ಸಂಚಾರಿ ನಿಯಮ ಪಾಲನೆಯಿಂದ ಅಪಘಾತಕ್ಕೆ ತಡೆ

ವಾಹನ ಚಾಲನೆ ಮಾಡುವಾಗ ಮೆದುಳು ಮತ್ತು ದೇಹಕ್ಕೆ ಏಕಾಗ್ರತೆ ಅಗತ್ಯ: ಡಾ| ದೊಡ್ಡಮಲ್ಲಯ್ಯ

Team Udayavani, Jun 26, 2019, 4:10 PM IST

26-June-31

ಚಿತ್ರದುರ್ಗ: ರಸ್ತೆ ಅಪಘಾತಗಳ ವಿರುದ್ಧ ಸಹಿ ಸಂಗ್ರಹ ಕಾರ್ಯಕ್ರಮದಲ್ಲಿ ಜಿಲ್ಲಾ ಕಸಾಪ ಅಧ್ಯಕ್ಷ ಡಾ| ದೊಡ್ಡಮಲ್ಲಯ್ಯ ಮಾತನಾಡಿದರು.

ಚಿತ್ರದುರ್ಗ: ಅಪಘಾತಗಳು ನಿಯಂತ್ರಣಕ್ಕೆ ಬರಬೇಕಾದರೆ ಸಂಚಾರಿ ನಿಯಮಗಳ ಪಾಲನೆ ಮುಖ್ಯ. ವಾಹನ ಚಾಲಕರು ಸಂಚಾರಿ ನಿಯಮಗಳನ್ನು ಪಾಲಿಸುವ ಮೂಲಕ ಅಪಘಾತಗಳನ್ನು ತಪ್ಪಿಸಿ ಅಮೂಲ್ಯ ಜೀವಗಳನ್ನು ಉಳಿಸಬೇಕು ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಡಾ| ದೊಡ್ಡಮಲ್ಲಯ್ಯ ಹೇಳಿದರು.

ನಗರದ ಜೆ.ಎಂ.ಐ.ಟಿ ವೃತ್ತದಲ್ಲಿ ಅಪಘಾತದಲ್ಲಿ ಬಲಿಯಾದ ವಿದ್ಯಾರ್ಥಿನಿ ಅಮೃತಾಳ ಆತ್ಮಕ್ಕೆ ಶಾಂತಿ ಕೋರಿ ರೋಟರಿ ಬಾಲಭವನದ ಮುಂಭಾಗದಲ್ಲಿ ವಿಜ್ಞಾನ ಕೇಂದ್ರ, ರೋಟರಿ ಕ್ಲಬ್‌, ಸಾಮಾಜಿಕ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಮಂಗಳವಾರ ಹಮ್ಮಿಕೊಂಡಿದ್ದ ರಸ್ತೆ ಅಪಘಾತಗಳ ವಿರುದ್ಧ ಸಹಿ ಸಂಗ್ರಹ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕಾಯಿಲೆ ಮತ್ತಿತರ ಅವಘಡಗಳಿಗಿಂತ ರಸ್ತೆ ಅಪಘಾತಗಳಲ್ಲಿ ಸಾಯುವವರ ಸಂಖ್ಯೆ ಹೆಚ್ಚಾಗುತ್ತಿದೆ. ಚಾಲನೆಯಲ್ಲಿ ನಿರ್ಲಕ್ಷ್ಯ ಹಾಗೂ ಚಾಲಕರ ತಪ್ಪಿನಿಂದ ಅಪಘಾತಗಳಾಗುವುದುಂಟು. ಸಾರಿಗೆ ನಿಯಮ ಅತ್ಯದ್ಭುತವಾಗಿದ್ದರೂ ಯಾರೂ ಅದನ್ನು ಪಾಲನೆ ಮಾಡುತ್ತಿಲ್ಲ ಎಂದು ವಿಷಾದಿಸಿದರು.

ವಾಹನಗಳನ್ನು ವೇಗವಾಗಿ ಚಾಲನೆ ಮಾಡುವುದು ತಾತ್ಕಾಲಿಕವಾಗಿ ಮನಸ್ಸಿಗೆ ಖುಷಿ ಕೊಡಬಹುದು, ಆದರೆ ಸಾವು-ನೋವು ಸಂಭವಿಸಿದಾಗ ಅವಲಂಬಿತರು ಜೀವನಪರ್ಯಂತ ದುಃಖ ಪಡಬೇಕಾಗುತ್ತದೆ. ಯಾವುದೇ ವಾಹನವನ್ನು ಚಾಲನೆ ಮಾಡುವಾಗ ಮೆದುಳು ಮತ್ತು ದೇಹಕ್ಕೆ ಏಕಾಗ್ರತೆ ಇರಬೇಕು. ಬೇರೆ ಕಡೆ ಗಮನಹರಿಸಬಾರದು. ಮೈಯೆಲ್ಲಾ ಕಣ್ಣಾಗಿಸಿಕೊಂಡು ಎಚ್ಚರಿಕೆಯಿಂದ ಇದ್ದಾಗ ಮಾತ್ರ ಸಾಕಷ್ಟು ಅಪಘಾತಗಳನ್ನು ತಡೆಗಟ್ಟಬಹುದು ಎಂದರು.

ರೋಟರಿ ಕ್ಲಬ್‌ ಕಾರ್ಯದರ್ಶಿ ಶಿವರಾಂ ಮಾತನಾಡಿ, ಸಂಚಾರಿ ನಿಯಮಗಳನ್ನು ಚಾಲಕರು ಪಾಲಿಸದಿದ್ದಾಗ ಅಪಘಾತಗಳಾಗುತ್ತದೆ. ಅದಕ್ಕಾಗಿ ಪ್ರತಿಯೊಬ್ಬರೂ ಸಂಚಾರಿ ನಿಯಮಗಳನ್ನು ಪಾಲಿಸಿ ಜೀವ ಉಳಿಸಬೇಕಾಗಿದೆ ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದರು.

ಸಾಮಾಜಿಕ ಕಾರ್ಯಕರ್ತೆ ರೀನಾ ವೀರಭದ್ರಪ್ಪ ಮಾತನಾಡಿ, ಸಂಚಾರಿ ನಿಯಮ ಉಲ್ಲಂಘಿಸಿ ಅಡ್ಡಾ ದಿಡ್ಡಿಯಾಗಿ ಚಾಲನೆ ಮಾಡುವುದರಿಂದ ಅಪಘಾತಗಳು ಸಂಭವಿಸುವುತ್ತವೆ. ಹೆಲ್ಮೆಟ್ ಇಲ್ಲದೆ ದ್ವಿಚಕ್ರ ವಾಹನ ಚಾಲನೆ ಮಾಡುವವರನ್ನು ಕಾನೂನಿನ ಅಡಿ ಶಿಕ್ಷಿಸಬೇಕು. ಏಕೆಂದರೆ ಸಾಕಷ್ಟು ಅಪಘಾತಗಳಲ್ಲಿ ತಲೆಗೆ ಪೆಟ್ಟು ಬೀಳುತ್ತದೆ. ಇದರಿಂದ ಪ್ರಾಣಕ್ಕೆ ಕುತ್ತು ಬರುತ್ತದೆ. ಅತಿಯಾದ ವೇಗದ ಚಾಲನೆ ಮನಸ್ಸಿಗೆ ಮುದ ನೀಡಬಹುದು. ಆಕಸ್ಮಿಕವಾಗಿ ಅಪಘಾತವಾಗಿ ಕೈಕಾಲುಗಳನ್ನು ಕಳೆದುಕೊಂಡು ಬದುಕಿದರೆ ತಂದೆ-ತಾಯಿ ನೋವು ಅನುಭವಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಪರಿಸರವಾದಿ ಡಾ| ಎಚ್.ಎಸ್‌.ಕೆ. ಸ್ವಾಮಿ ಮಾತನಾಡಿ, ಹೆದ್ದಾರಿಗಳಲ್ಲಿ ಯಾವುದೇ ಸುರಕ್ಷತೆ ಇಲ್ಲದ ಪರಿಣಾಮ ಅಪಘಾತಗಳು ಮೇಲಿಂದ ಮೇಲೆ ಸಂಭವಿಸುತ್ತಿರುತ್ತವೆ. ಜೆ.ಎಂ.ಐ.ಟಿ ಬಳಿ ಸಂಭವಿಸಿದ ಅಪಘಾತದಲ್ಲಿ ಹನ್ನೆರಡು ವರ್ಷದ ಬಾಲಕಿ ಅಮೃತಾ ಬಲಿಯಾಗಿರುವುದು ಅತ್ಯಂತ ನೋವಿನ ಸಂಗತಿ. ಇನ್ನು ಮುಂದೆ ಅಂತಹ ಘಟನೆಗಳು ಮರಕಳಿಸಬಾರದೆಂದರೆ ಹೆದ್ದಾರಿಗಳಲ್ಲಿ ರೋಡ್‌ ಹಂಪ್ಸ್‌ಗಳನ್ನು ನಿರ್ಮಿಸಬೇಕು ಎಂದು ಒತ್ತಾಯಿಸಿದರು.

ವೈ. ಚಂದ್ರಶೇಖರ್‌, ಬ್ರಹ್ಮಾನಂದ ಗುಪ್ತ, ಡಾ| ಹರಿಣಿ, ವಾಣಿ ಜಯದೇವ್‌, ಕವಿತಾ ಜೈನ್‌, ರೋಟರಿ ಶಾಲೆ ವಿದ್ಯಾರ್ಥಿಗಳು ಇದ್ದರು.

ಟಾಪ್ ನ್ಯೂಸ್

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.