ತುಂಗಾ ಹಿನ್ನೀರು ಯೋಜನೆ ಶೀಘ್ರ ಜಾರಿಯಾಗಲಿ


Team Udayavani, Aug 2, 2018, 5:27 PM IST

cta-2.jpg

ಮೊಳಕಾಲ್ಮೂರು: ಭೀಕರ ಬರಕ್ಕೆ ತುತ್ತಾಗುತ್ತಿರುವ ಮೊಳಕಾಲ್ಮೂರು ಕ್ಷೇತ್ರದ ಜನತೆಗೆ ಸಮರ್ಪಕವಾಗಿ ಕುಡಿಯುವ ನೀರು ಪೂರೈಕೆ ಮಾಡುವ ತುಂಗಾ ಹಿನ್ನೀರು ಯೋಜನೆಯನ್ನು ಕೂಡಲೇ ಅನುಷ್ಠಾನಗೊಳಿಸಬೇಕು. ಇಲ್ಲದಿದ್ದರೆ ರಾಜ್ಯ ಸರ್ಕಾರದ ವಿರುದ್ಧ ಹೋರಾಟ ಅನಿವಾರ್ಯ ಎಂದು ಶಾಸಕ ಬಿ. ಶ್ರೀರಾಮುಲು ಎಚ್ಚರಿಸಿದರು.

ಪಟ್ಟಣದ ಬಸ್‌ ನಿಲ್ದಾಣದ ಆವರಣದಲ್ಲಿ ಜಿಲ್ಲಾಡಳಿತ ಹಾಗೂ ಪಟ್ಟಣ ಪಂಚಾಯತ್‌ ವತಿಯಿಂದ ನಗರೋತ್ಥಾನ ಯೋಜನೆಯಡಿ ವಿವಿಧ ಯೋಜನೆಗಳ ಕಾಮಗಾರಿಗಳಿಗೆ ಭೂಮಿಪೂಜೆ ಹಾಗೂ ಪರಿಶಿಷ್ಟ ಜಾತಿ ಮತ್ತು ವರ್ಗಗಳ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನದ ಚೆಕ್‌ ವಿತರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಈ ಭಾಗದ ಜನತೆಗೆ ಕುಡಿಯುವ ನೀರು ನೀಡುವುದು ಬಹು ದೊಡ್ಡ ಸವಾಲಾಗಿದೆ. ಇಲ್ಲಿ ಯಾವುದೇ ಜಲಮೂಲವಿಲ್ಲದ ಕಾರಣ
ನೀರಿನ ಸಮಸ್ಯೆ ಉದ್ಭವಿಸಿದೆ. ಚುನಾವಣಾ ಪೂರ್ವದಲ್ಲಿ ತುಂಗಾ ಹಿನ್ನೀರು ಯೋಜನೆಯನ್ನು ಜಾರಿಗೊಳಿಸುವುದಾಗಿ ಭರವಸೆ ನೀಡಲಾಗಿತ್ತು. ಆದರೆ ಈಗಿನ ಸಮ್ಮಿಶ್ರ ಸರ್ಕಾರ ಈ ಯೋಜನೆ ಬಗ್ಗೆ ಅಷ್ಟೊಂದು ಆಸಕ್ತಿ ವಹಿಸುತ್ತಿಲ್ಲ. ಆದ್ದರಿಂದ ಹಠ ಹಿಡಿದು ಯೋಜನೆಯನ್ನು ಜಾರಿಗೊಳಿಸುವ ಉದ್ದೇಶ ಹೊಂದಿದ್ದೇನೆ ಎಂದರು.

ಕ್ಷೇತ್ರದ ಜನರಿಗೆ ಸಮರ್ಪಕವಾಗಿ ಕುಡಿಯುವ ನೀರಿನ ವ್ಯವಸ್ಥೆ ಮಾಡುವ ಸಲುವಾಗಿ ವೈಯಕ್ತಿಕ ವೆಚ್ಚದಲ್ಲಿ ಕೊಳವೆಬಾವಿಗಳನ್ನು ಕೊರೆಸಲಾಗುತ್ತಿದೆ. ಆದರೆ ಅಂತರ್ಜಲ ಕಡಿಮೆಯಾಗಿರುವುದರಿಂದ ನೀರು ಲಭ್ಯವಾಗುತ್ತಿಲ್ಲ. ಹಾಗಾಗಿ ಯೋಜನೆ ಜಾರಿ ಸಂಬಂಧ ಸಚಿವ ಕೃಷ್ಣ ಬೈರೇಗೌಡ ಹಾಗೂ ಚಳ್ಳಕೆರೆ ಶಾಸಕ ಟಿ. ರಘುಮೂರ್ತಿ ಅವರೊಂದಿಗೆ ಚರ್ಚಿಸಿದ್ದು, ಅತೀ ಶೀಘ್ರದಲ್ಲಿ ತುಂಗಾ ಹಿನ್ನೀರು ಯೋಜನೆ ಜಾರಿಗೊಳಿಸುವಂತೆ ಒತ್ತಾಯಿಸಲಾಗಿದೆ. ಸರ್ಕಾರ ಈ ಯೋಜನೆ ಜಾರಿಗೆ ವಿಳಂಬ ಮಾಡಿದಲ್ಲಿ ಕ್ಷೇತ್ರದ ಜನರೊಂದಿಗೆ ಸೇರಿಕೊಂಡು ಉಗ್ರ ಹೋರಾಟ ಮಾಡುವುದಾಗಿ ಗುಡುಗಿದರು.

ಪಟ್ಟಣ ಪಂಚಾಯತ್‌ ಅಧ್ಯಕ್ಷ ಜಿ. ಪ್ರಕಾಶ್‌ ಮಾತನಾಡಿ, ಮೊಳಕಾಲ್ಮೂರು ಪಟ್ಟಣ ರಾಜ್ಯದಲ್ಲಿಯೇ ಅತ್ಯಂತ ಹಿಂದುಳಿದ ಪ್ರದೇಶಗಳಲ್ಲಿ ಒಂದು. ಭೌಗೋಳಿಕವಾಗಿ, ಶೈಕ್ಷಣಿಕವಾಗಿ, ಸಾಮಾಜಿಕವಾಗಿ, ಆರ್ಥಿಕವಾಗಿ ಹಿಂದುಳಿಯಲು ಶಾಶ್ವತ ನೀರಾವರಿ ಮೂಲ ಇಲ್ಲದಿರುವುದೇ ಕಾರಣ. ಕೂಡ್ಲಿಗಿ ಕ್ಷೇತ್ರದ ಶಾಸಕ ಎನ್‌. ವೈ. ಗೋಪಾಲಕೃಷ್ಣ ಅವರು ರಂಗಯ್ಯನದುರ್ಗ ಜಲಾಶಯದಿಂದ ಪಟ್ಟಣಕ್ಕೆ ಕುಡಿಯುವ ನೀರಿನ ಯೋಜನೆ ಜಾರಿಗೆ ತಂದಿದ್ದರು. ಅದೇ
ಮಾದರಿಯಲ್ಲಿ ಶಾಸಕ ಬಿ. ಶ್ರೀರಾಮುಲು 95 ಲಕ್ಷ ರೂ. ವೆಚ್ಚದಲ್ಲಿ ಜಲೋತ್ಕರ್ಷ ಯೋಜನೆಯಡಿ ಕೊಳವೆಬಾವಿ ಕೊರೆಸುತ್ತಿದ್ದಾರೆ. ಆದರೆ ಅಂತರ್ಜಲ ಮಟ್ಟ ಕಡಿಮೆಯಾಗಿರುವುದರಿಂದ ನೀರು ಸಿಗುತ್ತಿಲ್ಲ. ಪಟ್ಟಣ ವ್ಯಾಪ್ತಿಯ ಕೋತಲಗೊಂದಿಕೆರೆಯಲ್ಲಿ ಹಾಕಿರುವ ಕೊಳವೆಬಾವಿಯಿಂದ ಪಟ್ಟಣದ ಜನತೆಗೆ ನೀರು ಪೂರೈಕೆ
ಮಾಡುವಂತೆ ಶಾಸಕರು ಸೂಚಿಸಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ಜಿಪಂ ಮಾಜಿ ಸದಸ್ಯ ಎಚ್‌.ಟಿ. ನಾಗಿರೆಡ್ಡಿ, ತಾಪಂ ಸದಸ್ಯರಾದ ಟಿ. ರೇವಣ್ಣ, ನರೇಂದ್ರಬಾಬು, ತಾಪಂ ಕಾರ್ಯನಿರ್ವಣಾಧಿಕಾರಿ ಸಿ.ಎನ್‌. ಚಂದ್ರಶೇಖರಯ್ಯ, ಪಪಂ ಮುಖ್ಯಾಧಿಕಾರಿ ಎಸ್‌. ರುಕ್ಮಿಣಿ, ಬಿಜೆಪಿ ಕಾರ್ಯದರ್ಶಿ ಶ್ರೀರಾಮ ರೆಡ್ಡಿ, ನಗರಾಧ್ಯಕ್ಷ ಶಾಂತಾರಾಂ ಬಸಾಪತಿ, ಮಹಿಳಾ ಘಟಕದ ಜಿಲ್ಲಾ ಉಪಾಧ್ಯಕ್ಷೆ ಈರಮ್ಮ, ಮಂಡಲಾಧ್ಯಕ್ಷೆ ಶ್ರೀದೇವಿ, ಮುಖಂಡರಾದ ಕೆ. ಬಸಣ್ಣ, ಬಿ. ವಿಜಯ್‌, ಟಿ.ಟಿ. ರವಿಕುಮಾರ್‌, ವಿನಯ್‌ ಮೊದಲಾದವರು ಭಾಗವಹಿಸಿದ್ದರು.

ನನ್ನನ್ನು ಶಾಸಕನಾಗಿ ಆಯ್ಕೆ ಮಾಡಿದ ಯಾರೊಬ್ಬರೂ ಎದೆಗುಂದಬಾರದು. ತುಂಗಾ ಹಿನ್ನೀರು ಯೋಜನೆಯನ್ನು ಜಾರಿಗೆ ತರುವುದು ನನ್ನ ಕರ್ತವ್ಯ. ಹಾಗಾಗಿ ಆ ನಿಟ್ಟಿನಲ್ಲಿ ಕಾರ್ಯೋನ್ಮುಖನಾಗಿದ್ದೇನೆ.
 ಬಿ. ಶ್ರೀರಾಮುಲು, ಶಾಸಕರು.

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.