ಕಾಂತಮಂಗಲ ಸೇತುವೆ ದುರಸ್ತಿಗೆ 15 ಲ. ರೂ. ಮಂಜೂರು

Team Udayavani, Jul 6, 2018, 2:40 AM IST

kanthamangala-5-7.jpg

ಸುಳ್ಯ: ಅಂತಾರಾಜ್ಯ ಸಂಪರ್ಕದ ಕಾಂತಮಂಗಲ ಸೇತುವೆ ಕುಸಿತದ ಭೀತಿ ಹಿನ್ನೆಲೆಯಲ್ಲಿ ಪ್ರಾಕೃತಿಕ ವಿಕೋಪ ನಿಧಿಯಿಂದ ಜಿ.ಪಂ.ವತಿಯಿಂದ 5 ಲಕ್ಷ ರೂ ಹಾಗೂ ಜಿಲ್ಲಾಧಿಕಾರಿ ಮೂಲಕ 10 ಲ.ರೂ. ಅನುದಾನ ಬಿಡುಗಡೆಗೊಂಡಿದೆ. ತಾ.ಪಂ., ಗ್ರಾ.ಪಂ. ಸಭೆಗಳಲ್ಲಿ ಈ ವಿಷಯ ಪ್ರಸ್ತಾವಗೊಂಡಿತ್ತು. ಶಾಸಕ ಅಂಗಾರ ಉಪಸ್ಥಿತಿಯಲ್ಲಿ ತಾಲೂಕು ಮಟ್ಟದಲ್ಲಿ ನಡೆದ ಸಭೆಯಲ್ಲಿ ಚರ್ಚೆ ನಡೆದಿತ್ತು. ಹೀಗಾಗಿಸ ಜಿಲ್ಲಾಡಳಿತ ಪಂಚಾಯತ್‌ ರಾಜ್‌ ಇಲಾಖೆ ಮೂಲಕ ಅನುದಾನ ಬಿಡುಗಡೆ ಗೊಳಿಸಿದೆ. ಪಂಚಾಯತ್‌ರಾಜ್‌ ಇಲಾಖೆ ಸೇತುವೆ ಪರಿಶೀಲಿಸಿದ್ದು, ಅಗತ್ಯವಾಗಿರುವ ಎಲ್‌ ಮಾದರಿ ಕಬ್ಬಿಣದ ಸಲಕರಣೆ ಪೂರೈಕೆಗೆ ಹೈದರಾಬಾದ್‌ಗೆ ಪ್ರಸ್ತಾವ ಪಟ್ಟಿ ಕಳುಹಿಸಿದೆ. ಅಲ್ಲಿ ಕ್ಲಾಸ್‌-1 ಗುತ್ತಿಗೆದಾರ ಪೂರೈಕೆಯ ಜವಾಬ್ದಾರಿ ತೆಗೆದುಕೊಂಡಿದ್ದು, ಸಾಮಾಗ್ರಿ ಬಂದ ತತ್‌ ಕ್ಷಣ ಕಾಮಗಾರಿ ಆರಂಭಿಸಲಾ ಗುವುದು ಎಂದು ಪಂಚಾಯತ್‌ರಾಜ್‌ ಇಲಾಖೆಯ ಪ್ರಭಾರ ಸಹಾಯಕ ಕಾರ್ಯಪಾಲ ಎಂಜಿನಿಯರ್‌ ಚೆನ್ನಪ್ಪ ಮೊಯಿಲಿ ‘ಉದಯವಾಣಿ’ಗೆ ಮಾಹಿತಿ ನೀಡಿದ್ದಾರೆ.

ಸೇತುವೆ ದುರಸ್ತಿ ಹಿನ್ನೆಲೆಯಲ್ಲಿ ಸಂಚಾರ ಬಂದ್‌ ಮಾಡುವುದು ಅನಿವಾರ್ಯವಾಗಿದೆ. ಕಾಮಗಾರಿ ಗುಣಮಟ್ಟ ಕಾಪಾಡುವ ಉದ್ದೇಶದಿಂದ ಕೆಲವು ದಿನಗಳ ಕಾಲ ಸೇತುವೆ ಬಂದ್‌ ಮಾಡಿ ದುರಸ್ತಿ ಕೈಗೆತ್ತಿಕೊಳ್ಳಬೇಕಿದೆ. ಹದಿನೈದು ದಿವಸದೊಳಗೆ ದುರಸ್ತಿ ಕಾಮಗಾರಿ ಆರಂಭವಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಉದಯವಾಣಿ ವರದಿ
ಕರ್ನಾಟಕ – ಕೇರಳ ಸಂಪರ್ಕಿಸುವ ಕಾಂತಮಂಗಲ – ಅಜ್ಜಾವರ – ಮಂಡೆಕೋಲು ರಸ್ತೆಯಲ್ಲಿ ಪಯಸ್ವಿನಿ ನದಿಗೆ 1980ರಲ್ಲಿ ಕಾಂತಮಂಗಲದಲ್ಲಿ ನಿರ್ಮಿಸಲಾಗಿತ್ತು. ಕೆಲ ವರ್ಷಗಳಿಂದ ಸೇತುವೆ ಶಿಥಿಲಗೊಂಡು, ಬಿರುಕು ಬಿಟ್ಟಿತ್ತು. ಘನವಾಹನ ಓಡಾಟ ನಿರ್ಬಂಧಿಸಲಾಗಿತ್ತು. ಮಳೆಗಾಲದ ಆರಂಭದಲ್ಲಿ ಹೊಂಡ ತುಂಬಿ ಕುಸಿಯುವ ಹಂತಕ್ಕೆ ತಲುಪಿರುವ ಬಗ್ಗೆ ‘ಉದಯವಾಣಿ’ ನಿರಂತರ ಸಚಿತ್ರ ವರದಿ ಪ್ರಕಟಿಸಿ, ಸಂಬಂಧಪಟ್ಟ ಇಲಾಖೆ, ಜನಪ್ರತಿನಿಧಿಗಳ ಗಮನ ಸೆಳೆದಿತ್ತು.

ಟಾಪ್ ನ್ಯೂಸ್

Farmer

Reveled; ಮೃತಪಟ್ಟಿರುವ ರೈತರ ಹೆಸರಿನಲ್ಲೇ ಪಹಣಿ !

Exam

NEET ಮಹಾರಾಷ್ಟ್ರದಲ್ಲೂ ಅಕ್ರಮ ಬಹಿರಂಗ

HDK (3)

Mining; ನನ್ನ ಮೇಲೆ ಸಿಟ್ಟು ; ದೇವದಾರಿಗೆ ತಡೆ : ಕೇಂದ್ರ ಸಚಿವ ಕುಮಾರಸ್ವಾಮಿ

Highway ಕಾಮಗಾರಿ ಅವ್ಯವಸ್ಥೆ: ಕಲ್ಲಡ್ಕದಲ್ಲಿ ಕೃತಕ ನೆರೆ ಸೃಷ್ಟಿ!

Highway ಕಾಮಗಾರಿ ಅವ್ಯವಸ್ಥೆ: ಕಲ್ಲಡ್ಕದಲ್ಲಿ ಕೃತಕ ನೆರೆ ಸೃಷ್ಟಿ!

Surathkal ಕುಳಾಯಿ ಕಿರು ಜೆಟ್ಟಿಯ ಬ್ರೇಕ್‌ವಾಟರ್‌ ಕಲ್ಲು ಸಮುದ್ರಪಾಲು

Surathkal ಕುಳಾಯಿ ಕಿರು ಜೆಟ್ಟಿಯ ಬ್ರೇಕ್‌ವಾಟರ್‌ ಕಲ್ಲು ಸಮುದ್ರಪಾಲು

Rain ಕರಾವಳಿ: ಜೂ.26ರ ವರೆಗೆ ಬಿರುಸಿನ ಮಳೆ ಸಾಧ್ಯತೆ

Rain ಕರಾವಳಿ: ಜೂ.26ರ ವರೆಗೆ ಬಿರುಸಿನ ಮಳೆ ಸಾಧ್ಯತೆ

ಕರಾವಳಿಯ ಪ್ರಮುಖ ದೇಗುಲಗಳಲ್ಲಿ ಭಕ್ತಸಂದಣಿ

ಕರಾವಳಿಯ ಪ್ರಮುಖ ದೇಗುಲಗಳಲ್ಲಿ ಭಕ್ತಸಂದಣಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Highway ಕಾಮಗಾರಿ ಅವ್ಯವಸ್ಥೆ: ಕಲ್ಲಡ್ಕದಲ್ಲಿ ಕೃತಕ ನೆರೆ ಸೃಷ್ಟಿ!

Highway ಕಾಮಗಾರಿ ಅವ್ಯವಸ್ಥೆ: ಕಲ್ಲಡ್ಕದಲ್ಲಿ ಕೃತಕ ನೆರೆ ಸೃಷ್ಟಿ!

ಕರಾವಳಿಯ ಪ್ರಮುಖ ದೇಗುಲಗಳಲ್ಲಿ ಭಕ್ತಸಂದಣಿ

ಕರಾವಳಿಯ ಪ್ರಮುಖ ದೇಗುಲಗಳಲ್ಲಿ ಭಕ್ತಸಂದಣಿ

Udupi- Kasaragod ವಿದ್ಯುತ್‌ ಮಾರ್ಗ: ರೈತರ ಮೇಲೆ ಸುಳ್ಳು ಪ್ರಕರಣ ದಾಖಲಿಸಿದರೆ ಹೋರಾಟ’

Udupi- Kasaragod ವಿದ್ಯುತ್‌ ಮಾರ್ಗ: ರೈತರ ಮೇಲೆ ಸುಳ್ಳು ಪ್ರಕರಣ ದಾಖಲಿಸಿದರೆ ಹೋರಾಟ’

ಧರ್ಮಸ್ಥಳಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ

ಧರ್ಮಸ್ಥಳಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ

Kanyadi: ರಿಕ್ಷಾ ಪಲ್ಟಿ; ಗಾಯ

Belthangady ಕನ್ಯಾಡಿ: ರಿಕ್ಷಾ ಪಲ್ಟಿ; ಹಲವರಿಗೆ ಗಾಯ

MUST WATCH

udayavani youtube

ಹುಣಸೂರು ತಾಲೂಕಿನ ಸಮಗ್ರ ಅಭಿವೃದ್ದಿಗೆ ಬದ್ದ: ಸಂಸದ ಯದುವೀರ್‌ ಒಡೆಯರ್

udayavani youtube

ಈಕೆ ಭಾರತದ ಮೊದಲ ಸರಣಿ ಕೊಲೆಗಾರ್ತಿ | ಸೈನೈಡ್ ಮಲ್ಲಿಕಾ

udayavani youtube

ಮುಳ್ಳಯ್ಯನಗಿರಿ,ದತ್ತಪೀಠ, ಸೀತಾಳಯ್ಯನಗಿರಿಯಲ್ಲಿ ಜನಜಾತ್ರೆ; ಖಾಕಿ ಹೈ ಅಲರ್ಟ್

udayavani youtube

ಕಡುಬು ಸೇವೆಗೆ ಒಲಿಯುವ ಮುಂಡ್ರಪಾಡಿ ಈಶ

udayavani youtube

ಅಣ್ಣಾವ್ರ ಅಪರೂಪದ ವಿಡಿಯೋ | ಯೋಗ ದಿನ | ಡಾ. ರಾಜ್ ಕುಮಾರ್

ಹೊಸ ಸೇರ್ಪಡೆ

Farmer

Reveled; ಮೃತಪಟ್ಟಿರುವ ರೈತರ ಹೆಸರಿನಲ್ಲೇ ಪಹಣಿ !

Exam

NEET ಮಹಾರಾಷ್ಟ್ರದಲ್ಲೂ ಅಕ್ರಮ ಬಹಿರಂಗ

HDK (3)

Mining; ನನ್ನ ಮೇಲೆ ಸಿಟ್ಟು ; ದೇವದಾರಿಗೆ ತಡೆ : ಕೇಂದ್ರ ಸಚಿವ ಕುಮಾರಸ್ವಾಮಿ

Highway ಕಾಮಗಾರಿ ಅವ್ಯವಸ್ಥೆ: ಕಲ್ಲಡ್ಕದಲ್ಲಿ ಕೃತಕ ನೆರೆ ಸೃಷ್ಟಿ!

Highway ಕಾಮಗಾರಿ ಅವ್ಯವಸ್ಥೆ: ಕಲ್ಲಡ್ಕದಲ್ಲಿ ಕೃತಕ ನೆರೆ ಸೃಷ್ಟಿ!

Surathkal ಕುಳಾಯಿ ಕಿರು ಜೆಟ್ಟಿಯ ಬ್ರೇಕ್‌ವಾಟರ್‌ ಕಲ್ಲು ಸಮುದ್ರಪಾಲು

Surathkal ಕುಳಾಯಿ ಕಿರು ಜೆಟ್ಟಿಯ ಬ್ರೇಕ್‌ವಾಟರ್‌ ಕಲ್ಲು ಸಮುದ್ರಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.