ಹೆಲ್ಮೆಟ್‌ ಧರಿಸದ ಸವಾರರಿಗೆ ಬಿತ್ತು ದಂಡ


Team Udayavani, Dec 6, 2018, 4:52 PM IST

cta-1.jpg

ಚಿತ್ರದುರ್ಗ: ಹೆಲ್ಮೆಟ್‌ ಮತ್ತು ವಾಹನ ಚಾಲನಾ ಪರವಾನಗಿ ಇಲ್ಲದೆ ಚಾಲನೆ ಮಾಡುತ್ತಿದ್ದ ದ್ವಿಚಕ್ರ ವಾಹನ ಸವಾರರಿಗೆ ಸಂಚಾರಿ ಪೊಲೀಸ್‌ ಠಾಣೆ ಪಿಎಸ್‌ಐ ರೇವತಿ ತಡೆದು ದಂಡ ವಿಧಿಸಿದರು. ಮದಕರಿನಾಯಕ ಪ್ರತಿಮೆ ಸಮೀಪ ಸಂಚಾರಿ ಠಾಣೆ ಪಿಎಸ್‌ಐ ರೇವತಿ ಕೈಯಲ್ಲಿ ಲಾಠಿ ಹಿಡಿದು ರಸ್ತೆಗಿಳಿದರು.

ಹೆಲ್ಮೆಟ್‌ ಧರಿಸದೆ ದ್ವಿಚಕ್ರವಾಹನ ಚಾಲನೆ ಮಾಡುತ್ತಿದ್ದ ಸವಾರರಿಗೆ ಹಾಗೂ ದಾಖಲೆಗಳಿಲ್ಲದ ಓಡಿಸುತ್ತಿದ್ದ ಆಟೋ ಹಾಗೂ ಇತರೆ ವಾಹನಗಳಿಂದಲೂ ದಂಡ ವಸೂಲಿ ಮಾಡಿದರು. 

ದ್ವಿಚಕ್ರ ವಾಹನಗಳನ್ನು ಅಡ್ಡಗಟ್ಟಿ ನಿಲ್ಲಿಸುತ್ತಿದ್ದುದನ್ನು ದೂರದಿಂದ ಗಮನಿಸಿದ ಕೆಲವು ದ್ವಿಚಕ್ರ ವಾಹನ ಚಾಲಕರು ತಮ್ಮ ವಾಹನಗಳನ್ನು ಹಿಂದಕ್ಕೆ ತಿರುಗಿಸಿಕೊಂಡು ಪಲಾಯನಗೈದರು. ಮದ್ಯ ಸೇವಿಸಿ ದ್ವಿಚಕ್ರವಾಹನ ಓಡಿಸುತ್ತಿದ್ದ ಕೆಲವು ಚಾಲಕರು ರೇವತಿಯವರ ಕೈಗೆ ಸಿಕ್ಕಿ ಬಿದ್ದು ದಂಡ ತೆತ್ತರು. ವೇಗವಾಗಿ ಬರುತ್ತಿದ್ದ ದ್ವಿಚಕ್ರ ವಾಹನಗಳಿಗೆ ಲಾಠಿಯನ್ನು ಅಡ್ಡ ಇಟ್ಟು ವಾಹನವನ್ನು ರಸ್ತೆ ಬದಿಗೆ ನಿಲ್ಲಿಸುವಂತೆ ಸೂಚಿಸಿದಾಗ ಕೆಲವರು ತಮ್ಮ ಗುರುತಿನಚೀಟಿಗಳನ್ನು ತೋರಿಸಿ ತುರ್ತಾಗಿ ಹೋಗಬೇಕಿದೆ ಬಿಡಿ ಎಂದು ಕೇಳಿಕೊಳ್ಳುತ್ತಿದ್ದರು.
 
ಅದಕ್ಕೆ ಬುದ್ಧಿವಂತರೇ ಕಾನೂನು ಗೌರವಿಸದಿದ್ದರೆ ಹೇಗೆ ಎಂದು ನಯವಾಗಿಯೇ ತಿಳಿಸಿದ ರೇವತಿ ದಂಡ ಕಟ್ಟಿಸುತ್ತಿದ್ದರು. ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್‌ ಧರಿಸಬೇಕೆಂದು ಸುಪ್ರೀಂ ಕೋರ್ಟ್‌ ತೀರ್ಪು ನೀಡಿದೆ. ಆದರೂ ಚಿತ್ರದುರ್ಗದಲ್ಲಿ ಸಾಕಷ್ಟು ಮಂದಿ ಹೆಲ್ಮೆಟ್‌ ಇಲ್ಲದೆ ದ್ವಿಚಕ್ರವಾಹನ ಚಾಲನೆ ಮಾಡುತ್ತಿದ್ದಾರೆ. ಸಂಪೂರ್ಣವಾಗಿ ಎಲ್ಲರೂ ಹೆಲ್ಮೆಟ್‌ ಧರಿಸುವಂತೆ ಮಾಡುವುದು ನಮ್ಮ ಉದ್ದೇಶ. ಅದೇ ರೀತಿ ವಾಹನಗಳ
ದಾಖಲೆಗಳನ್ನು ಪರಿಶೀಲಿಸುವುದು ಅತಿ ಮುಖ್ಯವಾಗಿದ್ದು, ಕಾನೂನನ್ನು ಗೌರವಿಸುವ ಜಾಗೃತಿ ಜನರಲ್ಲಿ ಮೂಡಬೇಕಿದೆ ಎಂದು ಪಿಎಸ್‌ಐ ರೇವತಿ ತಿಳಿಸಿದರು. 

ಟಾಪ್ ನ್ಯೂಸ್

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.