ಸಮಾಜಮುಖೀಯಾಗಿ ಬದುಕಿ

•ಸ್ವರ್ಗ-ನರಕದ ಚಿಂತೆ ಮಾಡೋದು ಸಲ್ಲ: ಶಾಂತವೀರ ಶ್ರೀ

Team Udayavani, Jul 26, 2019, 3:53 PM IST

26-July-36

ಚಿತ್ರದುರ್ಗ: ಧಾರ್ಮಿಕ ಸಮ್ಮೇಳನದಲ್ಲಿ ಡಾ| ಶಾಂತವೀರ ಸ್ವಾಮೀಜಿ ಆಶೀರ್ವಚನ ನೀಡಿದರು.

ಚಿತ್ರದುರ್ಗ: ಸಮಾಜದಲ್ಲಿ ಹೆಜ್ಜೆ ಗುರುತುಗಳನ್ನು ಬಿಟ್ಟು ಹೋಗಬೇಕಾದರೆ ನಮ್ಮನ್ನು ನಾವು ಸಮಾಜಕ್ಕೆ ಸಮರ್ಪಣೆ ಮಾಡಿಕೊಂಡು ಸಾರ್ಥಕ ಬದುಕು ನಡೆಸಲು ಪ್ರಯತ್ನಿಸಬೇಕು ಎಂದು ಹೊಸದುರ್ಗದ ಜಗದ್ಗುರು ಕುಂಚಿಟಿಗ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಡಾ| ಶಾಂತವೀರ ಸ್ವಾಮೀಜಿ ಹೇಳಿದರು.

ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕು ನರಸೀಪುರ ಗ್ರಾಮದಲ್ಲಿ ನಡೆದ ಬನವರ ಓಂಕಾರಪ್ಪನವರ ಶಿವಗಣಾರಾಧನೆ ಹಾಗೂ ಧಾರ್ಮಿಕ ಸಮ್ಮೇಳನದ ಸಾನ್ನಿಧ್ಯ ವಹಿಸಿ ಶ್ರೀಗಳು ಆಶೀರ್ವಚನ ನೀಡಿದರು.

ಹುಟ್ಟು ಮತ್ತು ಸಾವಿನ ಮಧ್ಯೆ ಇರುವ ಜೀವನದಲ್ಲಿ ಸಮಾಜಕ್ಕೆ ಶ್ರೇಷ್ಠವಾದ ಕೊಡುಗೆ ನೀಡಬೇಕು. ಸಮಾಜಕ್ಕೆ ಸಮರ್ಪಿಸಿಕೊಂಡು ಸಂತೃಪ್ತ ಜೀವನ ನಡೆಸಬೇಕು. ಕಾಣದ ಮತ್ತು ನೋಡದ ಸ್ವರ್ಗ-ನರಕದ ಬಗ್ಗೆ ಚಿಂತಿಸುವುದಕ್ಕಿಂತ ಇರುವಾಗಲೇ ಸ್ವರ್ಗ ಕಾಣಬೇಕಾದರೆ ಸಮಾಜಕ್ಕೆ ಶ್ರೇಷ್ಠವಾದ ಸೇವೆ ಮಾಡಬೇಕು. ಸಮಾಜಸೇವೆ ಮಾಡುವ ವ್ಯಕ್ತಿ ಪ್ರತಿನಿತ್ಯ ಪ್ರತಿಕ್ಷಣ ಸ್ವರ್ಗದ ಅನುಭೂತಿ ಅನುಭವಿಸುತ್ತಾನೆ. ಸಂಕುಚಿತತೆ ಇರುವ ಮಾನವ ದುರಭ್ಯಾಸಗಳ ದಾಸನಾಗುತ್ತಾನೆ. ದುರಾಚಾರಿಗೆ ನರಕ ಕಟ್ಟಿಟ್ಟ ಬುತ್ತಿ ಎಂದು ಎಚ್ಚರಿಸಿದರು.

ನರಕವೆಂಬುದು ಮೇಲೆ ಇಲ್ಲ, ಪ್ರತಿನಿತ್ಯ ಅನುಭವಿಸುವ ತಾಪತ್ರಯವೇ ನರಕ. ಸಮರ್ಪಣೆ ಮತ್ತು ತ್ಯಾಗವೇ ಸ್ವರ್ಗ. ಆಚಾರವೇ ಸ್ವರ್ಗ, ಅನಾಚಾರವೇ ನರಕ ಎಂಬ ಸತ್ಯ ಅರಿತು ಉತ್ತಮ ಜೀವನ ನಡೆÓಬೇಕು. ಸಮಾಜಕ್ಕೆ ಉತ್ತಮ ಗಾಳಿ ಬೆಳಕು, ಮಳೆ ಬೀಳಲು ಗಿಡ, ಮರ, ಸಸಿಗಳು ಅಗತ್ಯ. ಇಂತಹ ಬೀಜಗಳನ್ನು ಬಿತ್ತುವ ಕೆಲಸ ಮಾಡಿದಾಗ ಸಾಧಕನಾಗುತ್ತಾನೆ. ಬುದ್ಧ, ಬಸವ, ಪೈಗಂಬರ್‌, ಯೇಸು ದೈಹಿಕವಾಗಿ ನಮ್ಮ ಜೊತೆ ಇಲ್ಲ. ಆದರೆ ಮಾನಸಿಕ ಮತ್ತು ಬೌದ್ಧಿಕವಾಗಿ ನಮ್ಮ ಜತೆ ಶಾಶ್ವತವಾಗಿ ಇರುವ ಶ್ರೇಷ್ಠ ಕೆಲಸ ಮಾಡಿದ್ದಾರೆ. ಸಮಾಜಕ್ಕಾಗಿ ಉತ್ತಮ ಕಾಯಕ ಮಾಡಿರುವ ಕಾರಣ ಪ್ರತಿಕ್ಷಣ ಅಂತಹ ಸಾಧಕರನ್ನು ಸ್ಮರಣೆ ಮಾಡುತ್ತೇವೆ ಎಂದು ತಿಳಿಸಿದರು.

ಬಿಜೆಪಿ ಮುಖಂಡರಾದ ಶಿವರಾಜಕುಮಾರ್‌, ಈಶ್ವರಪ್ಪ, ರುದ್ರಮುನಿ ಸ್ವಾಮೀಜಿ, ಸಂಗಮೇಶ್ವರ ಯುವ ವೇದಿಕೆ ಸದಸ್ಯರು, ನರಸೀಪುರದ ಸುತ್ತಮುತ್ತಲಿನ ಗ್ರಾಮಗಳ ಜನರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.