ಭಾರಿ ಮಳೆಗೆ ರಸ್ತೆಗೆ ಉರುಳಿ ಬಿದ್ದ ಮರ

ಬಂಟ್ವಾಳ – ಮೂಡಬಿದಿರೆ ರಸ್ತೆ ಸಂಚಾರ ಅಸ್ತವ್ಯಸ್ತ

Team Udayavani, Jun 26, 2019, 7:08 PM IST

ಬಂಟ್ವಾಳ: ಮದ್ಯಾಹ್ನದಿಂದ ಸುರಿಯುತ್ತಿರುವ ಮಳೆಗೆ ಮರವೊಂದು ರಸ್ತೆಗೆ ಅಡ್ಡವಾಗಿ ಬಿದ್ದು ಸಂಚಾರಕ್ಕೆ ಅಡಚಣೆಯಾದ ಘಟನೆ ಬಂಟ್ವಾಳ ಬಿ.ಕಸ್ಬಾ ಗ್ರಾಮದ ಮಂಡಾಡಿ ಎಂಬಲ್ಲಿ ನಡೆದಿದೆ.

ಬಿ.ಸಿ.ರೋಡು ಮೂಡಬಿದಿರೆ ರಸ್ತೆಯ ಬಿ.ಕಸ್ಬಾ ಗ್ರಾಮದ ಮಂಡಾಡಿ ಎಸ್.ವಿ.ಎಸ್.ಕಾಲೇಜು ಬಳಿ ಹಳೆಯ ಬೃಹತ್ ಗಾತ್ರದ ಮರವೊಂದು ರಸ್ತೆಗೆ ಉರುಳಿ ಬಿದ್ದಿದೆ. ಮರ ಬೀಳುವ ಸಂದರ್ಭದಲ್ಲಿ ರಸ್ತೆಯಲ್ಲಿ ವಾಹನ ಸಂಚಾರವಿಲ್ಲದ ಕಾರಣ ಯಾವುದೇ ಅಪಾಯ ಸಂಭವಿಸಿಲ್ಲ.

ಈ ಘಟನೆಯಿಂದ ಮೂಡಬಿದಿರೆ, ಕುಪ್ಪೆಪದವು ಕಡೆಗೆ ತೆರಳುವ ವಾಹನ ಸವಾರರಿಗೆ ತೊಂದರೆಯಾಗಿದ್ದು, ಬದಲಿ ರಸ್ತೆಯಾಗಿ ಸಂಚಾರ ಮಾಡಲಾಗುತ್ತಿದೆ.

ಸ್ಥಳಕ್ಕೆ ಬಂಟ್ವಾಳ ಟ್ರಾಫಿಕ್ ಎಸ್.ಐ.ಮಂಜುನಾಥ್ ಹಾಗೂ ಸಿಬ್ಬಂದಿಗಳು ಬೇಟಿ ನೀಡಿದ್ದಾರೆ, ಸಾರ್ವಜನಿಕರು ಮರ ತೆರವಿಗೆ ಪ್ರಯತ್ನ ನಡೆಸುತ್ತಿದ್ದಾರೆ.


ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ