ಮೊಳಕಾಲ್ಮೂರು/ಚಳ್ಳಕೆರೆಯಿಂದ ಸ್ಪರ್ಧೆ
Team Udayavani, Jan 30, 2018, 9:00 AM IST
ಚಳ್ಳಕೆರೆ: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸೂಚನೆಯಂತೆ ಚಿತ್ರದುರ್ಗ ಜಿಲ್ಲೆಯ ಎರಡು ಪರಿಶಿಷ್ಟ ವರ್ಗದ ಮೀಸಲು ಕ್ಷೇತ್ರಗಳಾದ ಮೊಳ ಕಾಲ್ಮೂರು ಮತ್ತು ಚಳ್ಳಕೆರೆ ಕ್ಷೇತ್ರಗಳಲ್ಲಿ ಪ್ರವಾಸ ಕೈಗೊಂಡಿದ್ದೇನೆ. ಯಾವ ಕ್ಷೇತ್ರಕ್ಕೆ ಪಕ್ಷ ಟಿಕೆಟ್ ನೀಡುತ್ತದೆಯೋ ಅಲ್ಲಿಂದ ಕಣಕ್ಕಿಳಿಯಲು ಸಿದ್ಧತೆ ಮಾಡಿ ಕೊಂಡಿದ್ದೇನೆ ಎಂದು ಮಾಜಿ ಸಂಸದ, ಚಿತ್ರನಟ ಶಶಿಕುಮಾರ್ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ನಾಯಕನಹಟ್ಟಿ ಹಾಗೂ ತಳಕು ಹೋಬಳಿಗಳಲ್ಲಿ ಪ್ರವಾಸ ನಡೆಸಿದ್ದೇನೆ. ಮುಂದಿನ ದಿನಗಳಲ್ಲಿ ಚಳ್ಳಕೆರೆ ವಿಧಾನಸಭಾ ಕ್ಷೇತ್ರದಲ್ಲಿ ಪ್ರವಾಸ ಮುಂದುವರಿಸುತ್ತೇನೆ. ಬುಧವಾರ (ಜ.31) ಬೆಂಗಳೂರಿನಲ್ಲಿ ಪಕ್ಷದ ಸಭೆ ನಡೆಯಲಿದ್ದು, ಹಿರಿಯ ಮುಖಂಡರೊಂದಿಗೆ ಚರ್ಚಿಸಿ ಯಾವ ಕ್ಷೇತ್ರದಿಂದ ಕಣಕ್ಕಿಳಿಯಬೇಕು ಎಂಬ ಬಗ್ಗೆ ತೀರ್ಮಾನ
ಕೈಗೊಳ್ಳಲಾಗುವುದು ಎಂದರು. ಈಗಾಗಲೇ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸಂಸದನಾಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ.
ಮುಖ್ಯಮಂತ್ರಿಗಳು ಮತ್ತು ವರಿಷ್ಠರ ನಿರ್ದೇಶನದಂತೆ ಈ ಬಾರಿ ವಿಧಾನಸಭೆ ಪ್ರವೇಶಿಸಿ ಕ್ಷೇತ್ರದ ಜನರ ಸೇವೆ ಮಾಡಬೇಕೆಂಬುದು ತನ್ನ ಆಸೆ. ಕಾಂಗ್ರೆಸ್‌ನಿಂದಲೇ ಸ್ಪರ್ಧಿಸುವ ಇಚ್ಛೆ ಹೊಂದಿದ್ದು, ಬೇರೆ ಪಕ್ಷಗಳನ್ನು ಸಂಪರ್ಕಿಸುವ ಅಗತ್ಯ ತನಗಿಲ್ಲ ಎಂದು
ಸ್ಪಷ್ಟಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ