ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಶ್ರಮಿಸಿ


Team Udayavani, Oct 31, 2021, 3:33 PM IST

ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಶ್ರಮಿಸಿ

ಚಳ್ಳಕೆರೆ: ನಗರದ ಸರ್ಕಾರಿ ಪದವಿಪೂರ್ವ ಕಾಲೇಜಿಗೆ ಗ್ರಾಮಾಂತರ ಹಾಗೂ ನಗರ ಪ್ರದೇಶದ ಬಡ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಬದುಕನ್ನು ಭದ್ರಪಡಿಸಿಕೊಳ್ಳಲು ಶಿಕ್ಷಣ ಪಡೆಯಲು ಆಗಮಿಸುತ್ತಿದ್ದಾರೆ.

ಇಂತಹ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕ ವರ್ಗ ಪಾರದರ್ಶಕವಾಗಿ ಕಾರ್ಯ ನಿರ್ವಹಿಸಬೇಕು. ಈ ಮೂಲಕ ವಿದ್ಯಾರ್ಥಿಗಳ ಪ್ರಗತಿಗೆ ಬೆನ್ನೆಲುಬಾಗಬೇಕು ಎಂದು ಶಾಸಕ ಟಿ. ರಘುಮೂರ್ತಿ ಕರೆ ನೀಡಿದರು.

ಕಾಲೇಜಿನಲ್ಲಿ ನೂತನವಾಗಿ ಪ್ರಾರಂಭವಾದ ಕಂಪ್ಯೂಟರ್‌ ಕೇಂದ್ರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪ್ರಸ್ತುತ ಸರ್ಕಾರಿ ಪದವಿಪೂರ್ವ ಕಾಲೇಜಿಗೆ ಕಳೆದ ಸುಮಾರು ಎಂಟು ವರ್ಷಗಳಿಂದ ವಿವಿಧ ಯೋಜನೆಯಲ್ಲಿ ಕೋಟ್ಯಾಂತರ ರೂಪಾಯಿಗಳನ್ನು ಕೊಠಡಿ, ಇನ್ನಿತರ ಸೌಲಭ್ಯಗಳಿಗಾಗಿ ಸರ್ಕಾರ ನೀಡಿದೆ.

ಶಾಸಕರ ಅನುದಾನದಲ್ಲಿ ಕಾಲೇಜಿನ ಶೈಕ್ಷಣಿಕ ಪ್ರಗತಿಗೆ ಪೂರಕವಾಗಿ ಸಹಾಯ ಮಾಡಲಾಗಿದೆ. ಆದರೆ ನಿರೀಕ್ಷಿತ ಮಟ್ಟದಲ್ಲಿ ಮಾತ್ರ ಫಲಿತಾಂಶ ಲಭ್ಯವಾಗುತ್ತಿಲ್ಲ. ಕಾಲೇಜಿನ ಎಲ್ಲಾ ಬೋಧಕರು ಮಕ್ಕಳಶೈಕ್ಷಣಿಕ ಉನ್ನತಿಗಾಗಿ ಛಲದಿಂದ ಕಾರ್ಯ ನಿರ್ವಹಿಸುವಂತೆ ಮನವಿ ಮಾಡಿದರು.

ಕಾಲೇಜಿನಲ್ಲಿ ಸುಮಾರು ಆರು ವಷಗಳ ಕಾಲ ಸೇವೆ ಸಲ್ಲಿಸಿ ಪಿಯುಸಿ ಪರೀಕ್ಷಾರಂಗ ವಿಭಾಗದ ಜಂಟಿ ನಿರ್ದೇಶಕರಾಗಿ ಕಾರ್ಯನಿರ್ವಹಿಸಿ ನಿವೃತ್ತರಾದ ಪಿ.ಎನ್‌.ಕೃಷ್ಣಪ್ರಸಾದ್‌ ಅವರನ್ನು ಶಾಸಕ ಟಿ. ರಘುಮೂರ್ತಿ ಸನ್ಮಾನಿಸಿದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ಕೃಷ್ಣಪ್ರಸಾದ್‌, ಕಾಲೇಜಿನಲ್ಲಿ ಏನೇ ಅಭಿವೃದ್ಧಿಯಾದರೂ ಅದಕ್ಕೆ ಮೂಲ ಕಾರಣ ಕ್ಷೇತ್ರದ ಶಾಸಕರು.ಇಲ್ಲಿನ ಎಲ್ಲಾ ಉಪನ್ಯಾಸಕರು ನೀಡಿದಸಹಕಾರದಿಂದ ಕಾಲೇಜಿನ ಸಂಪೂರ್ಣ ಬೆಳವಣಿಗೆಗೆ ನಾನು ಶ್ರಮ ವಹಿಸಿದ್ದೇನೆ. ಮಕ್ಕಳ ಶೈಕ್ಷಣಿಕ ಪ್ರಗತಿಗೆ ಕಾರ್ಯ ನಿರ್ವಹಿಸಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲ ಗೋವಿಂದಪ್ಪ ವಹಿಸಿದ್ದರು. ನಗರಸಭೆ ಅಧ್ಯಕ್ಷೆ ಸಿ.ಬಿ. ಜಯಲಕ್ಷ್ಮೀ ಕೃಷ್ಣಮೂರ್ತಿ, ಸ್ಥಾಯಿ ಸಮಿತಿ ಅಧ್ಯಕ್ಷ ರಮೇಶ್‌ ಗೌಡ, ಜಿಲ್ಲಾ ಉಪನ್ಯಾಸಕರ ಸಂಘದ ಅಧ್ಯಕ್ಷ ಎಸ್‌. ಲಕ್ಷ್ಮಣ್‌, ಉಪನ್ಯಾಸಕರಾದ ವಸಂತಕುಮಾರ್‌, ಚಂದ್ರಶೇಖರ್‌, ಬೆಳಗಟ್ಟನಾಗರಾಜು, ಪುಷ್ಪಲತಾ, ಶಾಂತಕುಮಾರಿ, ರಾಮಾಂಜನೇಯ ಮುಂತಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.