ಮೀನು ಸಾಗಾಟದ 6 ವಾಹನ ಮುಟ್ಟುಗೋಲು

ಮೀನು ವಾಹನಗಳ ವಿರುದ್ಧ ಪೊಲೀಸ್‌ ಕ್ರಮ

Team Udayavani, May 10, 2019, 6:00 AM IST

0905MLR202

ಮಹಾನಗರ: ಮೀನು ಸಾಗಿಸುವ ವಾಹನಗಳಿಂದ ರಸ್ತೆಗೆ ಗಲೀಜು ನೀರು ಬಿದ್ದು ಆಗುತ್ತಿರುವ ಪರಿಸರ ಮಾಲಿನ್ಯ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಕೇರಳ ಮಾದರಿ ಯನ್ನು ಅನುಸರಿಸಲು ನಗರದ ಪೊಲೀಸರು ಈಗಾಗಲೇ ನಿರ್ಧರಿಸಿದ್ದು, ಅದರನ್ವಯ ನಿಯಮ ಉಲ್ಲಂಘಿಸುವ ವಾಹನಗಳ ವಿರುದ್ಧ ಕ್ರಮ ಜರಗಿಸಲು ಆರಂಭಿಸಿದ್ದಾರೆ.
ಗುರುವಾರ ನಿಯಮ ಉಲ್ಲಂಘಿಸಿ ಗಲೀಜು ನೀರನ್ನು ರಸ್ತೆಗೆ ಚೆಲ್ಲುತ್ತಾ ಕಾರ್ಯಾಚರಿಸಿದ 6 ವಾಹನಗಳನ್ನು ಪೊಲೀಸರು ಮುಟ್ಟುಗೋಲು ಹಾಕಿದ್ದಾರೆ.

ಕೇರಳದಲ್ಲಿ ಕಟ್ಟು ನಿಟ್ಟಾಗಿ ಜಾರಿ
ಕೇರಳದಲ್ಲಿ ಮೀನು ಸಾಗಿಸುವ ಲಾರಿಗಳಿಂದ ಉಂಟಾಗುವ ಪರಿಸರ ಮಾಲಿನ್ಯವನ್ನು ನಿಯಂತ್ರಿಸಲು ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ (ಎನ್‌ಜಿಟಿ)ದ ದಕ್ಷಿಣ ವಲಯ ಪೀಠವು 2015ರಲ್ಲಿಯೇ ಆದೇಶವೊಂದನ್ನು ಕೇರಳ ಸರಕಾರಕ್ಕೆ ನೀಡಿದ್ದು, ಕೇರಳ ಸರಕಾರ ಈ ಆದೇಶವನ್ನು ಕಟ್ಟು ನಿಟ್ಟಾಗಿ ಜಾರಿಗೊಳಿಸಿದ್ದರಿಂದ ಅಲ್ಲಿ ಮೀನು ಸಾಗಾಟ ವಾಹನಗಳಿಂದ ಪರಿಸರ ಮಾಲಿನ್ಯಕ್ಕೆ ಕಡಿವಾಣ ಬಿದ್ದಿದೆ. ಹಾಗಾಗಿ ಅದೇ ಆದೇಶವನ್ನು ಮಂಗಳೂ ರಿನಲ್ಲಿಯೂ ಜಾರಿಗೊಳಿಸಲು ತೀರ್ಮಾ ನಿಸಿ ಪೊಲೀಸ್‌ ಕಮಿಷನರ್‌ ಸಂದೀಪ್‌ ಪಾಟೀಲ್‌ ಮೇ 6ರಂದು ಆದೇಶ ಹೊರಡಿಸಿದ್ದರು.

ಕಾರ್ಯಾಚರಣೆ ಆರಂಭ
ಎನ್‌ಜಿಟಿ ಆದೇಶವನ್ನು ಕಟ್ಟು ನಿಟ್ಟಾಗಿ ಅನುಷ್ಠಾನ ಮಾಡುವುದನ್ನು ಖಾತರಿಪಡಿಸುವಂತೆ ಪೊಲೀಸ್‌ ಆಯುಕ್ತರು ನಗರ ಪೊಲೀಸರಿಗೆ ನೋಟೀಸ್‌ ಜಾರಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ಇದೀಗ ಕಾರ್ಯಾಚರಣೆಯನ್ನು ಆರಂಭಿಸಿದ್ದಾರೆ.

ಫೋನ್‌ ಇನ್‌ನಲ್ಲಿ ದೂರು
ಮೀನು ಸಾಗಾಟ ವಾಹನಗಳಿಂದ ಉಂಟಾಗುತ್ತಿರುವ ಪರಿಸರ ಮಾಲಿನ್ಯದ ಬಗ್ಗೆ ಮಂಗಳೂರು ಪೊಲೀಸ್‌ ಕಮಿಷನರ್‌ ಪ್ರತಿ ಶುಕ್ರವಾರ ನಡೆಸುತ್ತಿರುವ ಫೋನ್‌ ಇನ್‌ ಕಾರ್ಯಕ್ರಮಗಳಲ್ಲಿ ಸಾರ್ವ ಜನಿಕರಿಂದ ನಿರಂತರವಾಗಿ ದೂರುಗಳು ಬರುತ್ತಿದ್ದು, ಈ ಹಿನ್ನೆಲೆಯಲ್ಲಿ ಎ. 29ರಂದು ಪೊಲೀಸ್‌ ಕಮಿಷನರ್‌ ಸಭೆಯೊಂದನ್ನು ನಡೆಸಿದ್ದರು. ಮೀನು ಸಾಗಾಟ ಲಾರಿಗಳ ಮಾಲಕರು ಮತ್ತು ಚಾಲಕರು, ಮೀನುಗಾರಿಕಾ ಇಲಾಖೆಯ ಅಧಿಕಾರಿಗಳು, ಪೊಲೀಸ್‌ ಅಧಿಕಾರಿಗಳು ಭಾಗವಹಿಸಿದ್ದ ಸಭೆಯಲ್ಲಿ ಸಮಸ್ಯೆಯ ಬಗ್ಗೆ ವ್ಯಾಪಕವಾಗಿ ಚರ್ಚಿಸಲಾಗಿತ್ತು. ಈ ಸಂದರ್ಭ ಕೇರಳ ಸರಕಾರ ಜಾರಿಗೆ ತಂದಿರುವ ಕಾನೂನಿನ ಬಗ್ಗೆ ಪ್ರಸ್ತಾವವಾಗಿತ್ತು. ಹಾಗಾಗಿ ಬಳಿಕ ಪೊಲೀಸರು ಎನ್‌ಜಿಟಿ ಕೇರಳ ಸರಕಾರಕ್ಕೆ ನೀಡಿದ ಆದೇಶದ ಬಗ್ಗೆ ಅಧ್ಯಯನ ನಡೆಸಿ ಅದನ್ನು ಮಂಗಳೂರಿಗೂ ಅನ್ವಯಿಸಲು ನಿರ್ಣಯ ಕೈಗೊಂಡಿದ್ದರು. ಅದರಂತೆ ಮೇ 6ರಿಂದ ಅನ್ವಯವಾಗುವಂತೆ ಎನ್‌ಜಿಟಿ ಆದೇಶವನ್ನು ಕಟ್ಟು ನಿಟ್ಟಾಗಿ ಜಾರಿಗೊಳ್ಳುವುದನ್ನು ಖಾತರಿ ಪಡಿಸು ವಂತೆ ಪೊಲೀಸ್‌ ಆಯುಕ್ತರು ಪೊಲೀ ಸರಿಗೆ ನೋಟಿಸ್‌ ಜಾರಿ ಮಾಡಿದ್ದರು.
ಆ ಪ್ರಕಾರ ಪೊಲೀಸರು ಕ್ರಮ ಜರ ಗಿಸಲು ಗುರುವಾರ ಆರಂಭಿಸಿದ್ದು, ನಿರಂತರವಾಗಿ ಮುಂದುರಿಸಲು ತೀರ್ಮಾನಿಸಿದ್ದಾರೆ.

ಎನ್‌ಜಿಟಿ ಆದೇಶ ಏನು ಹೇಳುತ್ತದೆ?
ಎನ್‌ಜಿಟಿ ದಕ್ಷಿಣ ವಲಯ ನ್ಯಾಯಾಲಯವು ಕೇರಳದಲ್ಲಿನ ಮೀನಿನ ಲಾರಿಗಳ ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಸಂಬಂಧಿಸಿ 2015 ಜುಲೈ 2ರಂದು ನೀಡಿದ ಆದೇಶದ ವಿವರ:
– ಮೀನು ಸಾಗಿಸುವ ಎಲ್ಲ ವಾಹನಗಳಿಂದ ತ್ಯಾಜ್ಯ ನೀರು ಸೋರಿಕೆ ಆಗದಂತೆ ಸೂಕ್ತ ವ್ಯವಸ್ಥೆ (ಲೀಕ್‌ ಪ್ರೂಫ್‌) ಮಾಡ ಬೇಕು.
– ಮಂಜುಗಡ್ಡೆ ಕರಗಿ ರಸ್ತೆಗೆ ಸೋರಿಕೆ ಆಗುವುದನ್ನು ತಡೆಯಲು ಮೀನುಗಳನ್ನು ಕ್ರೇಟ್‌ಗಳಲ್ಲಿ ತುಂಬಿಸಿ ಸಾಗಿಸ ಬೇಕು.
– ಮಂಜುಗಡ್ಡೆ ಕರಗಿ ಕ್ರೇಟ್‌ನಲ್ಲಿ ತುಂಬಿ ಹೊರಗೆ ಬರುವ ತ್ಯಾಜ್ಯ ನೀರು ರಸ್ತೆಗೆ ಬೀಳದಂತೆ ಅದನ್ನು ಸಂಗ್ರಹಿಸಲು ಸೂಕ್ತ ಟ್ಯಾಂಕನ್ನು (ಒಂದು ಟನ್‌ ಸಾಮರ್ಥ್ಯದ ಲಾರಿಗೆ 50 ಲೀ. ಸಾಮರ್ಥ್ಯದ ಟ್ಯಾಂಕ್‌) ವಾಹನಕ್ಕೆ ಕಡ್ಡಾಯವಾಗಿ ಜೋಡಿಸಿರಬೇಕು.

ಟಾಪ್ ನ್ಯೂಸ್

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.