ಮರ ತೆರವಿಗೆ ಪರ್ಯಾಯವಾಗಿ ಗಿಡ ನೆಡಲು 1.10 ಕೋ.ರೂ.

Team Udayavani, Jul 30, 2017, 6:55 AM IST

Tree-29-7.jpg

ಬಂಟ್ವಾಳ-ಸಕಲೇಶಪುರ ಚತುಷ್ಪಥ ರಸ್ತೆ

ಪುತ್ತೂರು: ಬಂಟ್ವಾಳ- ಸಕಲೇಶಪುರ ಚತುಷ್ಪಥ ರಸ್ತೆ ಹಾದುಹೋಗುವ ಪುತ್ತೂರು, ಬಂಟ್ವಾಳದ ರಸ್ತೆ ವಿಸ್ತರಿತ ಪ್ರದೇಶದ 3, 113 ಮರ ತೆರವಿಗೆ ಪರಿಹಾರವಾಗಿ ಸಸಿ ನೆಡಲು ರಾಷ್ಟ್ರೀಯ ಹೆದ್ಧಾರಿ ಪ್ರಾಧಿಕಾರ 1.10 ಕೋ.ರೂ. ಮೊತ್ತ ವನ್ನು ರಾಜ್ಯ ಅರಣ್ಯ ಇಲಾಖೆಗೆ ಪಾವತಿಸಿದೆ. ಅಡ್ಡಹೊಳೆ-ಬಿ.ಸಿ.ರೋಡ್‌ ಚತುಷ್ಪಥ ಹೆದ್ದಾರಿ ನಿರ್ಮಾಣದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ 10,197 ಮರ ಕಡಿಯಲು ಟೆಂಡರ್‌ ನೀಡಿದೆ. ಆದರೆ 2 ನೇ ಸರ್ವೇ ವೇಳೆ ಮರಗಳ ಸಂಖ್ಯೆ ಹೆಚ್ಚಾಗಿದ್ದರಿಂದ ಒಟ್ಟು 15 ಸಾವಿರ ಮರಗಳನ್ನು ಕಡಿಯಲು ಗುರುತು ಸಹಿತ ಟೆಂಡರ್‌ ನೀಡಿದೆ. ಇದರಲ್ಲಿ ಉಪ್ಪಿನಂಗಡಿ, ಪುತ್ತೂರು, ಪಂಜ, ಬಂಟ್ವಾಳ ವಲಯ ಅರಣ್ಯ ವ್ಯಾಪ್ತಿಯಲ್ಲಿ 3,113 ಮರಗಳು ಸೇರಿವೆ.

63 ಕಿ.ಮೀ. ರಸ್ತೆ
ಶಿರಾಡಿ ಅಡ್ಡಹೊಳೆಯಿಂದ ಬಂಟ್ವಾಳದ ತನಕ ಒಟ್ಟು 63.5 ಕಿ.ಮೀ. ರಸ್ತೆಯು ಚತುಷ್ಪ ಥಗೊಳ್ಳಲಿದ್ದು, ಈಗ ಗುಂಡ್ಯದಿಂದ ಉಪ್ಪಿನಂಗಡಿ ತನಕ ರಸ್ತೆಗೆ ಹೊಂದಿಕೊಂಡ ಮರಗಳ ತೆರವು ಕಾರ್ಯ ಪ್ರಗತಿಯಲ್ಲಿದೆ. ಸಕಲೇಶಪುರ ತಾಲೂಕಿನ 12 ಗ್ರಾಮ, ದ.ಕ. ಜಿಲ್ಲೆಯ ಶಿರಾಡಿ, ಶಿರಿವಾಗಿಲು, ನೂಜಿಬಾಳ್ತಿಲ, ನೆಲ್ಯಾಡಿ, ಕೊನಾಲು, ಗೋಳಿತಟ್ಟು, ಬಜತ್ತೂರು, ಉಪ್ಪಿನಂಗಡಿ, ನೆಕ್ಕಿಲಾಡಿ, ಬೆಳ್ತಂಗಡಿ ತಾಲೂಕಿನ ರೇಖ್ಯಾ, ಬಂಟ್ವಾಳ ತಾಲೂಕಿನ ಬಿಳಿಯೂರು, ಪೆರ್ನೆ, ಕೆದಿಲ, ಮಾಣಿ, ಬಾಳ್ತಿಲ, ಗೋಳ್ತಮಜಲು, ಕಸಬಾ ಪಾಣೆ ಮಂಗಳೂರು, ನರಿಕೊಂಬು, ಬಿ.ಮೂಡ ಪ್ರದೇಶದಲ್ಲಿ ಮರ ಕಡಿಯಲು ಗಡಿ ಗುರುತಿಸಲಾಗಿದೆ.

1.10 ಕೋಟಿ ರೂ. ಪಾವತಿ
ಮರದ ಈಗಿನ ಧಾರಣೆ ಅಂಕಿ ಅಂಶದಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ 1.10 ಕೋ.ರೂ. ಅನ್ನು ಪಾವತಿಸಿದೆ. ಪಂಜ ವಲಯದ 75 ಮರಗಳಿಗೆ 2.78 ಲ.ರೂ, ಉಪ್ಪಿನಂಗಡಿ ವಲಯದ 610 ಮರಗಳಿಗೆ 24.64 ಲ.ರೂ, ಪುತ್ತೂರು ವಲಯದ ವ್ಯಾಪ್ತಿಯ 937 ಮರಗಳಿಗೆ 36.74 ಲ.ರೂ, ಬಂಟ್ವಾಳ ವಲಯ ವ್ಯಾಪ್ತಿಯ 1,491 ಮರಗಳಿಗೆ 46.27 ಲಕ್ಷ ರೂ. ಪಾವತಿಸಲಾಗಿದೆ.

ಪಾವತಿ ಮೊತ್ತದಲ್ಲಿ ಸಸಿ ನೆಡುವಿಕೆ
ಚೆನ್ನೈ ಹಸಿರು ಪೀಠ ಸ್ವಂತ ಜಾಗ ಸೇರಿದಂತೆ ಅರಣ್ಯ ಪ್ರದೇಶದಲ್ಲಿ ಮರ ಕಡಿಯಲು ಅವಕಾಶ ಇಲ್ಲ ಎಂಬ ಆದೇಶ ಹೊರಡಿಸಿದೆ. ಒಂದು ವೇಳೆ ತೆರವು ಅನಿವಾರ್ಯ ಎಂದಾದರೆ, ಅದಕ್ಕೊಂದು ಅವಕಾಶ ಇದೆ. ಕಡಿದ ಒಂದು ಮರಕ್ಕೆ ಪರ್ಯಾಯವಾಗಿ ಹತ್ತು ಗಿಡ ನೆಡುವುದು ಇದರ ಪರಿಹಾರ ಕ್ರಮ. ಇದೇ ಅನ್ವಯ ರಸ್ತೆ ವಿಸ್ತರಣೆ ಸಂದರ್ಭದಲ್ಲಿ ಕಡಿದ ಮರದ ಪರಿಹಾರ ಮೊತ್ತವನ್ನು ಪ್ರಾಧಿಕಾರ ಅರಣ್ಯ ಇಲಾಖೆಗೆ ಪಾವತಿಸಿದೆ. ಈ ಮೊತ್ತದಲ್ಲಿ ಅರಣ್ಯ ಇಲಾಖೆ ತನ್ನ ಅರಣ್ಯ ಭೂಮಿಯಲ್ಲಿ ಹಾಗೂ ಸ್ಥಳ ಕೊರತೆ ಇದ್ದರೆ ಕಂದಾಯ ಇಲಾಖೆ ಗುರುತಿಸುವ ಸ್ಥಳದಲ್ಲಿ 1 ಮರದ ಬದಲಾಗಿ 15 ಸಸಿ ನೆಡಬೇಕು. ಅದಕ್ಕಾಗಿ 1.10 ಕೋ.ರೂ. ಹಣ ಬಳಸಬೇಕು.

ಲೆಕ್ಕಕ್ಕಿಂತ ಅಧಿಕ ಮರ ತೆರವು..!
ಆದರೆ ಅರಣ್ಯ ಇಲಾಖೆ ಒಪ್ಪಿಗೆ ನೀಡಿದ ಅನುಮತಿಗಿಂತ ಅಧಿಕ ಮರಗಳನ್ನು ತೆರವು ಮಾಡಲಾಗುತ್ತಿದೆ ಎಂಬ ಆರೋಪ ಕೇಳಿ ಬರುತ್ತಿದೆ. ಗೋಳಿತೊಟ್ಟು ಮೀಸಲು ಅರಣ್ಯ ಸೇರಿದಂತೆ ಇತರ ಅರಣ್ಯ ಪ್ರದೇಶದಲ್ಲಿ 7992 ಹಾಗೂ ಸರಕಾರಿ ಭೂಮಿಯಲ್ಲಿದ್ದ 4870 ಮರಗಳನ್ನು ತೆರವು ಮಾಡಲಾಗುತ್ತಿದೆ. ಆದರೆ ಟೆಂಡರ್‌ ಪಡೆದವರು ಇಲಾಖೆ ಗುರುತು ಮಾಡಿದ ಮರಗಳ ಜತೆಗೆ ಇತರ ಮರ ಗಳನ್ನೂ ಕಡಿಯುತ್ತಿರುವುದು ಕಂಡುಬಂದಿದೆ. ನೆಲ್ಯಾಡಿ, ಗುಂಡ್ಯ, ಗೋಳಿತೊಟ್ಟು ವ್ಯಾಪ್ತಿಯಲ್ಲಿ ಹೆದ್ದಾರಿಯುದ್ದಕ್ಕೂ ಕಡಿದ ಮರಗಳ ಸಂಖ್ಯೆ ದುಪ್ಪಟ್ಟಾಗಿದೆ ಎಂಬುದು ಪರಿಸರವಾದಿಗಳ ಆರೋಪ.

ಎಲ್ಲೆಲ್ಲಿ  ಎಷ್ಟೆಷ್ಟು..?
ಪಂಜ ವಲಯ ವ್ಯಾಪ್ತಿಯ ನೆಲ್ಯಾಡಿ, ನೂಜಿ ಬಾಳ್ತಿಲದಲ್ಲಿ 15 ಮರ, ಉಪ್ಪಿನಂಗಡಿ ವಲಯ ವ್ಯಾಪ್ತಿಯ ಉಪ್ಪಿನಂಗಡಿ, ಕೌಕ್ರಾಡಿ, ರೆಖ್ಯಾ ಗ್ರಾಮ, ಶಿರಾಡಿಯಲ್ಲಿ 237, ಪುತ್ತೂರು ವಲಯ ಅರಣ್ಯ ವ್ಯಾಪ್ತಿಯ ಗೋಳಿತೊಟ್ಟು, ಕರುವೇಲುವಿನಲ್ಲಿ 937, ಬಂಟ್ವಾಳ ವಲಯ ವ್ಯಾಪ್ತಿಯ ಪೆರ್ನೆ, ಕಡೇಶಿವಾಲಯ, ಕೆದಿಲ, ಪೆರಾಜೆ, ಮಾಣಿ, ಬಾಳ್ತಿಲದಲ್ಲಿ 957 ಮರಗಳ ತೆರವಿಗೆ ಒಪ್ಪಿಗೆ ಸೂಚಿಸಲಾಗಿತ್ತು.

– ಕಿರಣ್‌ ಪ್ರಸಾದ್‌ ಕುಂಡಡ್ಕ

ಟಾಪ್ ನ್ಯೂಸ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

CAR-D

Sullia: ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಕಂಟೈನರ್‌ ಢಿಕ್ಕಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.