Fraud Case ಕ್ರೆಡಿಟ್ ಕಾರ್ಡ್ನಿಂದ 1.55 ಲಕ್ಷ ರೂ. ವರ್ಗಾಯಿಸಿ ವಂಚನೆ
Team Udayavani, Oct 2, 2023, 10:22 PM IST
ಮಂಗಳೂರು: ಕ್ರೆಡಿಟ್ ಕಾರ್ಡ್ನಿಂದ 1.55 ಲ.ರೂ.ಗಳನ್ನು ಅನಧಿಕೃತವಾಗಿ ವರ್ಗಾಯಿಸಿ ವಂಚಿಸಿರುವ ಬಗ್ಗೆ ಮಂಗಳೂರಿನ ಸೆನ್ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.
ದೂರುದಾರರು ಐಸಿಐಸಿಐ ಕ್ರೆಡಿಟ್ ಕಾರ್ಡ್ ಹೊಂದಿದ್ದು, ಅವರ ಮೊಬೈಲ್ಗೆ ಸೆ. 10ರಂದು ಹಲವು ಒಟಿಪಿಗಳ ಸಂದೇಶ ಬಂದಿದ್ದವು. ಅಲ್ಲದೆ ಅಪರಿಚಿತ ಸಂಖ್ಯೆಯಿಂದ ಕರೆ ಬಂದಿತ್ತು.
ಅವರು ಯಾವುದೇ ಕರೆ ಸ್ವೀಕರಿಸದೆ ಕೂಡಲೇ ತಮ್ಮ ಮೊಬೈಲ್ನಿಂದ ಐಸಿಐಸಿಐ ಆ್ಯಪ್ ತೆರೆದು ಕ್ರೆಡಿಟ್ ಕಾರ್ಡ್ ಬ್ಲಾಕ್ ಮಾಡಿದ್ದರು. ಅಲ್ಲದೆ ಐಸಿಐಸಿಐ ಕ್ರೆಡಿಟ್ ಕಾರ್ಡ್ನ ಕಸ್ಟಮರ್ ಕೇರ್ಗೆ ಕರೆ ಮಾಡಿ ಕಾರ್ಡ್ ಬ್ಲಾಕ್ ಮಾಡಿರುವ ಬಗ್ಗೆ ಖಚಿತಪಡಿಸಿಕೊಂಡಿದ್ದರು.
ಕಾರ್ಡ್ ಬ್ಲಾಕ್ ಆಗಿರುವ ಬಗ್ಗೆ ಈ ಮೇಲ್ ಕೂಡ ಕಸ್ಟಮರ್ ಕೇರ್ನವರಿಂದ ಬಂದಿತ್ತು. ಮರುದಿನ ರಾತ್ರಿ ಆ್ಯಪ್ ಮೂಲಕ ಕ್ರೆಡಿಟ್ ಕಾರ್ಡ್ನ ಸ್ಟೇಟಸ್ ನೋಡಿದಾಗ 1,60,401 ರೂ. ಔಟ್ಸ್ಟಾಂಡಿಂಗ್ ಇರುವುದಾಗಿ ತೋರಿಸಿತು. ಕೂಡಲೇ ಕಸ್ಟಮರ್ ಕೇರ್ಗೆ ಕರೆ ಮಾಡಿ ವಿಚಾರಿಸಿದಾಗ ಯಾರೋ ಅಪರಿಚಿತರು ಆನ್ಲೈನ್ ಮೂಲಕ ಮೋಸದಿಂದ 1.55 ಲ.ರೂ.ಗಳನ್ನು ಅನಧಿಕೃತವಾಗಿ ವರ್ಗಾವಣೆ ಮಾಡಿಕೊಂಡಿರುವುದು ಗೊತ್ತಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ
Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ
Lok Sabha Polls: ಸ್ಟ್ರಾಂಗ್ ರೂಂಗಳಲ್ಲಿ ಮತಯಂತ್ರಗಳು ಸುಭದ್ರ
Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ