ಜೆಡಿಎಸ್‌ ಅಧಿಕಾರಕ್ಕೆ ತರಲು ಶ್ರಮಿಸಿ

ಜನತಾ ಜಲಧಾರೆ ರಥಯಾತ್ರೆ ಯಶಸ್ವಿಗೊಳಿಸಿ

Team Udayavani, Apr 26, 2022, 4:45 PM IST

jds

ಮೊಳಕಾಲ್ಮೂರು: ರಾಜ್ಯದ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ಎಚ್‌.ಡಿ. ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಬೇಕಿದೆ. ಅದಕ್ಕಾಗಿ ಜೆಡಿಎಸ್‌ ಗೆಲುವಿಗೆ ಸಂಘಟಿತರಾಗಿ ಶ್ರಮಿಸಬೇಕು ಎಂದು ಪಕ್ಷದ ಮುಖಂಡ ಅನಿಲ್‌ಕುಮಾರ್‌ ಹೇಳಿದರು.

ತಾಲೂಕಿನ ಹಾನಗಲ್‌ ಪ್ರವಾಸಿಮಂದಿರದಲ್ಲಿ ಆಯೋಜಿಸಿದ್ದ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು. ಜನತಾ ಜಲಧಾರೆ ಯೋಜನೆಯ ರಥಯಾತ್ರೆಗೆ ಏ. 28ರಂದು ನಾಯಕನಹಟ್ಟಿಯಲ್ಲಿ ಚಾಲನೆ ದೊರೆಯಲಿದೆ. ಜನತಾ ಜಲಧಾರೆ ಯೋಜನೆಯ ರಥಯಾತ್ರೆಯನ್ನು ಅದ್ಧೂರಿ ಮೆರವಣಿಗೆಯೊಂದಿಗೆ ತಾಲೂಕಿನ ರಾಂಪುರ ಗ್ರಾಮಕ್ಕೆ ಕರೆತಂದು ಸಮಾರಂಭ ಆಯೋಜಿಸಲಾಗುವುದು. ನಂತರ ಈ ರಥಯಾತ್ರೆಯನ್ನು ತಾಲೂಕಿನ ಕೇಂದ್ರಸ್ಥಾನವಾದ ಮೊಳಕಾಲ್ಮೂರು ಪಟ್ಟಣಕ್ಕೆ ಕರೆ ತಂದು ಬೃಹತ್‌ ಸಮಾರಂಭ ಹಮ್ಮಿಕೊಳ್ಳಲಾಗುವುದು. ತಾಲೂಕಿನ ಕೊಂಡ್ಲಹಳ್ಳಿ ಗ್ರಾಮ ಮಾರ್ಗವಾಗಿ ಚಳ್ಳಕೆರೆ ತಾಲೂಕಿನ ತಳುಕಿನಲ್ಲಿ ಯಾತ್ರಯನ್ನು ಚಳ್ಳಕೆರೆ ತಾಲೂಕಿನವರಿಗೆ ಹಸ್ತಾಂತರಿಸಲಾಗುವುದು ಎಂದರು.

ಜನತಾ ಜಲಧಾರೆ ಯೋಜನೆಯ ಮೂಲಕ ರಾಜ್ಯದ ಪ್ರತಿ ಕುಟುಂಬಕ್ಕೆ ಶುದ್ಧ ನೀರು ಹಾಗೂ ಕೃಷಿಗೆ ಸಮರ್ಪಕವಾದ ನೀರಾವರಿ ಸೌಲಭ್ಯ ಕಲ್ಪಿಸಲಾಗುವುದು. ರಾಜ್ಯದಲ್ಲಿ ರೈತರಿಗೆ ಕೃಷಿ ಕೈಗೊಳ್ಳಲು ಸಮರ್ಪಕವಾಗಿ ನೀರು ಒದಗಿಸಿ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಿದಲ್ಲಿ ರೈತರ ಆದಾಯ ದ್ವಿಗುಣಗೊಳ್ಳುವುದರಲ್ಲಿ ಸಂಶಯವೇ ಇಲ್ಲ. ಮುಖ್ಯಮಂತ್ರಿಯಾಗಲು ಕುಮಾರಸ್ವಾಮಿಯವರಿಗೆ ಸಂಪೂರ್ಣ ಸಹಕಾರ ನೀಡಿದ್ದಲ್ಲಿ ಜಲಧಾರೆ ಯೋಜನೆ ಹಾಗೂ ಪಂಚರತ್ನ ಯೋಜನೆ ಜಾರಿಗೊಳಿಸಿ ರಾಜ್ಯದ ಸಮಗ್ರ ಅಭಿವೃದ್ಧಿಗೆ ಶ್ರಮಿಸುತ್ತೇವೆ ಎಂದು ತಿಳಿಸಿದರು.

ಜೆಡಿಎಸ್‌ ತಾಲೂಕು ಅಧ್ಯಕ್ಷ ಬಿ.ಜಿ. ಕೆರೆಯ ಜಿ. ಮಂಜುನಾಥ ಮಾತನಾಡಿ, ರಾಜ್ಯದಲ್ಲಿ ರೈತರು ಹಾಗೂ ಕಾರ್ಮಿಕರ ಮೇಲೆ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅಪಾರ ವಾತ್ಸಲ್ಯ ಹೊಂದಿದ್ದಾರೆ. ಮುಖ್ಯವಾಗಿ ರೈತರಿಗೆ ಹಲವಾರು ಯೋಜನೆಗಳನ್ನು ಜಾರಿಗೊಳಿಸಿ ಸಣ್ಣ ಪುಟ್ಟ ಜಮೀನುಗಳಿಗೆ ಪೈಪ್‌ಲೈನ್‌ ಇಲ್ಲವೇ ಕಾಲುವೆ ಮೂಲಕ ನೀರಾವರಿ ಸೌಲಭ್ಯ ಕಲ್ಪಿಸುವ ಚಿಂತನೆ ಹೊಂದಿದ್ದಾರೆ. ಅಲ್ಲದೆ ಕೃಷಿಯೆತರ ಚಟುವಟಿಕೆಗಳಿಗೂ ಹೆಚ್ಚಿನ ಅವಕಾಶಗಳನ್ನು ನೀಡಿ ನಿರುದ್ಯೋಗ ಸಮಸ್ಯೆ ನಿವಾರಣೆಗೆ ಆದ್ಯತೆ ನೀಡಲಿದ್ದಾರೆ. ಮುಖ್ಯಮಂತ್ರಿಯಾಗಿದ್ದಾಗ ರಾಜ್ಯದ ರೆತರ 25 ಸಾವಿರ ಕೋಟಿ ರೂ. ಸಾಲ ಮನ್ನಾ ಮಾಡಿದ್ದರು. ಜನಪರ ಯೋಜನೆಗಳ ಜಾರಿಗೆ ಜಾತ್ಯತೀತವಾಗಿ ಪಕ್ಷವನ್ನು ಸಂಘಟಿಸಿ ಗೆಲುವಿಗೆ ಶ್ರಮಿಸಬೇಕೆಂದು ತಿಳಿಸಿದರು.

ಸಭೆಯಲ್ಲಿ ಜೆಡಿಎಸ್‌ ಜಿಲ್ಲಾ ಸಮಿತಿಯ ಕಾಲುವೆಹಳ್ಳಿ ರಂಗಸ್ವಾಮಿ, ವೆಂಕಟೇಶ್‌, ತಾಲೂಕು ಉಪಾಧ್ಯಕ್ಷ ಮಹಮ್ಮದ್‌ ಜಕ್ರಿಯಾ, ಪ್ರಧಾನ ಕಾರ್ಯದರ್ಶಿ ಮಹಮ್ಮದ್‌ ಇಕ್ಬಾಲ್‌, ಕಾರ್ಯಾಧ್ಯಕ್ಷ ಯರಗುಂಟಪ್ಪ, ಯುವ ಘಟಕದ ಅಧ್ಯಕ್ಷ ಗೋವಿಂದ, ಪಕ್ಷದ ಪದಾಧಿ ಕಾರಿಗಳಾದ ಹನುಮಂತನಹಳ್ಳಿ ನಾಗರಾಜ್‌, ತಿಪ್ಪೇಸ್ವಾಮಿ, ತಿಪ್ಪೇಶ್‌, ನಾಗೇಂದ್ರ, ಸಯ್ಯದ್‌ ಹಮೀದ್‌ ಸಾಬ್‌, ಜಿ.ಜೆ. ನಾಗರಾಜ್‌, ಬಸಾಪುರದ ಜಯಪಾಲ್‌, ಮಂಜುನಾಥ ಮೊದಲಾದವರು ಭಾಗವಹಿಸಿದ್ದರು.

ಟಾಪ್ ನ್ಯೂಸ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.