ಪರಿಸರವನ್ನು ಮಕ್ಕಳಂತೆ ಪ್ರೀತಿಸಿ-ಪೋಷಿಸಿ

ಪರಿಸರ ಸಂರಕ್ಷಣೆ ಅರಣ್ಯ ಇಲಾಖೆ ಕೆಲಸ ಎಂಬುದು ತಪ್ಪು ಕಲ್ಪನೆ: ನ್ಯಾ| ಬಸವರಾಜ ಚೇಗರೆಡ್ಡಿ

Team Udayavani, Jun 6, 2019, 4:05 PM IST

06-June-33

ಚಿತ್ರದುರ್ಗ: ಸಾಯಿ ಲೇಔಟ್ ಉದ್ಯಾನವನದಲ್ಲಿ ಪರಿಸರ ದಿನಾಚರಣೆ ಕಾರ್ಯಕ್ರಮ ನಡೆಯಿತು.

ಚಿತ್ರದುರ್ಗ: ಪರಿಸರವನ್ನು ಮಕ್ಕಳಂತೆ ಪ್ರೀತಿಯಿಂದ ರಕ್ಷಣೆ ಮಾಡಬೇಕು. ಮಕ್ಕಳಿಗೆ ಪರಿಸರದ ಪರಿಕಲ್ಪನೆಯನ್ನು ನೈಜವಾಗಿ ತೋರಿಸಿ ಜಾಗೃತಿ ಮೂಡಿಸಬೇಕು ಎಂದು ಒಂದನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧಿಧೀಶ ಬಸವರಾಜ ಎಸ್‌. ಚೇಗರೆಡ್ಡಿ ಹೇಳಿದರು.

ನಗರದ ಚಳ್ಳಕೆರೆ ವೃತ್ತ ಸಮೀಪದ ಸಾಯಿ ಲೇಔಟ್ ಬಳಿಯ ಉದ್ಯಾನವನದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಪ್ರತಿ ವರ್ಷ ಪರಿಸರ ದಿನಾಚರಣೆ ಬರುತ್ತದೆ, ಆ ಸಂದರ್ಭದಲ್ಲಿ ಎಲ್ಲರ ಬಾಯಲ್ಲಿ ಪರಿಸರ ಕಾಳಜಿ ಬಗೆಗಿನ ಮಾತುಗಳು ಕೇಳಿ ಬರುತ್ತದೆ. ಗಿಡ ನೆಡುವ ಸಡಗರ ಪರಿಸರ ಸಂರಕ್ಷಣೆ ಎಲ್ಲಡೆ ಕಾಣುತ್ತದೆ. ಆದರೆ ಮುಂದಿನ ವರ್ಷದ ಪರಿಸರ ದಿನಾಚರಣೆಯಲ್ಲಿ ಕಳೆದ ವರ್ಷ ನೆಟ್ಟ ಗಿಡಗಳು ಏನಾಗಿದೆ ಎನ್ನುವ ಕಲ್ಪನೆಯೇ ಮಾಯವಾಗಿರುತ್ತದೆ. ಆದ್ದರಿಂದ ನೆಟ್ಟ ಗಿಡಗಳನ್ನು ರಕ್ಷಣೆ ಮಾಡಿಕೊಂಡು ಹೋಗಬೇಕು. ಕೇವಲ ಅರಣ್ಯ ಇಲಾಖೆಯ ಅಧಿಕಾರಿಗಳು ಮಾತ್ರ ಗಿಡ ಬೆಳೆಸಬೇಕು ಮತ್ತು ರಕ್ಷಣೆ ಮಾಡಬೇಕು ಎಂಬ ಭಾವನೆ ಸಾರ್ವಜನಿಕರಲ್ಲಿದೆ. ಈ ಭಾವನೆಯಿಂದ ಹೊರ ಬರಬೇಕು ಎಂದರು.

ಜಿಲ್ಲಾಧಿಕಾರಿ ವಿನೋತ್‌ ಪ್ರಿಯಾ ಮಾತನಾಡಿ, ಜನರು ಮನೆಯ ಸುತ್ತಮುತ್ತಲ ಪರಿಸರವನ್ನು ಕಾಪಾಡಿಕೊಳ್ಳಬೇಕು. ಮರ ಗಿಡಗಳನ್ನು ಕಡಿಯಬಾರದು. ಪ್ಲಾಸ್ಟಿಕ್‌ ಸಂಪೂರ್ಣ ನಿಷೇಧ ಮಾಡಲು ಪಣ ತೊಡಲಾಗಿದೆ. ಪರಿಸರವನ್ನು ಶುದ್ಧವಾಗಿಡುವುದು ಪ್ರತಿಯೊಬ್ಬರ ಜವಾಬ್ದಾರಿ. ಮುಂದಿನ ದಿನಗಳಲ್ಲಿ ಗಿಡಗಳನ್ನು ಹಾಕಿಸಲು ಯೊಜನೆ ರೂಪಿಸಿದ್ದು, ಸ್ಥಳಗಳನ್ನು ಹುಡುಕಿ ಗಿಡ ನೆಡಿಸುವ ಕಾರ್ಯವನ್ನು ನಿರಂತರವಾಗಿ ಮಾಡುವುದಾಗಿ ತಿಳಿಸಿದರು.

ಎರಡನೇ ಅಪರ ಜಿಲ್ಲಾ ಸತ್ರ ನ್ಯಾಯಾಧಿಧೀಶ ಆರ್‌. ಬನ್ನಿಕಟ್ಟಿ ಹನುಮಂತಪ್ಪ, ಪ್ರಧಾನ ಸಿವಿಲ್ ನ್ಯಾಯಾಧೀಶ ಟಿ. ಶಿವಣ್ಣ, ಉಪ ಅರಣ್ಯ ಸಂರಕ್ಷಣಾಧಿಕಾರಿ ಕೆ.ಬಿ. ಮಂಜುನಾಥ, ಎಚ್.ಎಸ್‌. ರಂಗನಾಥ ಸ್ವಾಮಿ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಎನ್‌.ಎಸ್‌. ರಾಘವೇಂದ್ರ ರಾವ್‌, ಉಪ ನೋಂದಣಾಧಿಕಾರಿ ವಿಜಯಕುಮಾರ್‌, ಹಿರಿಯ ಸಿವಿಲ್ ನ್ಯಾಯಾಧೀಶ ದೇವರಾಜ್‌, ಸಿವಿಲ್ ನ್ಯಾಯಾಧಿಧೀಶ ಶಂಕರಪ್ಪ ಮಾಲಶೆಟ್ಟಿ, ಸಂದೇಶ ವಿ. ಭಂಡಾರಿ, ವಕೀಲರ ಸಂಘದ ಕಾರ್ಯದರ್ಶಿ ಅನಿಲ್ಕುಮಾರ್‌, ಅರಣ್ಯಾಧಿಕಾರಿ ಸಂದೀಪ್‌ ನಾಯಕ, ಜಿತೇಂದ್ರ ಇದ್ದರು.

ಟಾಪ್ ನ್ಯೂಸ್

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.