ಮುಂಬಡ್ತಿಗೆ ಮೀನಾಮೇಷವೇಕೆ?

•ರಾಜ್ಯದಲ್ಲಿರುವ 82 ಸಾವಿರ ಪದವೀಧರ ಶಿಕ್ಷಕರಿಗೆ 6ರಿಂದ 8ನೇ ತರಗತಿಗೆ ಬಡ್ತಿ ಕೊಡಿ

Team Udayavani, Jun 2, 2019, 11:39 AM IST

2-June-15

ಚಿತ್ರದುರ್ಗ: ರಾಜ್ಯ ಸರ್ಕಾರಿ ಪ್ರಾಥಮಿಕ ಶಾಲಾ ಪದವೀಧರ ಶಿಕ್ಷಕರ ಸಂಘದ ವತಿಯಿಂದ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಆವರಣದಲ್ಲಿ ಧರಣಿ ನಡೆಸಲಾಯಿತು.

ಚಿತ್ರದುರ್ಗ: ವೃಂದ ಮತ್ತು ನೇಮಕಾತಿ (ಸಿ.ಆರ್‌) ನಿಯಮಾವಳಿ ತಿದ್ದುಪಡಿ ಮಾಡಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಸರ್ಕಾರಿ ಪ್ರಾಥಮಿಕ ಶಾಲಾ ಪದವೀಧರ ಶಿಕ್ಷಕರ ಸಂಘದ ತಾಲೂಕು ಘಟಕದ ವತಿಯಿಂದ ನಗರದ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಆವರಣದಲ್ಲಿ ಶನಿವಾರ ಒಂದು ದಿನದ ಸಾಂಕೇತಿಕ ಧರಣಿ ಸತ್ಯಾಗ್ರಹವನ್ನು ನಡೆಸಲಾಯಿತು.

ಸರ್ಕಾರಿ ಪ್ರಾಥಮಿಕ ಶಾಲಾ ಪದವೀಧರ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಜಿ.ಟಿ. ಹನುಮಂತಪ್ಪ ಮಾತನಾಡಿ, ಪದವಿ ವಿದ್ಯಾರ್ಹತೆ ಮತ್ತು ಸೇವಾ ಅನುಭವ ಪಡೆದಿರುವ ಸೇವಾ ನಿರತ ಪ್ರಾಥಮಿಕ ಶಾಲಾ ಸಹ ಶಿಕ್ಷಕರನ್ನು ಪದವೀಧರ ಶಾಲಾ ಶಿಕ್ಷಕರು (6-8) ವೃಂದಕ್ಕೆ ಪದನಾಮಕರಿಸಬೇಕು. 1 ರಿಂದ 7 ನೇ ತರಗತಿಗೆ ನೇಮಕವಾದ ಶಿಕ್ಷಕರು 2005ರಿಂದ 8 ನೇ ತರಗತಿ ಪ್ರಾರಂಭದಿಂದಲೂ 6 ರಿಂದ 8ನೇ ತರಗತಿಗಳಿಗೂ ಬೋಧಿಸುತ್ತಾ ಬಂದಿದ್ದಾರೆ. ರಾಜ್ಯದಲ್ಲಿ 82 ಸಾವಿರ ಪದವೀಧರ ಶಿಕ್ಷಕರು ಕಾರ್ಯ ನಿರ್ವಹಿಸುತ್ತಿದ್ದು, ಎಂಎ, ಬಿಎ, ಬಿಎಸ್ಸಿ, ಬಿ.ಇಡಿ, ಎಂ.ಇಡಿ, ಪಿಎಚ್‌ಡಿ ಮುಂದಾದ ಪದವಿಗಳನ್ನು ಪಡೆದಿದ್ದಾರೆ. ಅಲ್ಲದೆ ಹೆಚ್ಚಿನ ಸೇವಾ ಅನುಭವವೂ ಇದೆ. 6-8ನೇ ತರಗತಿಗೆ ಕಳೆದ 14 ವರ್ಷಗಳಿಂದ ಸಹ ಕಾರ್ಯ ನಿರ್ವಹಿಸುತ್ತಿದ್ದರು ಸಹ ನಮ್ಮನ್ನು ಮುಂಬಡ್ತಿಗೆ ಪರಿಗಣಿಸುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಗಳಿಗೆ ಎರಡು ಬಾರಿ ನೇಮಕಾತಿ ಮಾಡಿ ಈಗ ಮತ್ತೆ ಮೂರನೇ ಬಾರಿಗೆ ನೇಮಕಾತಿ ಮಾಡಲು ಸರ್ಕಾರ ಮುಂದಾಗಿದೆ. ಆದರೂ ಪದವೀಧರ ಶಿಕ್ಷಕರಿಗೆ 6 ರಿಂದ 8 ತರಗತಿಗೆ ಮುಂಬಡ್ತಿ ನೀಡುತ್ತಿಲ್ಲ. ಈ ಬಗ್ಗೆ ಸಾಕಷ್ಟು ಬಾರಿ ಸಚಿವಾಲಯಕ್ಕೆ ಮತ್ತು ಇಲಾಖೆ ಮುಖ್ಯಸ್ಥರಿಗೆ ಹಾಗೂ ಶಿಕ್ಷಣ ಸಚಿವರಿಗೆ ಮನವಿ ಮಾಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ದೂರಿದರು.

ಕಳೆದ ವರ್ಷ ಫೆಬ್ರವರಿ 5 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಸುಮಾರು 25 ಸಾವಿರ ಶಿಕ್ಷಕರು ಉಪವಾಸ ಸತ್ಯಾಗ್ರಹ ನಡೆಸದಿದ್ದರು. ಆದರೂ ಬೇಡಿಕೆ ಈಡೇರಿಸಲು ಸರ್ಕಾರ ಮೀನಾಮೇಷ ಎಣಿಸುತ್ತಿದೆ. ಸರ್ಕಾರ ನಮ್ಮ ಬೇಡಿಕೆಗೆ ಸ್ಪಂದಿಸಿ ಪ್ರಾಥಮಿಕ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪದವೀಧರ ಶಿಕ್ಷಕರನ್ನು 6-8ನೇ ತರಗತಿಗಳಿಗೆ ಪರಿಗಣಿಸಬೇಕು. ಇಲ್ಲದಿದ್ದರೆ ಎಲ್ಲಾ ಶಿಕ್ಷಕರು ಹೊಸ ವೃಂದ ನಿಯಮಗಳಂತೆ ಒಂದರಿಂದ ಐದನೇ ತರಗತಿವರೆಗೆ ಮಾತ್ರ ಬೋಧಿಸುತ್ತೇವೆ. 6ರಿಂದ 8ನೇ ತರಗತಿ ಬೋಧನೆಯನ್ನು ಬಹಿಷ್ಕರಿಸಲಾಗುವುದು ಎಂದು ಎಚ್ಚರಿಸಿದರು.

ಸಂಘದ ತಾಲೂಕು ಅಧ್ಯಕ್ಷ ರಂಗಸ್ವಾಮಿ, ಪ್ರಧಾನ ಕಾರ್ಯದರ್ಶಿ ಜೆ. ರಂಗೇಶ್‌, ಶಿಕ್ಷಕರಾದ ತಿಪ್ಪೇಸ್ವಾಮಿ, ಜಿ.ಎಲ್. ಶಿವಕುಮಾರ್‌, ದಿನೇಶ್‌, ನಳಿನಾಕ್ಷಿ , ವೀಣಾ, ಶೋಭಾ, ಅಶ್ವಿ‌ನಿ ಮೊದಲಾದವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.