ಫೆಬ್ರವರಿ ಮೊದಲ ವಾರ ಜಾತಿ ಗಣತಿ ವರದಿ : ಆಂಜನೇಯ
Team Udayavani, Jan 27, 2017, 3:45 AM IST
ಚಿತ್ರದುರ್ಗ: ಅಧಿಕಾರಿಗಳು ಮಾಹಿತಿ ನೀಡಲು ತಡವಾಗಿದ್ದರಿಂದ ಮುಂದಕ್ಕೆ ಹೋಗಿದ್ದ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಗಣತಿ ಸಮೀಕ್ಷಾ ವರದಿಯನ್ನು ಇದೇ ತಿಂಗಳಾಂತ್ಯಕ್ಕೆ ಇಲ್ಲವೇ ಫೆಬ್ರವರಿ ಮೊದಲ ವಾರದಲ್ಲಿ ಪ್ರಕಟಿಸಲಾಗುವುದು ಎಂದು ಸಮಾಜ ಕಲ್ಯಾಣ ಸಚಿವ ಎಚ್.ಆಂಜನೇಯ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಸಚಿವರು, ಜಾತಿ ಗಣತಿ ವರದಿ ಬಿಡುಗಡೆ ಸಂಬಂಧ ಈಗಾಗಲೇ ಮುಖ್ಯಮಂತ್ರಿ ಮತ್ತು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರ ಜೊತೆಗೆ ಹಲವು ಸುತ್ತಿನ ಮಾತುಕತೆ ನಡೆಸಲಾಗಿದೆ. ಅಧಿಧಿಕಾರಿಗಳು ಕೆಲವು ಮಾಹಿತಿ ನೀಡುವಲ್ಲಿ ವಿಳಂಬ ಮಾಡಿದ್ದರಿಂದ ವರದಿ ಪ್ರಕಟ ತಡವಾಗಿತ್ತು. ಜನವರಿ ಅಂತ್ಯ ಅಥವಾ ಫೆಬ್ರವರಿ ಮೊದಲ ವಾರದಲ್ಲಿ ಸಮೀಕ್ಷೆ ವರದಿಯನ್ನು ಪ್ರಕಟಿಸಲಾಗುವುದು. ಯಾವುದೇ ಕಾರಣಕ್ಕೂ ವರದಿ ಬಿಡುಗಡೆ ವಿಳಂಬ ಮಾಡುವುದಿಲ್ಲ ಎಂದರು.
ಈಗಾಗಲೇ ಎಲ್ಲ ಮಾಹಿತಿಯನ್ನು ಆಯೋಗಕ್ಕೆ ಕಳುಹಿಸಿಕೊಡಲಾಗಿದೆ. ವರದಿ ಬಿಡುಗಡೆ ಮಾಡುವ ಸಲುವಾಗಿ ಆಯೋಗದೊಂದಿಗೆ ಮತ್ತೂಂದು ಸುತ್ತಿನ ಚರ್ಚೆ ನಡೆಸಲು ಜ.29ರಂದು ಸಭೆ ಕರೆಯಲಾಗಿದೆ. ಈ ತಿಂಗಳಾಂತ್ಯದಲ್ಲಿ ವರದಿ ಬಿಡುಗಡೆ ಮಾಡಲು ಸಾಧ್ಯವಾಗದಿದ್ದರೆ ಫೆಬ್ರವರಿ ಮೊದಲ ವಾರದಲ್ಲಿ ಬಿಡುಗಡೆ ಖಚಿತ. ಇದರಲ್ಲಿ ಅನುಮಾನ ಬೇಡ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಎಸ್.ಆರ್.ಪಾಟೀಲ್ ಗೆ ಟಿಕೆಟ್ ವಿಚಾರವಾಗಿ ನನ್ನ ಬಳಿ ಚರ್ಚೆ ಮಾಡಿಲ್ಲ: ಎಂ.ಬಿ.ಪಾಟೀಲ್
ಸಿದ್ದರಾಮಯ್ಯ ಬೇಕಾದರೆ ಗೋ ಮಾಂಸ ತಿನ್ನಲಿ, ಆದರೆ ವಕೀಲಿಕೆ ಮಾಡಬೇಡಿ: ಛಲವಾದಿ ನಾರಾಯಣಸ್ವಾಮಿ
ರಾಮನಗರದಲ್ಲಿ ಕುಮಾರಸ್ವಾಮಿ ಆಪರೇಷನ್! ಡಿಕೆ ಬ್ರದರ್ಸ್ ಗೆ ಟಕ್ಕರ್ ಕೊಡುತ್ತಾರಾ ಎಚ್ ಡಿಕೆ?
ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಒಂಟಿಯಾಗುತ್ತಿದ್ದಾರೆಯೇ? ಹೈಕಮಾಂಡ್ ನೀಡಿದ ಸಂದೇಶವೇನು?
ಮೇಲ್ಮನೆ: ಇಂದು ಸ್ಪಷ್ಟ ಚಿತ್ರಣ? ಕಾಂಗ್ರೆಸ್ ಪಟ್ಟಿಯಲ್ಲಿ ಹಲವು ಪ್ರಭಾವಿ ನಾಯಕರ ಹೆಸರು