತಾಯಿ ಕಾರ್ಡ್‌ನಲ್ಲಿ ಲಸಿಕೆ ಹಾಕಿಸಿದ ಬಗ್ಗೆ ವಿವರ ನಮೂದಿಸಿರಬೇಕು ಎಂದರು.

ಜಿಲ್ಲಾ ಆರ್‌ಸಿಎಚ್‌ ಅಧಿ ಕಾರಿ ಡಾ| ಕುಮಾರಸ್ವಾಮಿ ಮಾತನಾಡಿ, 5 ರಿಂದ 6 ವರ್ಷದೊಳಗಿನ ಮಕ್ಕಳಿಗೆ ಡಿಪಿಟಿ ಬೂಸ್ಟರ್‌ ಲಸಿಕೆ ಹಾಕಲಾಗುವುದು. ಜಿಲ್ಲೆಯಲ್ಲಿ ಇದಕ್ಕಾಗಿ 38,785 ಮಕ್ಕಳನ್ನು ಗುರುತಿಸಲಾಗಿದೆ. 7 ರಿಂದ 16 ವರ್ಷದೊಳಗಿನ ಎಲ್ಲ ಮಕ್ಕಳಿಗೆ ಟಿ.ಡಿ ಲಸಿಕೆಯನ್ನು ಹಾಕಲಾಗುತ್ತಿದ್ದು, ಜಿಲ್ಲೆಯಲ್ಲಿ 2,29,204 ಮಕ್ಕಳಿಗೆ ಈ ಲಸಿಕೆ ಹಾಕಲು ಗುರಿ ನಿಗದಿಪಡಿಸಲಾಗಿದೆ. ಲಸಿಕಾ ಕಾರ್ಯಕ್ರಮಕ್ಕೆ ಡಿ. 11 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಬಾಲಕಿಯರ ಸರ್ಕಾರಿ ಪಪೂ ಕಾಲೇಜಿನಲ್ಲಿ ಚಾಲನೆ ನೀಡಲಾಗುವುದು ಎಂದು ತಿಳಿಸಿದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

  • ಚಿತ್ರದುರ್ಗ: ಮತದಾರರು ಯಾವುದೇ ಆಮಿಷಕ್ಕೆ ಒಳಗಾಗದೆ ಮತ ಚಲಾಯಿಸಿ ಉತ್ತಮ ನಾಯಕನನ್ನು ಆಯ್ಕೆ ಮಾಡಬೇಕು ಎಂದು ಎರಡನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧಿಧೀಶ...

  • ಚಿತ್ರದುರ್ಗ: ಚುನಾವಣೆಗಳಲ್ಲಿ ಜಾತಿ, ಧರ್ಮ, ಸಿರಿವಂತಿಕೆಯನ್ನು ಪರಿಗಣಿಸದೆ ಯೋಗ್ಯ ಅಭ್ಯರ್ಥಿಗೆ ಮತ ಚಲಾಯಿಸುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸಬೇಕು...

  • ಭರಮಸಾಗರ: ರಾಷ್ಟ್ರೀಯ ಹೆದ್ದಾರಿ 4ರ ವಿಜಾಪುರ ಬಳಿ ಹೆದ್ದಾರಿ ರಸ್ತೆ ಕಾಮಗಾರಿ ಹಿನ್ನೆಲೆಯಲ್ಲಿ ತಾತ್ಕಲಿಕವಾಗಿ ಹೈವೇ ವಾಹನಗಳ ಓಡಾಟಕ್ಕೆ ಅವಕಾಶ ಕಲ್ಪಿಸಿರುವ...

  • ಚಿತ್ರದುರ್ಗ: ಮತದಾರರ ಪರಿಷ್ಕರಣೆಯಲ್ಲಿ ಅತಿ ಹೆಚ್ಚು ಮತ್ತು ಅತೀ ಕಡಿಮೆ ಮತದಾರರು ನೋಂದಣಿಯಾಗಿರುವ ಮತಗಟ್ಟೆಗಳ ಸ್ಥಿತಿಗತಿ ಪರಿಶೀಲಿಸಿ, ಸಮಗ್ರ ವರದಿ ಸಲ್ಲಿಸುವಂತೆ...

  • ಚಿತ್ರದುರ್ಗ: ಮಧ್ಯ ಕರ್ನಾಟಕದ ಮಹತ್ವದ ಯೋಜನೆಯಾಗಿರುವ ದಾವಣಗೆರೆ-ಚಿತ್ರದುರ್ಗ -ತುಮಕೂರು ನೇರ ರೈಲು ಮಾರ್ಗ ಯೋಜನೆ ನನೆಗುದಿಗೆ ಬಿದ್ದಿದ್ದು, ಅನುಷ್ಠಾನದಲ್ಲಿ...

ಹೊಸ ಸೇರ್ಪಡೆ