3 ತಿಂಗಳಲ್ಲಿ 50 ಹೊಸ ಬಸ್‌ಗಳ ಸೇವೆ

ಮಂಗಳೂರು - ಹೈದರಾಬಾದ್‌: ಎಸಿ ಸ್ಲೀಪರ್‌ಗೆ ಚಾಲನೆ ನೀಡಿ ಸಚಿವ ಕೋಟ

Team Udayavani, Dec 10, 2019, 5:46 AM IST

ಮಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮಂಗಳೂರು ವಿಭಾಗದಿಂದ ರಾಜ್ಯ ಹಾಗೂ ಹೊರರಾಜ್ಯಗಳಿಗೆ ಮುಂದಿನ ಮೂರು ತಿಂಗಳ ಅವಧಿಯಲ್ಲಿ ಹೊಸದಾಗಿ 50 ರಾಜಹಂಸ ಹಾಗೂ ನಾನ್‌ ಎಸಿ ಸ್ಲೀಪರ್‌ ಬಸ್‌ಗಳನ್ನು ಆರಂಭಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಮಂಗಳೂರಿನಿಂದ ಹೈದರಾಬಾದ್‌ಗೆ ಆರಂಭಿಸಿರುವ ಅಂಬಾರಿ ಡ್ರೀಮ್‌ಕ್ಲಾಸ್‌ ಮಲ್ಟಿಆ್ಯಕ್ಸೆಲ್‌ ಎಸಿ ಸ್ಲೀಪರ್‌ ಬಸ್‌ಗೆ ಸೋಮವಾರ ಚಾಲನೆ ನೀಡಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಈ ಬಸ್‌ ಸೇವೆಯಿಂದ ಈ ಭಾಗದ ಜನರಿಗೆ ಹೆಚ್ಚು ಅನುಕೂಲವಾಗಿದೆ ಎಂದರು.

ಯಾನ ದರ 1,400 ರೂ.
ಮಂಗಳೂರಿನಿಂದ ಅಪರಾಹ್ನ 3 ಗಂಟೆಗೆ ಹೊರಡುವ ಬಸ್‌ ಉಡುಪಿ ಮಣಿಪಾಲ, ಕುಂದಾಪುರ, ಭಟ್ಕಳ ಮಾರ್ಗವಾಗಿ ಹೈದರಾಬಾದ್‌ಗೆ ಮರುದಿನ ಬೆಳಗ್ಗೆ 8.30ಕ್ಕೆ ತಲುಪಲಿದೆ. ಮರು ಪ್ರಯಾಣದಲ್ಲಿ ಹೈದರಾಬಾದ್‌ನಿಂದ ಸಂಜೆ 7 ಗಂಟೆಗೆ ಹೊರಟು ಮರುದಿನ ಬೆಳಗ್ಗೆ 10 ಗಂಟೆಗೆ ಮಂಗಳೂರು ತಲುಪುವುದು. ಯಾನದರ 1,400 ರೂ. ಆಗಿರುತ್ತದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ಎಸ್‌.ಎನ್‌. ಅರುಣ ವಿವರಿಸಿದರು.

ಶಾಸಕ ವೇದವ್ಯಾಸ ಕಾಮತ್‌ ಮಾತನಾಡಿ, ಕೆಎಸ್ಸಾರ್ಟಿಸಿ ಬಸ್‌ಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರ ಸಮಸ್ಯೆಗಳನ್ನು ಪರಿಹರಿಸಲು ಪ್ರತಿ ಮೂರು ತಿಂಗಳಿಗೊಮ್ಮೆ ಉಸ್ತುವಾರಿ ಸಚಿವ ಅಧ್ಯಕ್ಷತೆಯಲ್ಲಿ ಸಭೆ ನಡೆಸಬೇಕು ಎಂದು ಸಚಿವರಲ್ಲಿ ಕೋರಿದರು.

ಕೆಎಸ್ಸಾರ್ಟಿಸಿಯ ವಿಭಾಗೀಯ ಸಂಚಾರ ಅಧಿಕಾರಿ ಇಸ್ಮಾಯಿಲ್‌, ಮನಪಾ ಸದಸ್ಯರಾದ ಸುಧೀರ್‌ ಶೆಟ್ಟಿ, ಶಕೀಲಾ ಕಾವ ಉಪಸ್ಥಿತರಿದ್ದರು.

ವಿಶೇಷತೆಗಳು
40 ಆಸನ ಸಾಮರ್ಥ್ಯದ ಅಂಬಾರಿ ಡ್ರೀಮ್‌ಕ್ಲಾಸ್‌ ಮಲ್ಟಿ ಆ್ಯಕ್ಸೆಲ್‌ ಎಸಿ ಸ್ಲೀಪರ್‌ ಬಸ್‌ ಆರಾಮದಾಯಕ ಪ್ರಯಾಣವನ್ನು ಕಲ್ಪಿಸಲಿದೆ. ಸುಲಭ ಚಾಲನೆಗಾಗಿ ವಿದ್ಯುನ್ಮಾನ ನಿಯಂತ್ರಿತ ಸಸ್ಪೆನ್ಶನ್ಸ್‌, ಮೊಬೈಲ್‌ ಚಾರ್ಜಿಂಗ್‌ ಪಾಯಿಂಟ್‌ ಹೊಂದಿದೆ. ವಿಹಂಗಮ ನೋಟಕ್ಕಾಗಿ ವಿಶಾಲವಾದ ಕಿಟಕಿಗಳು, ಮೇಲ್ಛಾವಣಿ ಕಿಟಕಿ ಹೊಂದಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ

  • ಬೆಂಗಳೂರು: ನಗರದಲ್ಲಿ ಆಸ್ತಿ ಮಾಲೀಕರಿಂದ ಆಸ್ತಿ ತೆರಿಗೆಯೊಂದಿಗೆ ಶೇ.2ರಷ್ಟು ಭೂ ಸಾರಿಗೆ ಉಪ ಕರ (ಸೆಸ್‌) ವಸೂಲಿ ಮಾಡುವ ಬಿಬಿಎಂಪಿ ನಿರ್ಣಯಕ್ಕೆ ಸಾರ್ವಜನಿಕ ವಲಯದಿಂದ...

  • ಬೆಂಗಳೂರು: ನೆರೆ ಸಂತ್ರಸ್ತರು ತ್ವರಿತವಾಗಿ ಎರಡನೇ ಕಂತಿನ ಹಣವನ್ನು ಪಡೆದು ಮನೆಗಳನ್ನು ಮೂರು ತಿಂಗಳಲ್ಲಿ ನಿರ್ಮಿಸಿಕೊಳ್ಳಬೇಕು ಎಂದು ಕಂದಾಯ ಸಚಿವ ಆರ್‌.ಅಶೋಕ್‌...

  • ಮುಖ್ಯಮಂತ್ರಿ ಯಡಿಯೂರಪ್ಪ ಅವರ ದೆಹಲಿ ಭೇಟಿ ಹಿನ್ನೆಲೆಯಲ್ಲಿ ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತಾದ ಚರ್ಚೆ ಗರಿಗೆದರುತ್ತಿದ್ದು, ಸಚಿವಾಕಾಂಕ್ಷಿಗಳಲ್ಲಿ...

  • ಬೆಂಗಳೂರು: ಕಾರ್ಮಿಕ ಇಲಾಖೆಯಲ್ಲಿ ಖಾಲಿ ಇರುವ ಶೇ.49 ಹುದ್ದೆಗಳನ್ನು ಭರ್ತಿ ಮಾಡಿ ಕೊಳ್ಳುವ ಸಂಬಂಧ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರೊಂದಿಗೆ ಚರ್ಚಿಸಲಾಗುವುದು...

  • ಬೆಂಗಳೂರು: ಶಿಕ್ಷಣ ಇಲಾಖೆಯಲ್ಲಿ ಒಂದು ವಿಭಾಗದಿಂದ ಇನ್ನೊಂದು ವಿಭಾಗಕ್ಕೆ ವರ್ಗಾವಣೆ ಹೊಂದಿರುವ ಶಿಕ್ಷಕರು ಮುಂಬಡ್ತಿಯಿಂದಲೂ ವಂಚಿತರಾಗುತ್ತಿದ್ದಾರೆ. 2006ಕ್ಕಿಂತ...