ಸಿಎಂ ಗಾದಿಗೆ ಕಾಂಗ್ರೆಸ್‌ನಲ್ಲಿ ಮ್ಯೂಸಿಕಲ್‌ ಚೇರ್‌ ಆಟ

Team Udayavani, Feb 14, 2021, 3:40 PM IST

sreeramulu talk about congress

ಚಿತ್ರದುರ್ಗ : ಮುಖ್ಯಮಂತ್ರಿ ಗಾದಿಗಾಗಿ ಕಾಂಗ್ರೆಸ್‌ನಲ್ಲಿ ಎಲ್ಲರೂ ಮ್ಯೂಸಿಕಲ್‌ ಚೇರ್‌ ಆಟವಾಡುತ್ತಿದ್ದಾರೆ. ಸಿದ್ದರಾಮಯ್ಯ ಸಿಎಂ ಕುರ್ಚಿ ಮೇಲೆ ಹಾರಿದರೆ, ಅವರದ್ದೇ ಪಕ್ಷದ ಡಿ.ಕೆ. ಶಿವಕುಮಾರ್‌ ಅವರ ಕಾಲು ಹಿಡಿದು ಎಳೆಯುತ್ತಾರೆ ಎಂದು ಸಚಿವ ಬಿ. ಶ್ರೀರಾಮುಲು ಲೇವಡಿ ಮಾಡಿದ್ದಾರೆ. ನಗರದಲ್ಲಿ ಶನಿವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಸಿದ್ದರಾಮಯ್ಯ ಹಾಗೂ ಡಿ ಕೆ ಶಿವಕುಮಾರ್ ಇಬ್ಬರೂ ಸಿಎಂ ಆಗಬೇಕುಅಂದುಕೊಂಡಿದ್ದಾರೆ. ಮುಖ್ಯಮಂತ್ರಿ ಕುರ್ಚಿ ಮೇಲೆ ಕಣ್ಣಿಟ್ಟು ಕೆಲಸ ಮಾಡುವವರು ಅವರು.  ಜನರ ಹಿತದೃಷ್ಟಿಯಿಂದ ಕೆಲಸ ಮಾಡುವವರು ನಾವು. ಹಾಗಾಗಿ ನಮಗೂ, ಅವರಿಗೂ ಬಹಳ ವ್ಯತ್ಯಾಸಗಳಿವೆ ಎಂದರು.

ಸಿದ್ದರಾಮಯ್ಯ ಅಹಿಂದ ಹೆಸರಿನಲ್ಲಿ ಜನರಿಗೆ ಮೋಸ ಮಾಡಿದ ವ್ಯಕ್ತಿ. ಈಗ ಹಿಂದ ಹೆಸರು ಹೇಳಿಕೊಂಡು ಹೋದರೆ ಜನರ ಬಳಿ ಅವರ ಆಟ ನಡೆಯಲ್ಲ. ಅವರ ಅಧಿ ಕಾರಾವ  ಧಿಯಲ್ಲಿ ಹಿಂದುಳಿದ ಸಮುದಾಯಗಳಿಗೆ ಯಾವ ನ್ಯಾಯ ಒದಗಿಸಿದ್ದಾರೆ ಎಂದು ಪ್ರಶ್ನಿಸಿದರು. ಮೊದಲು ಜನರಿಗೆ ಹುರುಪಿತ್ತು. ಹಾಗಾಗಿ ಸಿದ್ದರಾಮಯ್ಯರನ್ನು ಬೆಂಬಲಿಸಿದರು. ಆದರೆ ಅಧಿಕಾರ ಸಿಕ್ಕಿದ ಮೇಲೆ ಎಲ್ಲರನ್ನೂ ಕಡೆಗಣಿಸಿ ಬದಲಾಗಿದ್ದನ್ನು ಜನ ನೋಡಿದ್ದಾರೆ. ಇನ್ನು ಮುಂದೆ ನಡೆಯುವ ಎಲ್ಲಾ ಉಪಚುನಾವಣೆಗಳನ್ನು ನಾವೇ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇದನ್ನೂ ಓದಿ:ಖರ್ಗೆ ವಿಪಕ್ಷ ನಾಯಕ : ಕಾಂಗ್ರೆಸ್‌ಹರ್ಷ

ಕೇಂದ್ರ ಬಜೆಟ್‌ ಐತಿಹಾಸಿಕ: ಈ ಬಾರಿಯ ಕೇಂದ್ರ ಬಜೆಟ್‌ನಲ್ಲಿ ಕೃಷಿ, ಆರೋಗ್ಯ, ಸಾರಿಗೆ ಸೇರಿದಂತೆ ಮೂಲ ಸೌಕರ್ಯ ಕಲ್ಪಿಸಲು ಸಾಕಷ್ಟು ಒತ್ತು ನೀಡಲಾಗಿದೆ. ಇದೊಂದು ಐತಿಹಾಸಿಕ ಬಜೆಟ್‌ ಎಂದು ಶ್ರೀರಾಮುಲು ಬಣ್ಣಿಸಿದರು. ಈ ಬಜೆಟ್‌ನಲ್ಲಿ ರಾಜ್ಯಕ್ಕೆ ಭರಪೂರ ಕೊಡುಗೆಗಳು ಸಿಕ್ಕಿದ್ದು, 33 ಹೆದ್ದಾರಿಗಳು, ರೈಲ್ವೆ ಯೋಜನೆಗಳು, ಸಂಪನ್ಮೂಲ ಕ್ರೋಢೀಕರಣಕ್ಕೆ ಒತ್ತು ನೀಡಲಾಗಿದೆ. ಎಪಿಎಂಸಿ ಬಲವರ್ಧನೆಗೆ ಮುಂದಾಗಿದ್ದು, ಒಂದು ಸಾವಿರ ಎಪಿಎಂಸಿಗಳನ್ನು ಡಿಜಿಟಲೀಕರಣ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದರು. ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್‌. ರವಿಕುಮಾರ್‌ ಮಾತನಾಡಿ, ದೇಶಕ್ಕೆ ಸ್ವಾತಂತ್ರ ಬಂದ ನಂತರ ಆರೋಗ್ಯ ಕ್ಷೇತ್ರಕ್ಕೆ 2.23 ಲಕ್ಷ ಕೋಟಿ ರೂ. ಅನುದಾನ ಒದಗಿಸಿರುವುದು ಇದೇ ಮೊದಲು ಎಂದರು. ಸುದ್ದಿಗೋಷ್ಠಿಯಲ್ಲಿ ಶಾಸಕರಾದ ಜಿ.ಎಚ್‌. ತಿಪ್ಪಾರೆಡ್ಡಿ, ಎಂ. ಚಂದ್ರಪ್ಪ, ಗೂಳಿಹಟ್ಟಿ ಶೇಖರ್‌, ಖನಿಜ ನಿಗಮಗಳ ಅಧ್ಯಕ್ಷ ಎಸ್‌. ಲಿಂಗಮೂರ್ತಿ ಇತರರು ಇದ್ದರು.

ಟಾಪ್ ನ್ಯೂಸ್

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

5-congress

Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್‌ರಾಜ್‌ ಮೌರ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.