ಸಂಚಾರಿ ಗ್ರಂಥಾಲಯ ಶೀಘ್ರ ಆರಂಭ


Team Udayavani, Apr 10, 2021, 8:42 PM IST

ಹಬಬಷಬಚಷ

ಚಿತ್ರದುರ್ಗ: ನಗರದಲ್ಲಿ ಓದುಗರಿಗಾಗಿ ಶೀಘ್ರದಲ್ಲಿಯೇ ನಗರ ಸಂಚಾರಿ ಗ್ರಂಥಾಲಯ ಪ್ರಾರಂಭವಾಗಲಿದೆ ಎಂದು ನಗರಸಭೆ ಅಧ್ಯಕ್ಷೆ ತಿಪ್ಪಮ್ಮ ವೆಂಕಟೇಶ್‌ ತಿಳಿಸಿದರು.

ನಗರ ಕೇಂದ್ರ ಗ್ರಂಥಾಲಯದ ಆವರಣದಲ್ಲಿರುವ ಮಕ್ಕಳ ಸಮುದಾಯ ಗ್ರಂಥಾಲಯದಲ್ಲಿ ಶುಕ್ರವಾರ ಆಯೋಜಿಸಿದ್ದ ಗ್ರಂಥಾಲಯ ಪ್ರಾಧಿಕಾರದ ಸಭೆ ಹಾಗೂ 2021-22ನೇ ಸಾಲಿನ ಅಂದಾಜು ಆಯವ್ಯಯ ಸಭೆಯಲ್ಲಿ ಮಾತನಾಡಿದರು. ನಗರದಲ್ಲಿ ಸಂಚಾರಿ ಗ್ರಂಥಾಲಯ ಪ್ರಾರಂಭಿಸಲು ವಾಹನ ಪೂರೈಸುವಂತೆ ಈಗಾಗಲೇ ಕೆಎಸ್‌ಆರ್‌ಟಿಸಿ ನಿಗಮದ ಅಧ್ಯಕ್ಷರಿಗೆ ಪತ್ರ ಬರೆಯಲಾಗಿದ್ದು, ಇದಕ್ಕೆ ಅನುಮೋದನೆ ನೀಡಲಾಗಿದೆ ಎಂದರು.

ಬೆಂಗಳೂರು, ಮಂಗಳೂರು, ಶಿವಮೊಗ್ಗ, ದಾವಣಗೆರೆ, ಕಲಬುರಗಿ ಸೇರಿದಂತೆ ರಾಜ್ಯದ 10 ಕಡೆ ಈಗಾಗಲೇ ಸಂಚಾರಿ ಗ್ರಂಥಾಲಯ ಕಾರ್ಯನಿರ್ವಹಿಸುತ್ತಿದ್ದು, ಚಿತ್ರದುರ್ಗದಲ್ಲಿ ಕೆಲವೇ ದಿನಗಳಲ್ಲಿ ಸಂಚಾರಿ ಲೈಬ್ರರಿ ಪ್ರಾರಂಭವಾಗಲಿದೆ. ಸಂಚಾರಿ ಗ್ರಂಥಾಲಯದಲ್ಲಿ ಸುಮಾರು 5 ಸಾವಿರಕ್ಕೂ ಹೆಚ್ಚು ಪುಸ್ತಕಗಳ ವ್ಯವಸ್ಥೆ ಮಾಡಲಾಗುತ್ತದೆ.

ಸಾರ್ವಜನಿಕ ಓದುಗರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು. ಮುಖ್ಯ ಗ್ರಂಥಾಲಯಾ ಧಿಕಾರಿ ಪಿ.ಆರ್‌.ತಿಪ್ಪೇಸ್ವಾಮಿ ಮಾತನಾಡಿ, ಜಿಲ್ಲೆಯಲ್ಲಿ ಡಿಜಿಟಲ್‌ ಗ್ರಂಥಾಲಯಕ್ಕೆ ಈವರೆಗೆ 43,726 ಜನರು ಸದಸ್ಯತ್ವ ಪಡೆದಿದ್ದಾರೆ. ಡಿಜಿಟಲ್‌ ಗ್ರಂಥಾಲಯದಲ್ಲಿ ಓದುಗರಿಗಾಗಿ 10 ಲಕ್ಷಕ್ಕೂ ಹೆಚ್ಚು ಪುಸ್ತಕಗಳು ಲಭ್ಯವಿದ್ದು, ಓದುಗರು ಇದರ ಸದುಪಯೋಗ ಪಡೆಯಬಹುದು ಎಂದರು ಜಿಲ್ಲೆಯಲ್ಲಿರುವ ಶಾಲಾ-ಕಾಲೇಜುಗಳಿಗೆ ಗ್ರಂಥಾಲಯ ಸಿಬ್ಬಂದಿ ಭೇಟಿ ನೀಡಿ, ಡಿಜಿಟಲ್‌ ಗ್ರಂಥಾಲಯ ನೋಂದಣಿ ಬಗ್ಗೆ ಮತ್ತು ಇದರ ಉಪಯೋಗದ ಬಗ್ಗೆ ಮಾಹಿತಿ ನೀಡುತ್ತಿದ್ದಾರೆ.

ಡಿಜಿಟಲ್‌ ಗ್ರಂಥಾಲಯದಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳ ನೋಂದಣಿ ಮಾಡಿಸಿಕೊಳ್ಳುವರು ನೇರವಾಗಿ ನಗರ ಕೇಂದ್ರ ಗ್ರಂಥಾಲಯಕ್ಕೆ ಭೇಟಿ ನೀಡಿ, ಸದಸ್ಯತ್ವ ಪಡೆದುಕೊಳ್ಳಬಹುದು ಎಂದು ತಿಳಿಸಿದರು. ನಗರದ ಧವಳಗಿರಿ ಬಡವಾಣೆಯಲ್ಲಿ ಸಾರ್ವಜನಿಕ ಗ್ರಂಥಾಲಯ ಇಲಾಖೆಯ ಅನುದಾದಲ್ಲಿ ನಿರ್ಮಾಣಗೊಂಡ ಗ್ರಂಥಾಲಯವನ್ನು ಸಾರ್ವಜನಿಕರಿಗೆ ಅನುಕೂಲವಾಗುವಂತೆ ಡಿಜಿಟಲ್‌ ಗ್ರಂಥಾಲಯ ಹಾಗೂ ಗ್ರಂಥಾಲಯವನ್ನು ತಿಂಗಳೊಳಗಾಗಿ ಪ್ರಾರಂಭಿಸುವುದಾಗಿ ಸಭೆಗೆ ಮಾಹಿತಿ ನೀಡಿದರು.

ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅನುಕೂಲವಾಗುವಂತಹ ಪುಸ್ತಕಗಳನ್ನು ಹಾಗೂ ಹೆಸರಾಂತ ಲೇಖಕರ ಪುಸ್ತಕಗಳನ್ನು 2021-22ನೇ ಸಾಲಿನ ಗ್ರಂಥಾಲಯ ಪ್ರಾಕಾರದ ಕೋಟಾದಲ್ಲಿ ಓದುಗರ ಬೇಡಿಕೆ ಅನ್ವಯ, ಪ್ರಸ್ತುತ ವರ್ಷದಲ್ಲಿ ಚಿತ್ರದುರ್ಗ ಜಿಲ್ಲೆಯಿಂದ ಐಎಎಸ್‌, ಕೆಎಎಸ್‌, ಪಾಸಾದ ವಿದ್ಯಾರ್ಥಿಗಳಿಂದ ಹಾಗೂ ಜಿಲ್ಲಾ ಧಿಕಾರಿಗಳ ಹಾಗೂ ಮುಖ್ಯ ಕಾರ್ಯನಿರ್ವಹಣಾ ಧಿಕಾರಿಗಳ ಮೂಲಕ ಸ್ಪರ್ಧಾತ್ಮಕ ಪುಸ್ತಕಗಳ ಪಟ್ಟಿಯನ್ನು ಸ್ವೀಕರಿಸಲಾಗಿದ್ದು, ಹೆಸರಾಂತ ಪ್ರಕಟಣೆಯ ಪುಸ್ತಕಗಳನ್ನು ಸ್ಪರ್ಧಾತ್ಮಕ ಅಧ್ಯಯನ ಕೇಂದ್ರ ಹಾಗೂ ಶಾಖಾ ಗ್ರಂಥಾಲಯಗಳಿಗೆ ಪುಸ್ತಕಗಳನ್ನು ಸರಬರಾಜು ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಇದೇ ವೇಳೆ ನಗರ ಕೇಂದ್ರ ಗ್ರಂಥಾಲಯದ ಆವರಣದಲ್ಲಿ ಓದುಗರಿಗೆ ಹೊರಾಂಗಣ ಓದುವ ಆವರಣ ನಿರ್ಮಾಣಕ್ಕೆ ಸಭೆಯಲ್ಲಿ ಅನುಮೋದನೆ ನೀಡಲಾಯಿತು. 2021-22ನೇ ಸಾಲಿನ ಚಿತ್ರದುರ್ಗ ಜಿಲ್ಲಾ ಗ್ರಂಥಾಲಯ ಪ್ರಾ ಧಿಕಾರದಲ್ಲಿ ಒಟ್ಟು ರೂ.80 ಲಕ್ಷ ಅಂದಾಜು ಆದಾಯ ನಿರೀಕ್ಷಿಸಲಾಗಿದೆ. ರೂ.77 ಲಕ್ಷ ಅಂದಾಜು ವ್ಯಯ ಆಗುವ ನೀರಿಕ್ಷೆ ಇದೆ ಎಂದು ಸಭೆಗೆ ತಿಳಿಸಿದರು. ಹಿರಿಯ ವಕೀಲರಾದ ಕೃಷ್ಣಮೂರ್ತಿ, ಸರ್ಕಾರಿ ಕಲಾ ಕಾಲೇಜು ಗ್ರಂಥಪಾಲಕ ತಿಪ್ಪೇಸ್ವಾಮಿ, ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜು ಪ್ರೌಢ ಶಾಲಾ ವಿಭಾಗದ ಗ್ರಂಥಪಾಲಕ ಟಿ.ಎನ್‌.ಪ್ರಸನ್ನ ಕುಮಾರ್‌ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.