- Friday 06 Dec 2019
ಸತತ ಮಳೆಗೆ ಹೆಚ್ಚಿದ ನೀರಿನ ಮಟ್ಟ
85 ಸಾವಿರ ಕ್ಯೂಸೆಕ್ ಒಳಹರಿವು•ಜಲಾವೃತ ಸೇತುವೆ ಮೇಲೆ 4 ಅಡಿ ನೀರು
Team Udayavani, Jul 11, 2019, 1:22 PM IST
ಚಿಕ್ಕೋಡಿ: ದೂಧಗಂಗಾ ನದಿ ತೀರಕ್ಕೆ ಉಪವಿಭಾಗಾಧಿಕಾರಿ ರವೀಂದ್ರ ಕರಲಿಂಗನ್ನವರ ಭೇಟಿ ನೀಡಿ ಪರಿಶೀಲಿಸಿದರು.
ಚಿಕ್ಕೋಡಿ: ನೆರೆಯ ಮಹಾರಾಷ್ಟ್ರದಲ್ಲಿ ಎಡೆಬಿಡದೆ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಕೃಷ್ಣಾ, ದೂಧಗಂಗಾ ಮತ್ತು ವೇದಗಂಗಾ ನದಿಗಳಿಗೆ ಭಾರಿ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದು, ಕಳೆದ 24 ಗಂಟೆಗಳಲ್ಲಿ 15 ಸಾವಿರ ಕ್ಯೂಸೆಕ್ ನೀರು ಹೆಚ್ಚಾಗಿದೆ.
ಮಹಾರಾಷ್ಟ್ರದ ಕೊಂಕಣ ಪ್ರದೇಶಗಳಾದ ಮಹಾಬಲೇಶ್ವರ, ರಾಧಾನಗರಿ, ನವಜಾ, ಪಾಟಗಾಂವ, ಕೊಯ್ನಾ ಪ್ರದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ಭಾರಿ ಮಳೆ ಸುರಿದಿದೆ. ಇತ್ತ ಗಡಿ ಭಾಗದಲ್ಲಿಯೂ ಮಳೆ ಆಗುತ್ತಿದೆ. ಇದರಿಂದ ಕೃಷ್ಣಾ ಮತ್ತು ಉಪನದಿಗಳಿಗೆ ಸುಮಾರು 85 ಸಾವಿರ ಕ್ಯೂಸೆಕ್ ನೀರು ಹರಿದು ಬರಲಾರಂಭಿಸಿದೆ. ದಿನೇ ದಿನೇ ನೀರಿನ ಪ್ರಮಾಣ ಏರಿಕೆಯಾಗುತ್ತಿರುವುದರಿಂದ ನದಿಗಳು ಉಕ್ಕಿ ಹರಿಯುತ್ತಿವೆ.
ಇದರಿಂದ ಚಿಕ್ಕೋಡಿ ತಾಲೂಕಿನ ಕೆಳಹಂತದ ಕೃಷ್ಣಾ ನದಿಗೆ ಕಟ್ಟಲಾಗಿರುವ ಕಲ್ಲೋಳ-ಯಡೂರ ಸೇತುವೆ ಜಲಾವೃತಗೊಂಡಿದೆ. ದೂಧಗಂಗಾ ನದಿಗೆ ನಿರ್ಮಿಸಿರುವ ಮಲಿಕವಾಡ-ದತ್ತವಾಡ, ಕಾರದಗಾ-ಭೋಜ, ವೇದಗಂಗಾ ನದಿಗೆ ನಿರ್ಮಿಸಿರುವ ಬೋಜವಾಡಿ-ಕುನ್ನೂರ, ಸಿದ್ನಾಳ- ಅಕ್ಕೋಳ, ಜತ್ರಾಟ-ಭಿವಸಿ ಆರು ಸೇತುವೆಗಳು ಮುಳುಗಡೆಗೊಂಡಿವೆ. ಇರುವುದರಿಂದ ಸಾರ್ವಜನಿಕರು ಸುತ್ತಿ ಬಳಸಿ ಪ್ರಯಾಣ ಮಾಡುತ್ತಿದ್ದಾರೆ. ರಾಜಾಪುರ ಬ್ಯಾರೇಜ್‌ದಿಂದ ರಾಜ್ಯಕ್ಕೆ 65,453 ಸಾವಿರ ಕ್ಯೂಸೆಕ್ ನೀರು ಹರಿದು ಬರುತ್ತಿದೆ. ದೂಧಗಂಗಾ ಮತ್ತು ವೇದಗಂಗಾ ನದಿಯಿಂದ 20,240 ಕ್ಯೂಸೆಕ್ ನೀರು ಹರಿದು ಕೃಷ್ಣಾ ನದಿಗೆ ಬರುತ್ತಿದ್ದು, ಇದರಿಂದ ಚಿಕ್ಕೋಡಿ ತಾಲೂಕಿನ ಕಲ್ಲೋಳ ಹತ್ತಿರ ಕೃಷ್ಣಾ ನದಿಗೆ 85,693 ಕ್ಯೂಸೆಕ್ ನೀರು ಹರಿದು ಬರಲಾರಂಭಿಸಿದೆ. ಜಮಖಂಡಿ ತಾಲೂಕಿನ ಹಿಪ್ಪರಗಿ ಜಲಾಶಯದಿಂದ 71 ಸಾವಿರ ಕ್ಯೂಸೆಕ್ ನೀರನ್ನು ಆಲಮಟ್ಟಿ ಜಲಾಶಯಕ್ಕೆ ಹರಿ ಬಿಡಲಾಗುತ್ತಿದೆ. ಅಲ್ಲಿಂದ 5 ಸಾವಿರ ಕ್ಯೂಸೆಕ್ ನೀರನ್ನು ಆಲಮಟ್ಟಿಯಿಂದ ಹೊರಬಿಡಲಾಗುತ್ತದೆ ಎಂದು ತಹಶೀಲ್ದಾರ ಡಾ| ಸಂತೋಷ ಬಿರಾದಾರ ಮಾಹಿತಿ ನೀಡಿದರು.
ಮಳೆ ಪ್ರಮಾಣ: ಕೊಯ್ನಾ-112 ಮಿಮೀ, ವಾರಣಾ-98ಮಿಮೀ, ಕಾಳಮ್ಮವಾಡಿ- 112ಮಿಮೀ, ನವಜಾ-150 ಸಾಂಗ್ಲಿ-4 ಮಿಮೀ, ರಾಧಾನಗರಿ-104 ಮಿಮೀ, ಪಾಟಗಾಂವ-126 ಮಿಮೀ, ಮಹಾಬಲೇಶ್ವರ-99ಮಿಮೀ, ಕೊಲ್ಲಾಪುರ-19 ಮಿಮೀ ಮಳೆ ಆಗಿದೆ.
ಚಿಕ್ಕೋಡಿ ತಾಲೂಕಿನ ಮಳೆ ವಿವರ: ಚಿಕ್ಕೋಡಿ-5.4 ಮಿಮೀ, ಅಂಕಲಿ-7.4 ಮಿಮೀ, ನಾಗರಮುನ್ನೋಳ್ಳಿ-1.6 ಮಿಮೀ, ಸದಲಗಾ-15.3 ಮಿಮೀ, ಗಳತಗಾ-14.2 ಮಿಮೀ, ಜೋಡಟ್ಟಿ-1.4 ಮಿಮೀ, ನಿಪ್ಪಾಣಿ ಪಿಡಬ್ಲುಡಿ-16.3 ಮಿಮೀ, ನಿಪ್ಪಾಣಿ ಎಆರ್‌ಎಸ್-13.2 ಮಿಮೀ, ಸೌಂದಲಗಾ-20 ಮಿಮೀ ಮಳೆಯಾಗಿದೆ.
ಈ ವಿಭಾಗದಿಂದ ಇನ್ನಷ್ಟು
-
ಮಂಗಳೂರು: ಕಜಕಿಸ್ತಾನದ ಆಲ್ಮಾಟಿಯಲ್ಲಿ ಗುರುವಾರ ನಡೆದ ಏಷ್ಯನ್ ಪವರ್ ಲಿಪ್ಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಕದ್ರಿಯ ದೀಪಾ ಕೆ.ಎಸ್. ಮಹಿಳೆಯರ 72 ಕಿಲೋ ವಿಭಾಗದಲ್ಲಿ...
-
ಬಾಗಲಕೋಟೆ: ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮುಸ್ಲಿಂರನ್ನು ಕಂಡರೆ ದ್ವೇಷವಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಆರೋಪಿಸಿದರು. ಬಾದಾಮಿ...
-
ಹುಮನಾಬಾದ: ಪ್ರತಿಫಲಾಪೇಕ್ಷೆ ಇಲ್ಲದಿರುವುದೇ ನೈಜ ರಾಷ್ಟ್ರಸೇವೆ. ನಾನು ನನಗಾಗಿ ಅಲ್ಲ ನಿಮಗಾಗಿ ಎಂಬುದು ಎನ್ನೆಸ್ಸೆಸ್ ಧ್ಯೇಯ. ಈ ನಿಟ್ಟಿನಲ್ಲಿ ವಿದ್ಯಾರ್ಥಿನಿಯರಲ್ಲಿ...
-
ಶಿವಮೊಗ್ಗ: ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿನ 87 ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ದುರಸ್ತಿಗಾಗಿ ಇದೇ ಪ್ರಥಮ ಬಾರಿಗೆ ಸರ್ಕಾರ 15 ಕೋಟಿ ರೂ....
-
ಚಿಕ್ಕನಾಯಕನಹಳ್ಳಿ: ತಾಲೂಕಿನ ಮಲ್ಲಿಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೊಡ್ಡಪಾಳ್ಯದ ಪ್ರಾಥಮಿಕ ಶಾಲೆಯ ಛಾವಣಿ ಹಾಗೂ ಕಂಬ ಕುಸಿದು ಬಿದ್ದಿದ್ದು, ಅದೃಷ್ಟವಶಾತ್...
ಹೊಸ ಸೇರ್ಪಡೆ
-
ಮಂಗಳೂರು: ಕಜಕಿಸ್ತಾನದ ಆಲ್ಮಾಟಿಯಲ್ಲಿ ಗುರುವಾರ ನಡೆದ ಏಷ್ಯನ್ ಪವರ್ ಲಿಪ್ಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಕದ್ರಿಯ ದೀಪಾ ಕೆ.ಎಸ್. ಮಹಿಳೆಯರ 72 ಕಿಲೋ ವಿಭಾಗದಲ್ಲಿ...
-
ಹೈದರಾಬಾದ್: ಪಶುವೈದ್ಯೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ಬಳಿಕ ಆಕೆಯ ದೇಹವನ್ನು ಸುಟ್ಟುಹಾಕಿದ್ದ ಆರೋಪಿಗಳನ್ನು ಇಂದು ಬೆಳ್ಳಂಬೆಳಿಗ್ಗೆ ಸೈಬರಾಬಾದ್ ಪೊಲೀಸ್...
-
ಬಾಗಲಕೋಟೆ: ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮುಸ್ಲಿಂರನ್ನು ಕಂಡರೆ ದ್ವೇಷವಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಆರೋಪಿಸಿದರು. ಬಾದಾಮಿ...
-
ಮುಂಬೈ: ಕರ್ನಾಟಕ ಕ್ರಿಕೆಟಿಗ ಮನೀಷ್ ಪಾಂಡೆ - ನಟಿ ಅಶ್ರಿತಾ ಶೆಟ್ಟಿ ಆರತಕ್ಷತೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಖ್ಯಾತ ಕ್ರಿಕೆಟಿಗ ಯುವರಾಜ್ ಸಿಂಗ್ "ಪಂಜಾಬಿ...
-
ನವದೆಹಲಿ:ಬಹುಕೋಟಿ ಮೇವು ಹಗರಣದ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲುಶಿಕ್ಷೆ ಅನುಭವಿಸುತ್ತಿರುವ ರಾಷ್ಟ್ರೀಯ ಜನತಾ ಪಕ್ಷ(ಆರ್ ಜೆಡಿ)ದ ಮುಖ್ಯಸ್ಥ, ಬಿಹಾರದ ಮಾಜಿ...