Udayavni Special

ಬಾಲ್ಯ ವಿವಾಹ ನಿರ್ಮೂಲನೆಗೆ ಶ್ರಮಿಸಿ


Team Udayavani, Jan 18, 2019, 10:14 AM IST

cta-1.jpg

ಚಿತ್ರದುರ್ಗ: ಬಾಲ್ಯ ವಿವಾಹ ನಿರ್ಮೂಲನೆ ಮಾಡಲು ಬಾಲ್ಯ ವಿವಾಹದಿಂದ ಮಕ್ಕಳ ಮೇಲಾಗುವ ದುಷ್ಪರಿಣಾಮಗಳ ಕುರಿತು ಶಾಲಾ ಮಟ್ಟದಲ್ಲಿ ಅರಿವು ಮೂಡಿಸುವ ಕಾರ್ಯ ಹಮ್ಮಿಕೊಳ್ಳಬೇಕು ಎಂದು ಜಿಪಂ ಸಿಇಒ ಪಿ.ಎನ್‌. ರವೀಂದ್ರ ಅಧಿಕಾರಿಗಳಿಗೆ ಸೂಚಿಸಿದರು.

ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕೌಟುಂಬಿಕ ದೌರ್ಜನ್ಯ ಸಂರಕ್ಷಣಾ ಕಾಯ್ದೆ ಅನುಷ್ಠಾನ ಸಂಬಂಧ ಗುರುವಾರ ಏರ್ಪಡಿಸಲಾದ ಜಿಲ್ಲಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸಾಮಾಜಿಕ ಪಿಡುಗಾಗಿರುವ ಬಾಲ್ಯ ವಿವಾಹ ಪದ್ಧತಿ ಸಂಪೂರ್ಣ ನಿರ್ಮೂಲನೆ ಮಾಡುವುದು ಅಗತ್ಯವಾಗಿದೆ. ಗಂಡಿಗೆ 21, ಹೆಣ್ಣಿಗೆ 18 ವರ್ಷ ಆಗದ ಎಲ್ಲ ಬಾಲ್ಯ ವಿವಾಹಗಳು ಅನೂರ್ಜಿತವಾಗುತ್ತದೆ. ಇದಕ್ಕೆ ಕಾರಣರಾಗುವ, ಮದುವೆಯಲ್ಲಿ ಭಾಗವಹಿಸಿದವರು ಎಲ್ಲರೂ ಎರಡು ವರ್ಷಗಳ ಕಾರಾಗೃಹ ಶಿಕ್ಷೆಗೆ ಅರ್ಹರು. ಪೊಲೀಸರು ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದರು.

ಪ್ರತಿಯೊಂದು ಶಾಲೆಗಳಲ್ಲಿ ಬಾಲ್ಯ ವಿವಾಹದ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕಿದೆ. ಪ್ರಾರ್ಥನೆ ಸಂದರ್ಭದಲ್ಲಿ ಮಕ್ಕಳಿಂದ ತಾವು ಯಾವುದೇ ಕಾರಣಕ್ಕೂ ಬಾಲ್ಯ ವಿವಾಹಕ್ಕೆ ಒಳಗಾಗುವುದಿಲ್ಲ ಎಂಬುದಾಗಿ ಪ್ರತಿಜ್ಞಾ ವಿಧಿ ಸ್ವೀಕಾರ ನಡೆಯಬೇಕು. ಶಾಲಾ ವಾರ್ಷಿಕೋತ್ಸವಗಳಲ್ಲಿ ಈ ಕುರಿತ ಕಿರು ನಾಟಕ ಪ್ರದರ್ಶನಗಳು ಆಗಬೇಕು ಎಂದು ಹೇಳಿದರು.

ಆಶಾ, ಅಂಗನವಾಡಿ ಕಾರ್ಯಕರ್ತೆಯರು, ಶಾಲಾ ಶಿಕ್ಷಕರುಗಳು ಊರು, ಗ್ರಾಮಗಳ ಕಿವಿ, ಕಣ್ಣುಗಳಿದ್ದಂತೆ. ಗ್ರಾಮಗಳಲ್ಲಿ ನಡೆಯುವ ವಿವಾಹ ಚಟುವಟಿಕೆಗಳು ಇವರಿಗೆ ತಿಳಿಯುತ್ತವೆ. ಆದರೆ, ಇದರ ಉಸಾಬರಿ ನಮಗೆ ಬೇಡ ಎನ್ನುವವರೇ ಹೆಚ್ಚು. ಈ ಧೋರಣೆ ಸರಿಯಲ್ಲ ಎಂದು ತಿಳಿಸಿದರು.

ಬಾಲ್ಯ ವಿವಾಹ ನಿಷೇಧ ಅಧಿನಿಯಮದಡಿ ಎಲ್ಲ ಅಧಿಕಾರಿ, ಸಿಬ್ಬಂದಿ ತೀವ್ರ ಕಟ್ಟೆಚ್ಚರ ವಹಿಸಿ ಜಿಲ್ಲೆಯಲ್ಲಿ ಯಾವುದೇ ಬಾಲ್ಯವಿವಾಹ ಜರುಗದಂತೆ ಕ್ರಮ ವಹಿಸಬೇಕು ಎಂದರು.

ಬಾಲ್ಯ ವಿವಾಹ ತಡೆಯಲು ಜಿಲ್ಲೆಯ ಎಲ್ಲ ಸಾಮೂಹಿಕ ವಿವಾಹ ಆಯೋಜಕರು, ದೇವಸ್ಥಾನಗಳು, ಮಠ, ಚರ್ಚ್‌, ಮಸೀದಿ, ಕಲ್ಯಾಣ ಮಂಟಪಗಳಲ್ಲಿ ಇಲ್ಲಿ ಬಾಲ್ಯ ವಿವಾಹಗಳಿಗೆ ಅವಕಾಶವಿಲ್ಲ, ಇದು ಶಿಕ್ಷಾರ್ಹ ಅಪರಾಧ ಎಂಬುದಾಗಿ ಮಾಹಿತಿ ಫಲಕ ಹಾಕಬೇಕು. ಅಧಿಕಾರಿಗಳು ಈ ಕುರಿತು ಸೂಕ್ತ ಕ್ರಮ ಕೈಗೊಳ್ಳಬೇಕು. ಗ್ರಾಪಂ ಕಚೇರಿಗಳ ಬಳಿ ಗೋಡೆ ಬರಹ ಬರೆಯಿಸಬೇಕು ಎಂದು ಸೂಚಿಸಿದರು.

ಪ್ರತಿಯೊಂದು ಗ್ರಾಮ ಪಂಚಾಯತ್‌ಗಳಲ್ಲಿ ಮಕ್ಕಳ ಹಕ್ಕುಗಳ ರಕ್ಷಣಾ ಸಮಿತಿ ಸಭೆಗಳು ವರ್ಷಕ್ಕೆ 6 ಬಾರಿ ನಡೆಯಬೇಕು. ಇದನ್ನು ವಿಶೇಷ ಸಭೆಯಾಗಿ ಆಯೋಜಿಸಿ ಮಕ್ಕಳ ಸಮಸ್ಯೆಗಳ ಬಗ್ಗೆ ಅಹವಾಲು ಆಲಿಸಿ ಸಮಸ್ಯೆಗಳಿದ್ದಲ್ಲಿ ಪರಿಹರಿಸಬೇಕು. ಮಕ್ಕಳು ಹಾಗೂ ಕುಟುಂಬಗಳು ಎದುರಿಸುತ್ತಿರುವ ಸಮಸ್ಯೆ, ಕುಟುಂಬ ಅಸಹಾಯಕವಾಗಿದ್ದಲ್ಲಿ, ನೆರವಿಗೆ ಧಾವಿಸುವುದು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಗ್ರಾಪಂಗಳ ಜವಾಬ್ದಾರಿಯಾಗಿದೆ ಎಂದರು.

ಕಳೆದ ಮೂರು ವರ್ಷಗಳ ಅವಯಲ್ಲಿ ಯಾವುದೇ ಬಾಲ್ಯ ವಿವಾಹ ಪ್ರಕರಣ ವರದಿಯಾಗಿರದ ಗ್ರಾಪಂಗಳಿಗೆ 10 ಸಾವಿರ ರೂ. ಪ್ರೋತ್ಸಾಹಧನ ನೀಡುವ ಯೋಜನೆ ಸರ್ಕಾರ ಜಾರಿಗೊಳಿಸಿದ್ದು, ಅರ್ಹ ಗ್ರಾಮ ಪಂಚಾಯತ್‌ಗಳು ಪ್ರಸ್ತಾವನೆ ಸಲ್ಲಿಸಬೇಕು. ಹಾಗೂ ಎಲ್ಲ ಗ್ರಾಮ ಪಂಚಾಯತ್‌ಗಳು ಪ್ರೋತ್ಸಾಹಧನ ಪಡೆಯುವ ನಿಟ್ಟಿನಲ್ಲಿ ಉತ್ತಮ ಕಾರ್ಯ ನಿರ್ವಹಿಸಬೇಕು ಎಂದು ಸೂಚಿಸಿದರು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ದಿಂಡಿಲಕೊಪ್ಪ ಮಾತನಾಡಿ, ಎಲ್ಲವನ್ನೂ ಕಾಯ್ದೆ, ಕಾನೂನಿನಿಂದ ತೊಡೆದುಹಾಕಲು ಸಾಧ್ಯವಿಲ್ಲ. ಬಾಲ್ಯವಿವಾಹಗಳಿಗೆ ಹೆಚ್ಚಿನ ಕಾರಣಗಳೇನು ಎಂಬುದರ ಬಗ್ಗೆ ಸಮೀಕ್ಷೆಗಳು ಆಗಬೇಕು. ಸಾಮಾನ್ಯವಾಗಿ ಬಡತನ, ಆರ್ಥಿಕವಾಗಿ ಹಿಂದುಳಿದಿರುವುದು, ಉದ್ಯೋಗ ಸಮಸ್ಯೆ, ಕುಟುಂಬಗಳ ಅಸಹಾಯಕತೆ, ಮಕ್ಕಳ ಹೊಣೆ ಸರಿಯಾಗಿ ನಿರ್ವಹಿಸದಿರುವುದು, ಇವು ಸಾಮಾನ್ಯ ಕಾರಣಗಳಾಗಿದ್ದು, ಅಂತಹ ಕುಟುಂಬಗಳ ಮಾಹಿತಿ ಪಡೆದು, ಸ್ವಯಂ ಉದ್ಯೋಗಕ್ಕೆ ನೆರವು, ಸಾಲ ಸೌಲಭ್ಯ, ಉದ್ಯೋಗಖಾತ್ರಿಯಡಿ ಹೆಚ್ಚಿನ ಉದ್ಯೋಗ ನೀಡುವ ಮೂಲಕ ಇದನ್ನು ತಡೆಯಲು ಸಾಧ್ಯವಿದೆ ಎಂದರು.

ವಕೀಲರ ಸಂಘದ ಅಧ್ಯಕ್ಷ ವಿಶ್ವನಾಥ್‌, ಅಪರ ಜಿಲ್ಲಾಧಿಕಾರಿ ಸಂಗಪ್ಪ, ಹಿರಿಯ ನಾಗರಿಕರು ಮತ್ತು ಅಂಗವಿಕಲರ ಕಲ್ಯಾಣಾಧಿಕಾರಿ ವೈಶಾಲಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಬಿ.ವಿ. ನೀರಜ್‌, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ| ಜಯಪ್ರಕಾಶ್‌, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ರಾಜಾನಾಯಕ್‌ ಸೇರಿದಂತೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಕೌಟುಂಬಿಕ ದೌರ್ಜನ್ಯ ಸಂರಕ್ಷಣಾ ಕಾಯ್ದೆಯಡಿ ಕಾರ್ಯ ನಿರ್ವಹಿಸುತ್ತಿರುವ ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸಿದ್ದರು.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಅಗತ್ಯಕ್ಕೆ ತಕ್ಕಂತೆ ಶೈಕ್ಷಣಿಕ ಚಟುವಟಿಕೆ: ಸಚಿವ ಸುರೇಶ್‌ ಕುಮಾರ್

ಅಗತ್ಯಕ್ಕೆ ತಕ್ಕಂತೆ ಶೈಕ್ಷಣಿಕ ಚಟುವಟಿಕೆ: ಸಚಿವ ಸುರೇಶ್‌ ಕುಮಾರ್

ಎರಡು ವರ್ಷಗಳಲ್ಲಿ ಹತ್ತು ಲಕ್ಷ ಮನೆ ನಿರ್ಮಾಣ: ವಿ.ಸೋಮಣ್ಣ

ಎರಡು ವರ್ಷಗಳಲ್ಲಿ ಹತ್ತು ಲಕ್ಷ ಮನೆ ನಿರ್ಮಾಣ: ವಿ.ಸೋಮಣ್ಣ

ಸದ್ಯದ ಪರಿಸ್ಥಿತಿಯಲ್ಲಿ ರಾಜಕಾರಣ ಸರಿಯಲ್ಲ: ಅಶೋಕ್‌

ಸದ್ಯದ ಪರಿಸ್ಥಿತಿಯಲ್ಲಿ ರಾಜಕಾರಣ ಸರಿಯಲ್ಲ: ಅಶೋಕ್‌

ದೇಶದ ದುಸ್ಥಿತಿಗೆ ಕೇಂದ್ರದ ದುರಾಡಳಿತ ಕಾರಣ: ಡಿಕೆಶಿ

ದೇಶದ ದುಸ್ಥಿತಿಗೆ ಕೇಂದ್ರದ ದುರಾಡಳಿತ ಕಾರಣ: ಡಿಕೆಶಿ

ಸತೀಶ ಜಾರಕಿಹೊಳಿ ಹೇಳಿಕೆ ಶೇಖ್‌ ಮಹಮ್ಮದರ ಲೆಕ್ಕ: ಬೊಮ್ಮಾಯಿ

ಸತೀಶ ಜಾರಕಿಹೊಳಿ ಹೇಳಿಕೆ ಶೇಖ್‌ ಮಹಮ್ಮದರ ಲೆಕ್ಕ: ಬೊಮ್ಮಾಯಿ

ಗ್ರಾಮೀಣ ಭಾಗದಲ್ಲೂ ಕ್ವಾರಂಟೈನ್‌ ವ್ಯವಸ್ಥೆ: ಡಾ.ಕೆ.ಸುಧಾಕರ್‌

ಗ್ರಾಮೀಣ ಭಾಗದಲ್ಲೂ ಕ್ವಾರಂಟೈನ್‌ ವ್ಯವಸ್ಥೆ: ಡಾ.ಕೆ.ಸುಧಾಕರ್‌

ಧಾರವಾಡ: 2 ಕೋವಿಡ್ ಪಾಸಿಟಿವ್ ಪ್ರಕರಣ ಪತ್ತೆ

ಧಾರವಾಡ: 2 ಕೋವಿಡ್-19 ಪಾಸಿಟಿವ್ ಪ್ರಕರಣ ಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

30-May-13

ಆಶಾ ಕಾರ್ಯಕರ್ತೆಯರಿಂದ ಪ್ರತಿಭಟನೆ

30-May-11

ಅಪರೂಪಕ್ಕೆ ಬಂದು ಹೋದರೆ ಅಭಿವೃದ್ಧಿ ಹೇಗೆ ಸಾಧ್ಯ?

30-May-04

ಊರಿಗೆ ಮರಳಿದ 139 ವಲಸೆ ಕಾರ್ಮಿಕರು

ಸಾಂಸ್ಥಿಕ ಕ್ವಾರಂಟೈನ್‌ನಿಂದ ಮನೆಗೆ

ಸಾಂಸ್ಥಿಕ ಕ್ವಾರಂಟೈನ್‌ನಿಂದ ಮನೆಗೆ

29-May-13

ಜಲಮೂಲ ರಕ್ಷಣೆಗೆ ಆದ್ಯತೆ

MUST WATCH

udayavani youtube

COVID-19 : ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ Homeopathy Medicine | Udayavani

udayavani youtube

Preserving the heritage -World Famous Udupi Mattugulla Documentary by Udayavani

udayavani youtube

Mattu ಗದ್ದೆಯಲ್ಲಿ ಕೃಷಿಯ ಆಟಕ್ಕಿಳಿದ Football ಆಟಗಾರ Yashodara

udayavani youtube

ಪಶುಸಂಗೋಪನೆಯಲ್ಲಿ ಯಶಸ್ವಿಯಾದ Uttam Agro Industries Poultry Farming Success Story

udayavani youtube

ಈ ಮನೆಯಲ್ಲಿದೆ ಬೀದಿನಾಯಿಗಳಿಗೆ ಪ್ರೀತಿಯ ಆಸರೆ | Udayvani

ಹೊಸ ಸೇರ್ಪಡೆ

Sleep-Fusion

ಇನ್‌ಲ್ಯಾಂಡ್‌ ಲೆಟರ್‌: ಪ್ರಯಾಣದಲ್ಲಿ ಕನಸಿನ ಸಂಭಾಷಣೆಯಲ್ಲಿ

ಅಗತ್ಯಕ್ಕೆ ತಕ್ಕಂತೆ ಶೈಕ್ಷಣಿಕ ಚಟುವಟಿಕೆ: ಸಚಿವ ಸುರೇಶ್‌ ಕುಮಾರ್

ಅಗತ್ಯಕ್ಕೆ ತಕ್ಕಂತೆ ಶೈಕ್ಷಣಿಕ ಚಟುವಟಿಕೆ: ಸಚಿವ ಸುರೇಶ್‌ ಕುಮಾರ್

ಎರಡು ವರ್ಷಗಳಲ್ಲಿ ಹತ್ತು ಲಕ್ಷ ಮನೆ ನಿರ್ಮಾಣ: ವಿ.ಸೋಮಣ್ಣ

ಎರಡು ವರ್ಷಗಳಲ್ಲಿ ಹತ್ತು ಲಕ್ಷ ಮನೆ ನಿರ್ಮಾಣ: ವಿ.ಸೋಮಣ್ಣ

ಡ್ರಾಪ್ ಬಾಕ್ಸ್‌ : ಹೆಡ್‌ಫೋನ್‌ಗಿಂತ ಒಳ್ಳೆಯ ಗೆಳೆಯನಿಲ್ಲ

ಡ್ರಾಪ್ ಬಾಕ್ಸ್‌ : ಹೆಡ್‌ಫೋನ್‌ಗಿಂತ ಒಳ್ಳೆಯ ಗೆಳೆಯನಿಲ್ಲ

ಮನೋರಂಜನೆ ಅಸ್ತ್ರವಾದ ಗುಬ್ಬಿ ಮೇಲೆ ಬ್ರಹ್ಮಾಸ್ತ್ರ

ನಾನು ನೋಡಿದಂತೆ ಸಿನೆಮಾ : ಮನೋರಂಜನೆ ಅಸ್ತ್ರವಾದ ಗುಬ್ಬಿ ಮೇಲೆ ಬ್ರಹ್ಮಾಸ್ತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.