ಇದು 153 ಪುಟಗಳ ವಿವಾಹ ಆಮಂತ್ರಣ ಪತ್ರಿಕೆ!

ವಿವಾಹ ಕರೆಯೋಲೆಯಲ್ಲಿದೆ ಉದ್ಯೋಗ ಮಾಹಿತಿ

Team Udayavani, May 27, 2019, 4:43 PM IST

27-May-35

ಬೃಹತ್‌ ವಿವಾಹ ಆಮಂತ್ರಣ ಪತ್ರಿಕೆ.

ಹರಿಯಬ್ಬೆ ಹೆಂಜಾರಪ್ಪ
ಚಿತ್ರದುರ್ಗ:
ಇಲ್ಲೊಬ್ಬರು ಬರೋಬ್ಬರಿ 153 ಪುಟಗಳ ವಿವಾಹ ಆಮಂತ್ರಣ ಪತ್ರಿಕೆಯನ್ನು ಮುದ್ರಿಸುವ ಮೂಲಕ ಅಚ್ಚರಿಗೆ ಕಾರಣರಾಗಿದ್ದಾರೆ. ಇದು ಅಂತಿಂಥಾ ವಿವಾಹ ಕರೆಯೋಲೆ ಅಲ್ಲ. ಮದುವೆಗೆ ಬನ್ನಿ ಎಂಬುದರ ಜತೆಗೆ ಭಾರತೀಯ ಆಡಳಿತಾತ್ಮಕ ಸೇವೆ, ಕರ್ನಾಟಕ ಆಡಳಿತಾತ್ಮಕ ಸೇವೆ ಸೇರಿ 52 ರಾಜ್ಯ ಮತ್ತು ಕೇಂದ್ರ ಸರ್ಕಾರಿ ಇಲಾಖೆಗಳ ಉದ್ಯೋಗ ಮಾರ್ಗದರ್ಶಿ ಈ ಕರೆಯೋಲೆಯಲ್ಲಿದೆ.

ತಮ್ಮ ಪುತ್ರನ ವಿವಾಹದ ನೆಪದಲ್ಲಿ ಸಮಾಜಕ್ಕೇನಾದರೂ ಕೊಡುಗೆ ನೀಡಬೇಕೆಂಬ ಉದ್ದೇಶದಿಂದ ಹಿರಿಯೂರು ತಾಲೂಕಿನ ಬಬ್ಬೂರು ಗ್ರಾಮದ ಹಿರಿಯ ವಕೀಲ ಬಿ.ಎನ್‌.ತಿಪ್ಪೇಸ್ವಾಮಿ ಮತ್ತು ಪತ್ನಿ ಟಿ. ಸುರೇಖಾ 153 ಪುಟಗಳ ವಿವಾಹ ಆಮಂತ್ರಣ ಪತ್ರಿಕೆಯನ್ನು ಮುದ್ರಿಸಿದ್ದಾರೆ. ಈ ದಂಪತಿಯ ಮೊದಲ ಪುತ್ರ ಟಿ.ಸಂಜಯ್‌ ಅವರ ವಿವಾಹ ಜೂನ್‌ 8 ಮತ್ತು 9 ರಂದು ಮೈಸೂರಿನ ಆರ್‌. ಶಿವರಂಜನಿ ಜತೆ ನಡೆಯಲಿದೆ. ವರ ಸಂಜಯ್‌ ಹಾಗೂ ಅವರ ಸ್ನೇಹಿತ ಮಹೇಶ್‌ ಶ್ರಮದಿಂದ ಇಂತಹ ವಿಶಿಷ್ಟ ವಿವಾಹ ಆಮಂತ್ರಣ ಪತ್ರಿಕೆ ಸಿದ್ಧಗೊಂಡಿದೆ.

ಅಂಥದ್ದೇನಿದೆ ಆಮಂತ್ರಣ ಪತ್ರಿಕೆಯಲ್ಲಿ?: ಗಜಗಾತ್ರದ ವಿವಾಹ ಆಮಂತ್ರಣ ಪತ್ರಿಕೆಯ ಮುಖಪುಟ, ಹಿಂಬದಿ ಪುಟಗಳಲ್ಲಿ ಮದುವೆಯ ಕರೆಯೋಲೆ ಇದ್ದರೆ, ಕೊನೆಯ ಪುಟದಲ್ಲಿ ನಾಯಕನಹಟ್ಟಿಯ ಗುರು ತಿಪ್ಪೇರುದ್ರಸ್ವಾಮಿ ಫೋಟೋ ಹಾಗೂ ‘ಮಾಡಿದಷ್ಟು ನೀಡು ಭಿಕ್ಷೆ’ ಎನ್ನುವ ಘೋಷವಾಕ್ಯ ಇದೆ. ಇದರ ಹಿಂಬದಿ ಪುಟದಲ್ಲಿ ಕನ್ನಡದಲ್ಲಿ ವಿವಾಹ ನಡೆಯುವ ಸ್ಥಳ ಹಾಗೂ ಆಹ್ವಾನದ ವಿಷಯಗಳಿವೆ.

ಮುಖಪುಟದ ನಂತರದ ಎರಡು ಪುಟಗಳಲ್ಲಿ ತುಮಕೂರಿನ ಸಿದ್ಧಗಂಗಾ ಮಠದ ಸ್ವಾಮೀಜಿ, ಹಿರೇಹೊಸಳ್ಳಿ ವೇಮಹೇಮ ಸದ್ಗುರು ಪೀಠದ ವೇಮನಾನಂದ ಸ್ವಾಮೀಜಿ, ಚಿತ್ರದುರ್ಗ ವನಶ್ರೀ ಸಂಸ್ಥಾನ ಮಠದ ಬಸವಕುಮಾರ ಸ್ವಾಮೀಜಿಯವರಿಂದ ‘ಪರಿಣಯಕ್ಕೊಂದು ಪದಗಳ ತೋರಣ’ ಎನ್ನುವ ಸಂದೇಶ ಹಾಕಲಾಗಿದೆ.

ಇದರ ಮುಂದಿನ ಪುಟಗಳಲ್ಲೇ ಇದೆ ವಿಶೇಷ. ಸುಮಾರು 145 ಪುಟಗಳಲ್ಲಿ ಭಾರತೀಯ ಆಡಳಿತಾತ್ಮಕ ಸೇವೆ, ಕರ್ನಾಟಕ ಆಡಳಿತಾತ್ಮಕ ಸೇವೆ ಸೇರಿದಂತೆ 52 ರಾಜ್ಯ ಮತ್ತು ಕೇಂದ್ರ ಸರ್ಕಾರಿ ಇಲಾಖೆಗಳ ಉದ್ಯೋಗ ಮಾರ್ಗದರ್ಶಿ ನೀಡಲಾಗಿದೆ. ಪ್ರತಿ ಪುಟದಲ್ಲಿ ಒಂದೊಂದು ಇಲಾಖೆಯ ವೆಬ್‌ಸೈಟ್‌ನೊಂದಿಗೆ ಉದ್ಯೋಗದ ಸಮಗ್ರ ಮಾಹಿತಿ ಒದಗಿಸಲಾಗಿದೆ. ಬಹುಕಾಲ ಬಾಳಿಕೆ ಬರುವಂತ ಗ್ಲೇಜ್ಡ್ ಪೇಪರ್‌ ಬಳಸಿ ಮುದ್ರಣ ಮಾಡಲಾಗಿದೆ. ಹಾಗಾಗಿ ಇದು ಪ್ರತಿಯೊಬ್ಬರೂ ಸಂಗ್ರಹಿಸಿಟ್ಟುಕೊಳ್ಳುವಂತಹ ಉದ್ಯೋಗ ಮಾಹಿತಿ ಪುಸ್ತಕ. ಸುಮಾರು ಎರಡು ಸಾವಿರ ವಿವಾಹ ಆಮಂತ್ರಣ ಪತ್ರಿಕೆ ಮುದ್ರಿಸಿ ಹಂಚಿಕೆ ಮಾಡುತ್ತಿದ್ದಾರೆ. ಇದಕ್ಕಾಗಿ 70 ಸಾವಿರ ರೂ.ಖರ್ಚು ಮಾಡಲಾಗಿದೆ. ನಿರುದ್ಯೋಗಿಗಳು ತಮಗೊಂದು ಇಂತಹ ಆಮಂತ್ರಣ ಪತ್ರಿಕೆ ಬೇಕೆಂದು ಬೇಡಿಕೆ ಇಡುತ್ತಿರುವುದು ವಿಶೇಷ.

ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಯಾವ ಯಾವ ಇಲಾಖೆಗಳಿವೆ, ಖಾಲಿ ಹುದ್ದೆಗಳ ಮಾಹಿತಿ, ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕೇಳಬಹುದಾದ ಪ್ರಶ್ನೆಗಳು, ಪರೀಕ್ಷೆಗಳನ್ನು ಹೇಗೆ ಆತ್ಮವಿಶ್ವಾಸದಿಂದ ಎದುರಿಸಬೇಕೆಂಬ ಸಂಪೂರ್ಣ ಮಾಹಿತಿ ಇದೆ.

ಮದುವೆ ನೆಪದಲ್ಲಿ ಸಮಾಜಕ್ಕೆ ಏನಾದರೂ ಕೊಡುಗೆ ನೀಡಬೇಕೆಂಬ ಉದ್ದೇಶವಿತ್ತು. ಈ ವಿಷಯವನ್ನು ಸ್ನೇಹಿತ ಮಹೇಶ್‌ ಅವರಲ್ಲಿ ಪ್ರಸ್ತಾಪಿಸಿದೆ. ನಿರುದ್ಯೋಗಿಗಳಿಗೆ ಸಮಗ್ರವಾದ ಉದ್ಯೋಗ ಮಾಹಿತಿ ದೊರೆಯಬೇಕೆಂದು ತಿಳಿಸಿದಾಗ ಅವರು ಮತ್ತಷ್ಟು ಉತ್ಸಾಹದಿಂದ ನಿರುದ್ಯೋಗಿಗಳಿಗೆ ಜೀವನ ಪರ್ಯಂತ ಉಪಯೋಗಕ್ಕೆ ಬರುವಂತಹ ಮಾಹಿತಿಯನ್ನು ಹೆಕ್ಕಿ ತೆಗೆದು ಸುಂದರ ಪುಸ್ತಕ ಹೊರಬರಲು ಶ್ರಮಿಸಿದ್ದಾರೆ. ಮದುವೆ ಆಮಂತ್ರಣ ಪತ್ರಿಕೆಯನ್ನು ಸ್ನೇಹಿತರು, ಬಂಧುಗಳಿಗೆ ಹಂಚಿಕೆ ಮಾಡಲಾಗಿದ್ದು, ನಿರುದ್ಯೋಗಿಗಳು ತಮಗೂ ನೀಡುವಂತೆ ಕೇಳಿಕೊಳ್ಳುತ್ತಿದ್ದಾರೆ. ಹಾಗಾಗಿ ಅವರಿಗೂ ನೀಡುತ್ತಿದ್ದೇವೆ.
ಟಿ. ಸಂಜಯ್‌ ಬಬ್ಬೂರು.

ಟಾಪ್ ನ್ಯೂಸ್

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.