ನೆಲ್ಯಾಡಿ ವಿವಿ ಘಟಕಕ್ಕೆ 6 ಕೊಠಡಿಗಳ ಕಟ್ಟಡ

Team Udayavani, Jan 27, 2019, 5:52 AM IST

27-january-7.jpg

ನೆಲ್ಯಾಡಿ: ಮಂಗಳೂರು ವಿಶ್ವವಿದ್ಯಾನಿಲಯ ಘಟಕದ ತರಗತಿ ಗಳು ನೆಲ್ಯಾಡಿಯಲ್ಲಿ ತಾತ್ಕಾಲಿಕ ಬಾಡಿಗೆ ಕಟ್ಟಡದಲ್ಲಿ ಕಳೆದ ಶೈಕ್ಷಣಿಕ ವರ್ಷಾರಂಭದಲ್ಲಿ ಪ್ರಾರಂಭವಾಗಿದ್ದು, ಉದ್ದೇಶಿತ ವಿ.ವಿ. ಘಟಕಕ್ಕೆ ಮೀಸಲಿರುವ ಸ್ಥಳದಲ್ಲಿ ವಿವಿ ಘಟಕ ಕಟ್ಟಡವನ್ನು ಆರಂಭಿಸುವ ಕುರಿತು ಪೂರ್ವಭಾವಿ ಸಭೆ ನೆಲ್ಯಾಡಿಯ ಸಂತ ಜಾರ್ಜ್‌ ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ಶನಿವಾರ ನಡೆಯಿತು.

ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವ ಪ್ರೊ| ಎ.ಎಂ. ಖಾನ್‌ ಅಧ್ಯಕ್ಷತೆ ವಹಿಸಿ ಮಾತನಾಡಿ, ಮೀಸಲಿ ರಿಸಿದ ಸ್ಥಳದಲ್ಲಿ ಮುಂದಿನ ಶೈಕ್ಷಣಿಕ ವರ್ಷಾರಂಭದಲ್ಲಿ ಕಟ್ಟಡವನ್ನು ರಚಿ ಸುವ ಕುರಿತು ಸ್ಥಳೀಯರು ಮತ್ತು ಜನಪ್ರತಿನಿಧಿಗಳ ಸಭೆ ಕರೆಯಲಾಗಿದೆ. ಶಾಶ್ವತ ಕಟ್ಟಡದ ಪಂಚಾಂಗವನ್ನು ನಿರ್ಮಿಸಿ, ಮೇಲ್ಗಡೆಗೆ ತಾತ್ಕಾಲಿಕ ಶೆಡ್‌ಗಳ ಮಾದರಿಯಲ್ಲಿ ಆರು ಕೊಠಡಿಗಳ ಕಟ್ಟಡವನ್ನು ರಚಿಸುವುದಾದಲ್ಲಿ ಕನಿಷ್ಠ 25 ಲಕ್ಷ ರೂ. ಬೇಕಾಗಬಹುದು. ವಿಶ್ವವಿದ್ಯಾನಿಲಯ 10 ಲಕ್ಷ ರೂ.ಗಳನ್ನು ಬಿಡುಗಡೆ ಮಾಡಲಿದೆ. ಉಳಿದ ಹಣ ವನ್ನು ದಾನಿಗಳ ಮೂಲಕ ಕ್ರೋಡೀಕರಿ ಸಲು ಸ್ಥಳೀಯರೂ ಕೈಜೋಡಿಸಬೇಕು ಎಂದರು. ಸೋಮವಾರದಿಂದಲೇ ಕಾಮಗಾರಿ ಆರಂಭಿಸಲು ಸಭೆಯಲ್ಲಿ ಸಲಹೆ ಕೇಳಿ ಬಂತು.

ನೆಲ್ಯಾಡಿಯ ವಿಶ್ವವಿದ್ಯಾನಿಲಯ ಘಟಕ ಅನುಷ್ಠಾನ ಸಮಿತಿಯ ಕಾರ್ಯಾಧ್ಯಕ್ಷೆ, ತಾ.ಪಂ. ಸದಸ್ಯೆ ಉಷಾ ಅಂಚನ್‌ ಮಾತನಾಡಿ, ವಿ.ವಿ. ಘಟಕದ ಕಟ್ಟಡದ ಕಾರ್ಯಾರಂಭಕ್ಕೆ ಸ್ಥಳೀಯರು ಉತ್ಸುಕತೆ ತೋರಿದ ಸಮಯದಲ್ಲೇ ವಿವಿ ಅಧಿಕಾರಿಗಳೂ ಸ್ಪಂದಿಸಿರುವುದು ಸಂತಸದ ವಿಚಾರ. ಸ್ಥಳೀಯ ಜನಪ್ರತಿನಿಧಿಗಳು, ಎರಡೂ ಕ್ಷೇತ್ರಗಳ ಶಾಸಕರು ವಿವಿ ಘಟಕದ ಕಟ್ಟಡ ಆರಂಭಕ್ಕೆ ಕೈಜೋಡಿಸಬೇಕು ಎಂದು ವಿನಂತಿಸಿದರು.

ವೇದಿಕೆಯಲ್ಲಿ ಮಂಗಳೂರು ವಿವಿ ಕುಲಪತಿಗಳಾದ ಪ್ರೊ| ಈಶ್ವರ ಪಿ., ಕುಲಸಚಿವ (ಆಡಳಿತ) ಪ್ರೊ| ಎ.ಎಂ. ಖಾನ್‌, ಪರೀಕ್ಷಾಂಗ ಕುಲಸಚಿವ ಪ್ರೊ| ರವೀಂದ್ರಾಚಾರ್‌, ವಿ.ವಿ. ಹಣಕಾಸು ಅಧಿಕಾರಿ ಪ್ರೊ| ದಯಾನಂದ ನಾಯ್ಕ, ವಿಶೇಷಾಧಿಕಾರಿ ಪ್ರೊ| ನಾಗಪ್ಪ ಗೌಡ, ಕಾರ್ಯಕಾರಿ ಅಭಿಯಂತರ ಲವ ಡೊಂಬರ್‌, ನೆಲ್ಯಾಡಿ ವಿ.ವಿ. ಘಟಕದ ಕಾರ್ಯಾಧ್ಯಕ್ಷೆ ಉಷಾ ಅಂಚನ್‌, ಕಡಬ ಜಿ.ಪಂ. ಸದಸ್ಯ ಪಿ.ಪಿ. ವರ್ಗೀಸ್‌, ನೆಲ್ಯಾಡಿ ಜಿ.ಪಂ. ಸದಸ್ಯ ಸರ್ವೋತ್ತಮ ಗೌಡ, ನೆಲ್ಯಾಡಿ ಗ್ರಾ.ಪಂ. ಅಧ್ಯಕ್ಷ ಗಂಗಾಧರ ಶೆಟ್ಟಿ ಹೊಸಮನೆ, ಕೌಕ್ರಾಡಿ ಗ್ರಾ.ಪಂ. ಅಧ್ಯಕ್ಷ ಎಂ.ಕೆ. ಇಬ್ರಾಹಿಂ, ಕೆ.ಪಿ. ತೋಮಸ್‌, ರವೀಂದ್ರ ಟಿ., ಎಂ.ಕೆ. ಎಲಿಯಾಸ್‌, ಮಹಮ್ಮದ್‌ ಹನೀಫ್, ತಾ.ಪಂ. ಸದಸ್ಯೆ ಆಶಾ ಲಕ್ಷ್ಮಣ್‌, ಭಾಸ್ಕರ ಗೌಡ ಇಚಿಲಂಪಾಡಿ, ವಿಶ್ವನಾಥ ಶೆಟ್ಟಿ ಕುಂಡಡ್ಕ, ಅಬ್ರಹಾಂ ಮೊದಲಾದವರು ಉಪಸ್ಥಿತರಿದ್ದರು. ಪ್ರಾಂಶುಪಾಲ ಡಾ| ಯತೀಶ್‌ ಕುಮಾರ್‌ ಸ್ವಾಗತಿಸಿದರು. ಗಂಗಾಧರ ಶೆಟ್ಟಿ ಹೊಸಮನೆ ವಂದಿಸಿದರು.

ಟಾಪ್ ನ್ಯೂಸ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.