ಕೋಟೆ ನಗರಿ ಕೇಸರಿಮಯ

ಹಿಂದೂ ಮಹಾಗಣಪತಿ ಶೋಭಾಯಾತ್ರೆಗೆ ಇನ್ನೊಂದೇ ದಿನ ಬಾಕಿ•ವಿಸರ್ಜನಾ ಮೆರವಣಿಗೆಗೆ ಭರದ ಸಿದ್ಧತೆ

Team Udayavani, Sep 20, 2019, 3:40 PM IST

20-Sepctember-17

ಚಿತ್ರದುರ್ಗ: ಹಿಂದೂ ಮಹಾಗಣಪತಿ ಶೋಭಾಯಾತ್ರೆ ಅಂಗವಾಗಿ ನಗರದ ಗಾಂಧಿ ವೃತ್ತವನ್ನು ಕೇಸರಿ ಬಾವುಟಗಳಿಂದ ಅಲಂಕರಿಸಲಾಗಿ

ಚಿತ್ರದುರ್ಗ: ವಿಶ್ವ ಹಿಂದೂ ಪರಿಷತ್‌ ಹಾಗೂ ಭಜರಂಗದಳದ ವತಿಯಿಂದ ನಗರದ ಸ್ಟೇಡಿಯಂ ರಸ್ತೆಯ ಎಂ.ಎಂ. ಪ್ರೌಢಶಾಲಾ ಆವರಣದಲ್ಲಿ ಪ್ರತಿಷ್ಠಾಪಿಸಿರುವ ಹಿಂದೂ ಮಹಾಗಣಪತಿ ವಿಸರ್ಜನೆಗೆ ಇನ್ನೊಂದೇ ದಿನ ಬಾಕಿ ಇದೆ. ಈ ಹಿನ್ನೆಲೆಯಲ್ಲಿ ಪೊಲೀಸರು, ಅಧಿಕಾರಿಗಳು ಕಾನೂನು ಸುವ್ಯವಸ್ಥೆ, ಶೋಭಾಯಾತ್ರೆಗೆ ರಸ್ತೆಯ ಸಿದ್ಧತೆ, ಆಹಾರ, ಪಾನೀಯ ತಪಾಸಣೆಗೆ ಸಜ್ಜಾಗುತ್ತಿದ್ದಾರೆ. ಇನ್ನೊಂದೆಡೆ ಹಿಂದೂ ಮಹಾಗಣಪತಿ ಉತ್ಸವ ಸಮಿತಿ ಪ್ರಮುಖರು ನಗರದ ಅಲಂಕಾರದಲ್ಲಿ ಮಗ್ನರಾಗಿದ್ದಾರೆ.

ಕೋಟೆ ನಗರಿ ಈಗ ಝಗಮಗಿಸುತ್ತಿದ್ದು, ಎಲ್ಲೆಲ್ಲೂ ಕೇಸರಿ ಬಾವುಟಗಳು ರಾರಾಜಿಸುತ್ತಿವೆ. ರಾತ್ರಿಯಾಯಿತೆಂದರೆ ಬೀದಿಗಳು ಮಿನುಗುವ ಬೆಳಕಿನಿಂದ ಕಂಗೊಳಿಸುತ್ತಿವೆ. ಪ್ರಮುಖ ರಸ್ತೆಯಲ್ಲಿರುವ ವೃತ್ತಗಳು ಹಾಗೂ ಅಲ್ಲಿರುವ ವಹಾಪುರುಷರ ಪುತ್ಥಳಿಗಳಿಗಳಿಗೆ ಹೊಸ ಮೆರುಗು ಬಂದಿದೆ.

ದುರ್ಗದ ದೊರೆ ಮದಕರಿ ನಾಯಕರ ದೊಡ್ಡ ಪ್ರತಿಮೆಗೆ ಹಿನ್ನೆಲೆಯಾಗಿ ಕೋಟೆ ಹಾಗೂ ಬತೇರಿ, ನೆಲದಲ್ಲಿ ಫಿರಂಗಿ ಇಟ್ಟಿರುವುದು ಅತ್ಯಂತ ಆಕರ್ಷಣೀಯವಾಗಿದೆ. ರಸ್ತೆಯಲ್ಲಿ ಓಡಾಡುವವರು ನಿಂತು ನೋಡುವುದು, ಸೆಲ್ಫಿ ತೆಗೆದುಕೊಳ್ಳುತ್ತಾ ಖುಷಿಪಡುತ್ತಿದ್ದಾರೆ. ಅಲ್ಲಿಂದ ತುಸು ದೂರದಲ್ಲಿರುವ ಅಂಬೇಡ್ಕರ್‌ ಪ್ರತಿಮೆಗೆ ಯಾವುದೇ ರೀತಿಯ ಕೇಸರಿ ಅಲಂಕಾರ ಮಾಡುವುದು ಬೇಡ ಎಂದು ಕೆಲವು ಸಂಘಟನೆಗಳು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದವು. ಇಲ್ಲಿ ಬುದ್ಧಿವಂತಿಕೆ ಉಪಯೋಗಿಸಿರುವ ಸಂಘಟಕರು, ಅಂಬೇಡ್ಕರ್‌ ಪ್ರತಿಮೆಗೆ ಹಿನ್ನೆಲೆಯಾಗಿ ದೊಡ್ಡ ಗಾತ್ರದ ಸಂವಿಧಾನದ ತೆರೆದ ಪುಸ್ತಕ ಇಟ್ಟು ಅಲಂಕಾರ ಮಾಡಿ ಹೊಸತನ ತೋರಿದ್ದಾರೆ.

ಗಾಂಧಿ ವೃತ್ತವಂತೂ ಕೇಸರಿ ಬಾವುಟಗಳ ಚಪ್ಪರದಿಂದ ಕಂಗೊಳಿಸುತ್ತಿದೆ. ಒನಕೆ ಓಬವ್ವ ವೃತ್ತದಲ್ಲೂ ಕೇಸರಿ ಬಾವುಟ ಹಾಗೂ ವಿದ್ಯುತ್‌ ದೀಪಗಳಿಂದ ವಿಶೇಷ ಅಲಂಕಾರ ಮಾಡಲಾಗಿದೆ. ಸಂಗೊಳ್ಳಿ ರಾಯಣ್ಣ ಹಾಗೂ ಚಿತ್ರದುರ್ಗ ಪ್ರವೇಶಿಸುವಾಗ ಸಿಗುವ ಕನಕ ವೃತ್ತದಲ್ಲಿರುವ ಕನಕದಾಸರ ಪ್ರತಿಮೆಗೆ ಅದ್ಭುತವಾಗಿ ಶೃಂಗಾರ ಮಾಡಿರುವುದು ಕಣ್ಮನ ಸೆಳೆಯುತ್ತಿವೆ.

ಕಳೆದ ಒಂದು ವಾರದಿಂದ ಸುಮಾರು ಒಂದು ಸಾವಿರ ಭಜರಂಗದಳ ಕಾರ್ಯಕರ್ತರು ನಗರದ ಅಲಂಕಾರದಲ್ಲಿ ತೊಡಗಿಸಿಕೊಂಡಿದ್ದಾರೆ. ಸಾಗರ ಮೂಲದ ಕಲಾವಿದರು ಪ್ರತಿಮೆಗಳಿಗೆ ವಿಶೇಷ ಮೆರುಗು ನೀಡಿದ್ದಾರೆ. ಅಲಂಕಾರಕ್ಕಾಗಿ ಸುಮಾರು 15 ಸಾವಿರ ಮೀಟರ್‌ ಕೇಸರಿ ಬಟ್ಟೆ ಬಳಸಲಾಗಿದ್ದು, 500ಕ್ಕೂ ಹೆಚ್ಚು ದೊಡ್ಡ ಧ್ವಜಗಳು ರಾರಾಜಿಸುತ್ತಿವೆ. ಜಿಲ್ಲೆ, ಹೊರ ಜಿಲ್ಲೆಗಳಿಂದ ಹರಿದು ಬರುವ ಜನಸಾಗರಕ್ಕೆ 30ಕ್ಕೂ ಹೆಚ್ಚು ಸಂಸ್ಥೆಗಳು ಊಟ, ನೀರಿನ ವ್ಯವಸ್ಥೆ ಮಾಡಲು ತಯಾರಿ ನಡೆಸಿವೆ. ಮೆರವಣಿಗೆ ಮಾರ್ಗದುದ್ದಕ್ಕೂ ಸಂಘಟನೆ ಸೂಚನೆಯಂತೆ ನೀರು, ಮಜ್ಜಿಗೆ, ಪುಳಿಯೊಗರೆ, ಪಲಾವ್‌ ಪ್ರಸಾದ ವಿತರಣೆಯಾಗಲಿದೆ.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.