ನೆರೆ ಪರಿಹಾರ ನೀಡಲು ಆಗ್ರಹ

Team Udayavani, Nov 5, 2019, 4:45 PM IST

ಚಿತ್ರದುರ್ಗ: ಮಳೆಯಿಂದ ಬಿದ್ದ ಮನೆಗಳ ನಿರ್ಮಾಣಕ್ಕೆ ಪರಿಹಾರ ನೀಡಲು ಆಗ್ರಹಿಸಿ ರಾಮಗಿರಿ ಟಿ. ವಡೇರಹಳ್ಳಿ ಗ್ರಾಮಸ್ಥರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು. ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಜಮಾಯಿಸಿದ ನೂರಾರು ನೆರೆ ಸಂತ್ರಸ್ತರು, ಮಳೆಯಿಂದ ನಮ್ಮ ಜೀವನವೇ ಸಂಕಷ್ಟಕ್ಕೆ ಸಿಲುಕಿದೆ. ಯಾರ ಬಳಿ ಸಮಸ್ಯೆ ಹೇಳಿಕೊಂಡರು ಪ್ರಯೋಜನವಾಗಿಲ್ಲ ಎಂದು ಅಳಲು ತೋಡಿಕೊಂಡರು.

ರಾತ್ರೋರಾತ್ರಿ ಸುರಿದ ಮಳೆಗೆ ಮನೆಗಳು ಕುಸಿದು ಬಿದ್ದವು. ಇದರಿಂದ ತೀವ್ರ ಸಮಸ್ಯೆಯಾಗಿದೆ. ಹದಿನೈದು ದಿನದ ಹಿಂದೆ ಸ್ಥಳಕ್ಕೆ ಧಾವಿಸಿದ ಅಧಿಕಾರಿಗಳು ಮನೆಗಳ ಮಾಹಿತಿ ಪಡೆದು ಗಂಜಿ ಕೇಂದ್ರ ತೆರೆದು ತಿಂಗಳ ಪರಿಹಾರ ಕೊಟ್ಟು ಕೈತೊಳೆದು ಕೊಂಡರು. ಬಳಿಕ ನಮ್ಮನ್ನು ಮರೆತು ಬಿಟ್ಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕೂಡಲೇ ಮನೆ ನಿರ್ಮಿಸಿಕೊಳ್ಳಲು ಅನುದಾನ ನೀಡಬೇಕು. ಇಲ್ಲವಾದರೆ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು. ಅಪರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಗ್ರಾಮಸ್ಥರಾದ ರಂಗನಾಥ್‌, ಬಾಬು, ಸುಶೀಲಮ್ಮ, ಜಯಮ್ಮ, ಟಿ.ಕಲ್ಲಮ್ಮ, ಬಿ.ಶೋಭಾ, ಕೆ.ರಾಕಾ, ಎಚ್‌.ನಾಗರಾಜ್‌, ಭಾಗ್ಯಮ್ಮ, ರೇಣುಕಾ, ರಾಧಾ ಸೇರಿದಂತೆ ಇತರರು ಪಾಲ್ಗೊಂಡಿದ್ದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಸಮಸ್ಯೆ ಯಾವುದೇ ಇರಲಿ, ಇಷ್ಟಾರ್ಥ ಕಾರ್ಯವಿರಲಿ, ಕೇವಲ 5 ದಿನಗಳಲ್ಲಿ ಪರಿಹಾರಕ್ಕಾಗಿ ಇಂದೇ ಭೇಟಿ ನೀಡಿ
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

  • ಚಿತ್ರದುರ್ಗ: ಕಲಾತ್ಮಕತೆ, ಕಾಲ್ಪನಿಕತೆ ಇದ್ದಾಗ ಮಾತ್ರ ಉತ್ತಮ ಛಾಯಾಗ್ರಾಹಕನಾಗಿ ಹೊರಹೊಮ್ಮಲು ಸಾಧ್ಯ ಎಂದು ಮೈಸೂರಿನ ವನ್ಯಜೀವಿ ಛಾಯಾಗ್ರಾಹಕ ಹಾಗೂ ಅಂತಾರಾಷ್ಟ್ರೀಯ...

  • ಚಿತ್ರದುರ್ಗ: ಭಾರತ ಪೋಲಿಯೋ ಮುಕ್ತವಾಗಿದ್ದರೂ, ಸಂಭವನೀಯ ಪೋಲಿಯೋ ತಡೆಗಟ್ಟುವ ಉದ್ದೇಶದಿಂದ ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಕಡ್ಡಾಯವಾಗಿ ಲಸಿಕೆ ಹಾಕಿಸಬೇಕು...

  • ಚಳ್ಳಕೆರೆ: ಸಮಾಜದಲ್ಲಿ ಉತ್ತಮ ಬದುಕು ನಡೆಸಲು ಪ್ರತಿಯೊಬ್ಬ ವ್ಯಕ್ತಿಯೂ ಶಿಕ್ಷಣವಂತನಾಗಿರಬೇಕಾಗುತ್ತದೆ. ಶಿಕ್ಷಣಕ್ಕೆ ನಮ್ಮೆಲ್ಲರ ಬದುಕನ್ನು ಅತಿ ಎತ್ತರಕ್ಕೆ...

  • ಚಿತ್ರದುರ್ಗ: ದೇಶಾದ್ಯಂತ ಪ್ರತಿ ಹತ್ತು ವರ್ಷಕ್ಕೊಮ್ಮೆ ನಡೆಯುವ ಜನಗಣತಿ 2021ಕ್ಕೆ ನಡೆಯಲಿದ್ದು, ಜಿಲ್ಲಾಡಳಿತ ಈಗಾಗಲೇ ಪೂಕರ ಸಿದ್ಧತೆ ಕೈಗೊಂಡಿದೆ ಎಂದು ಜಿಲ್ಲಾಧಿಕಾರಿ...

  • ಚಳ್ಳಕೆರೆ: ಜಿಲ್ಲೆಯಲ್ಲಿ ಅತಿ ಹೆಚ್ಚು ಕುರಿಗಳು ನಗರದಲ್ಲಿ ವ್ಯಾಪಾರವಾಗುತ್ತದೆ. ಇಲ್ಲಿನ ಮಾರುಕಟ್ಟೆಗೆ ನೆರೆಯ ಆಂಧ್ರ ಪ್ರದೇಶದಿಂದಲೂ ಹೆಚ್ಚಿನ ವರ್ತಕರು...

ಹೊಸ ಸೇರ್ಪಡೆ