ದೌರ್ಜನ್ಯ ಪ್ರಕರಣ ತಡೆಗೆ ಕ್ರಮವಹಿಸಿ


Team Udayavani, Nov 24, 2020, 7:32 PM IST

ದೌರ್ಜನ್ಯ ಪ್ರಕರಣ ತಡೆಗೆ ಕ್ರಮವಹಿಸಿ

ಚಿತ್ರದುರ್ಗ: ಜಿಲ್ಲೆಯಲ್ಲಿ 2020ರ ಜು. 1 ರಿಂದ ನ. 15 ರವರೆಗೆ 24 ದೌರ್ಜನ್ಯ ಪ್ರಕರಣ ದಾಖಲಾಗಿದ್ದು, ಇದಕ್ಕೆ ಸಂಬಂಧಿಸಿ 26.30 ಲಕ್ಷ ರೂ. ಪರಿಹಾರ ನೀಡಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಮಮತಾ ಮಾಹಿತಿ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ 2020ನೇ ಸಾಲಿನ 4ನೇ ತ್ತೈಮಾಸಿಕ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಗೆ ಮಾಹಿತಿ ನೀಡಿದರು. ಪರಿಶಿಷ್ಟ ಜಾತಿಯ22 ಪ್ರಕರಣಗಳು, ಪರಿಶಿಷ್ಟ ವರ್ಗಕ್ಕೆ ಸಂಬಂಧಿಸಿದಂತೆ 2 ಪ್ರಕರಣಗಳು ಸೇರಿ ಒಟ್ಟು 24 ದೌರ್ಜನ್ ಪ್ರಕರಣಗಳು ದಾಖಲಾಗಿವೆ. 3 ಕೊಲೆ ಪ್ರಕರಣಗಳಿಗೆ ಸಂಬಂಧಿಸಿದಂತೆ 12.37 ಲಕ್ಷ ರೂ. ಪರಿಹಾರ ಧನ ನೀಡಲಾಗಿದೆ. 1 ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿ ಸಿದಂತೆ ರೂ.4,93,750 ಪರಿಹಾರ ಧನ ನೀಡಲಾಗಿದೆ. 20 ಜಾತಿ ನಿಂದನೆ, ಗುಂಪು ಘರ್ಷಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಒಟ್ಟು 9 ಲಕ್ಷ ರೂ. ಪರಿಹಾರ ಮಂಜೂರು ಮಾಡಲಾಗಿದೆ ಎಂದು ತಿಳಿಸಿದರು.

ಸಭೆಯ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ಕವಿತಾ ಮನ್ನಿಕೇರಿ ಮಾತನಾಡಿ, ಜಿಲ್ಲೆಯಲ್ಲಿ ದೌರ್ಜನ್ಯ ಪ್ರಕರಣ ತಡೆಗಟ್ಟುವುದರ ಜೊತೆಗೆ ಹೆಚ್ಚಿನ ಜಾಗೃತಿ ಮೂಡಿಸಲು ಸೂಚಿಸಿದರು. ದೌರ್ಜನ್ಯ ಪ್ರಕರಣಗಳಿಗೆ ಸಂಬಂಧಿಸಿದಂತೆ ಕಾನೂನಿನಲ್ಲಿರುವ ದಂಡನೆಗಳು ಮತ್ತು ಶಿಕ್ಷೆಯಪ್ರಮಾಣಕ್ಕೆ ಸಂಬಂಧಪಟ್ಟಂತೆ ಮಹಿಳೆಯರು, ಮಕ್ಕಳುಹಾಗೂ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲು ಕ್ರಮವಹಿಸಬೇಕು ಎಂದು ಹೇಳಿದರು.

ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಮಮತಾ ಪ್ರತಿಕ್ರಿಯಿಸಿ, 2020-21ನೇ ಸಾಲಿನಲ್ಲಿ ರೂ.14 ಲಕ್ಷ ಬಿಡುಗಡೆಯಾಗಿದ್ದು, ಈ ಅನುದಾನದಲ್ಲಿ ಜಾಗೃತಿ ಮೂಡಿಸಲು ಕ್ರಮವಹಿಸಲಾಗುವುದು ಎಂದರು. ಜಿಲ್ಲೆಯ ಪ್ರತಿ ತಾಲ್ಲೂಕಿನಲ್ಲೂ ಜಾಗೃತಿ ಮೂಡಿಸುವ ಕೆಲಸವಾಗಬೇಕು. ಸಮಸ್ಯೆ ಇರುವ ಕಡೆ ಸಮಿತಿ ಸದಸ್ಯರು ಖುದ್ದಾಗಿ ಭೇಟಿ ನೀಡಿ ಮಾಹಿತಿ ಸಂಗ್ರಹಿಸೋಣ ಎಂದು ಸಮಿತಿ ಸದಸ್ಯರು ಹೇಳಿದರು.

ನಾಮನಿರ್ದೇಶನ: ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿಗೆ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಜಿ.ರೇಖಾ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ರಾಜನಾಯ್ಕ ಅವರನ್ನುನಾಮನಿರ್ದೇಶನ ಮಾಡಿ ಸಭೆ ಅನುಮೋದಿಸಿತು.ಸಭೆಯಲ್ಲಿ ಶಾಸಕ ಜಿ.ಎಚ್‌.ತಿಪ್ಪಾರೆಡ್ಡಿ, ಜಿಪಂ ಸಿಇಒ ಟಿ.ಯೋಗೇಶ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಜಿ.ರಾಧಿ ಕಾ, ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯರಾದ ರಾಜಪ್ಪ, ಅರುಣ್‌ ಕುಮಾರ್‌, ಕೃಷ್ಣಪ್ಪ, ಬೋರಯ್ಯ, ಸಿದ್ದಮ್ಮ, ಭಕ್ತ ಪ್ರಹ್ಲಾದ್‌ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

8-ptr

Puttur: ಶ್ರೀ ಮಹಾಲಿಂಗೇಶರ ದೇವರ ಅವಭೃಥ ಸವಾರಿ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.