ಸಾಗುವಳಿ ಹಕ್ಕು ಪತ್ರ ವಿತರಣೆ ವಿಳಂಬವೇಕೆ?: ಜಾಫರ್‌ ಷರೀಫ್‌

Team Udayavani, Jun 11, 2020, 8:37 AM IST

ಸಾಗುವಳಿ ಹಕ್ಕು ಪತ್ರ ವಿತರಣೆ ವಿಳಂಬವೇಕೆ?: ಜಾಫರ್‌ ಷರೀಫ್‌

ಮೊಳಕಾಲ್ಮೂರು: ತಾಲೂಕಿನ ಅರಣ್ಯ ಪ್ರದೇಶದಲ್ಲಿ ಹಲವಾರು ದಶಕಗಳಿಂದಲೂ ಸಾಗುವಳಿ ಮಾಡುತ್ತಿರುವ ರೈತರಿಗೆ ಅರಣ್ಯ ಹಕ್ಕು ಸಮಿತಿ ಸಾಗುವಳಿ ಪತ್ರ ನೀಡಲು ವಿಳಂಬ ಮಾಡುತ್ತಿದೆ ಎಂದು ಆರೋಪಿಸಿ ಭಾರತ ಕಮ್ಯೂನಿಸ್ಟ್‌ ಪಕ್ಷದ ವತಿಯಿಂದ ಬುಧವಾರ ಪಟ್ಟಣದ ತಾಲೂಕು ಕಚೇರಿ ಆವರಣದಲ್ಲಿ ತಹಶೀಲ್ದಾರ್‌ಗೆ ಮನವಿ ಸಲ್ಲಿಸಲಾಯಿತು.

ಸಿಪಿಐ ತಾಲೂಕು ಪ್ರಧಾನ ಕಾರ್ಯದರ್ಶಿ ಜಾಫರ್‌ ಷರೀಫ್‌ ಮಾತನಾಡಿ, ತಾಲೂಕಿನ ರಾಂಪುರ ಗ್ರಾಮದ ಸ.ನಂ 47, ಬಸಾಪುರ ಸ.ನಂ 14, ದಡಗೂರು ಸ.ನಂ 23 ಹಾಗೂ ಇನ್ನಿತರ ಗ್ರಾಮಗಳಲ್ಲಿನ ಜಮೀನುಗಳಲ್ಲಿ 150ಕ್ಕೂ ಹೆಚ್ಚಿನ ರೈತರು ಸುಮಾರು 50 ವರ್ಷಗಳ ಕಾಲ ಸಾಗುವಳಿ ಮಾಡಿಕೊಂಡು ಜೀವನ ನಡೆಸುತ್ತಿದ್ದಾರೆ. ಸಾಗುವಳಿದಾರರಿಗೆ ಸಾಗುವಳಿ ಹಕ್ಕು ಪತ್ರ ನೀಡದೆ ವಿಳಂಬ ಮಾಡುತ್ತಿರುವುದು ಬಡ ಕುಟುಂಬಗಳ ವಿರೋ ಧಿ ನೀತಿಯಾಗಿದೆ ಎಂದು ಆರೋಪಿಸಿದರು.

ಸಾಗುವಳಿ ಹಕ್ಕು ಪತ್ರ ನೀಡಲು ಕೋರಿ 2005 ರಿಂದ 2016 ರವರೆಗೆ ಅರ್ಜಿಗಳನ್ನು ಸಲ್ಲಿಸಿ ಸಾಗುವಳಿ ಮಾಡುತ್ತಿದ್ದಾರೆ. ಅರಣ್ಯ ಇಲಾಖೆ, ಪರಿಶಿಷ್ಟ ವರ್ಗಗಳ ಇಲಾಖೆ ಹಾಗೂ ಕಂದಾಯ ಇಲಾಖೆಗಳು ಜಂಟಿ ಸರ್ವೆ ಕಾರ್ಯ ಮುಗಿಸಿ ವರದಿ ಸಲ್ಲಿಸಿವೆ. ಸಂಬಂಧಪಟ್ಟ ಆಯಾ ಗ್ರಾಪಂ ಮಟ್ಟದಿಂದ ವಿಭಾಗಾಧಿಕಾರಿಗಳ ಮಟ್ಟದಲ್ಲಿ ಮನವಿ ಸಲ್ಲಿಸಲು ರೈತರಿಗೆ ಸೂಚಿಸಲಾಗಿತ್ತು. ಗ್ರಾಪಂ ಹಿಂಬರಹಗಳ ಆಧಾರದ ಮೇರೆಗೆ ಅರ್ಹ ರೈತರು ಮೇಲ್ಮನವಿಯನ್ನು ಸಲ್ಲಿಸಿದ್ದರು.

ಉಪವಿಭಾಗಾಧಿಕಾರಿಗಳ ಆದೇಶದ ಮೇರೆಗೆ ಪರಿಶಿಷ್ಟ ವರ್ಗಗಳ ಇಲಾಖೆ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಈ ಅರ್ಜಿಗಳನ್ನು ಮರುಪರಿಶೀಲಿಸಲು ಸೂಚಿಸಲಾಗಿತ್ತು. ಸಂಬಂಧಪಟ್ಟ ಅಧಿಕಾರಿಗಳು ವರದಿ ಸಲ್ಲಿಸಲು ವಿಳಂಬ ಮಾಡುತ್ತಿರುವುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ. ಕೂಡಲೇ ಸಂಬಂಧಪಟ್ಟ ಇಲಾಖಾಧಿಕಾರಿಗಳು ಈ ಸಮಸ್ಯೆಯನ್ನು ಪರಿಶೀಲಿಸಿ ರೈತರಿಗೆ ಸಾಗುವಳಿ ಹಕ್ಕುಪತ್ರವನ್ನು ನೀಡಬೇಕೆಂದು ಒತ್ತಾಯಿಸಿದರು.

ತಹಶೀಲ್ದಾರ್‌ ಎಂ. ಬಸವರಾಜ್‌ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಟಿ.ಗುರು ಮೂರ್ತಿ ಅವರಿಗೆ ಮನವಿ ಸಲ್ಲಿಸಲಾಯಿತು. ಸಿಪಿಐ ಮುಖಂಡರಾದ ಕಾಮಯ್ಯ, ಬೋರಯ್ಯ, ಅಂಜಿನಿ, ಮಹಾದೇವಿ, ಪದ್ಮಾವತಿ, ಕರಿಮುತ್ತಯ್ಯ, ಮಲ್ಲಯ್ಯ, ಯಲ್ಲಪ್ಪ, ರುದ್ರೇಸ್ವಾಮಿ, ಬಸಣ್ಣ, ಮೂರ್ತಿ, ವೆಂಕಟೇಶ್‌, ಹೂಲೆಪ್ಪ ಇದ್ದರು.

ಟಾಪ್ ನ್ಯೂಸ್

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

18

Road mishap: ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ; ಓರ್ವ ಸಾವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.