ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 91 ಮಂದಿಗೆ ಕೋವಿಡ್ 19 ಸೋಂಕು ದೃಢ; 3 ಸಾವು

Team Udayavani, Jul 15, 2020, 6:10 AM IST

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 91 ಮಂದಿಗೆ ಕೋವಿಡ್ 19 ಸೋಂಕು ದೃಢ; 3 ಸಾವು

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರ 91 ಮಂದಿಗೆ ಕೋವಿಡ್ 19 ಸೋಂಕು ದೃಢಪಟ್ಟಿದ್ದು 3 ಮಂದಿ ಮೃತಪಟ್ಟಿದ್ದಾರೆ.

ಇದೇ ಸಂದರ್ಭದಲ್ಲಿ ಒಟ್ಟು 47 ಮಂದಿ ಸೋಂಕಿತರು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.

ಅಸ್ತಮಾ, ಮಧುಮೇಹ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದ ಹಾಸನ ಜಿಲ್ಲೆಯ ಸಕಲೇಶಪುರದ 65 ವಯಸ್ಸಿನ ಮಹಿಳೆ, ತೀವ್ರ ಉಸಿರಾಟ ತೊಂದರೆಯಿಂದ ಬಳಲುತ್ತಿದ್ದ ಉಡುಪಿ ಜಿಲ್ಲೆಯ ಕುಂದಾಪುರದ 55 ವರ್ಷದ ಪುರುಷ ಹಾಗೂ ರಕ್ತದೊತ್ತಡದಿಂದ ಬಳಲುತ್ತಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ 70ರ ವೃದ್ಧೆ ಮೃತಪಟ್ಟವರು.

ಸೋಮವಾರ ವರದಿಯಾಗಿರುವ ಒಟ್ಟು 91 ಪ್ರಕರಣಗಳ ಪೈಕಿ 20 ಪ್ರಾಥಮಿಕ ಸಂಪರ್ಕ, 29 ಮಂದಿ ಇನ್‌ಫ್ಲೂಯೆನ್ಝಾ ಲೈಕ್‌ ಇಲ್‌ನೆಸ್‌ (ಐಎಲ್‌ಐ), ಐದು ಮಂದಿ ತೀವ್ರ ಉಸಿರಾಟ ತೊಂದರೆಯಿಂದ ಬಳಲುತ್ತಿದ್ದ (ಸಾರಿ) ಪ್ರಕರಣಗಳಾಗಿವೆ. ಸಂಪರ್ಕವೇ ಪತ್ತೆಯಾಗದ 35 ಮಂದಿಗೆ ಕೊರೊನಾ ಪಾಸಿಟಿವ್‌ ವರದಿಯಾಗಿದೆ.

ವಿದೇಶದಿಂದ ಬಂದ ಒಬ್ಬರಿಗೆ ಕೋವಿಡ್ 19 ಸೋಂಕು ದೃಢಪಟ್ಟಿದ್ದು, ಶಸ್ತ್ರಚಿಕಿತ್ಸೆ ನಡೆಸುವ ಮೊದಲು ನಡೆಸಿದ ಪರೀಕ್ಷೆಯಲ್ಲಿ ಒಬ್ಬರಿಗೆ ಕೋವಿಡ್ 19 ಸೋಂಕು ಇರುವುದು ದೃಢಪಟ್ಟಿದೆ. 35 ಮಂದಿ ಸೋಂಕಿತರ ಸಂಪರ್ಕವನ್ನು ಪತ್ತೆ ಹಚ್ಚಲಾಗುತ್ತಿದೆ.

ದ.ಕ. ಜಿಲ್ಲೆಯಲ್ಲಿ ಇಲ್ಲಿವರೆಗೆ 2452 ಮಂದಿಗೆ ಕೋವಿಡ್ 19 ಸೋಂಕು ಧೃಡಪಟ್ಟಿದ್ದು 985 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. 1414 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಪುತ್ತೂರು: 2 ಪಾಸಿಟಿವ್‌
ತಾಲೂಕಿನಲ್ಲಿ ಮಂಗಳವಾರ 2 ಕೋವಿಡ್ 19 ಸೋಂಕು ಪ್ರಕರಣಗಳು ದೃಢಪಟ್ಟಿವೆ. ಉಪ್ಪಿನಂಗಡಿ ನಟ್ಟಿಬೈಲು ನಿವಾಸಿ 70ರ ವೃದ್ಧ ಮತ್ತು ಪುತ್ತೂರು ನಗರಸಭಾ ವ್ಯಾಪ್ತಿಯ ಮೊಟ್ಟೆತ್ತಡ್ಕ ನಿವಾಸಿ 62 ವರ್ಷ ವಯಸ್ಸಿನ ವ್ಯಕ್ತಿ ಬಾಧಿತರು. ಇಬ್ಬರು ಕೂಡ ಜ್ವರದ ಹಿನ್ನೆಲೆಯಲ್ಲಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಕೋವಿಡ್‌ ಪರೀಕ್ಷೆಯಲ್ಲಿ ಸೋಂಕು ದೃಢವಾಗಿದೆ.

ಬಂಟ್ವಾಳ: 6 ಮಂದಿಗೆ ಪಾಸಿಟಿವ್‌
ಬಂಟ್ವಾಳ ತಾಲೂಕಿನಲ್ಲಿ ಮಂಗಳವಾರ 6 ಮಂದಿಗೆ ಕೋವಿಡ್ 19 ಸೋಂಕು ದೃಢ ಪಟ್ಟಿದ್ದು, ಬಿ.ಮೂಡದ 66 ವರ್ಷದ ಪುರುಷ, ತೆಂಕಕಜೆಕಾರಿನ 32 ವರ್ಷದ ಮಹಿಳೆ, ಬಂಟ್ವಾಳ ಕಸ್ಬಾದ 62 ವರ್ಷದ ಮಹಿಳೆ, ಸಿದ್ಧಕಟ್ಟೆಯ 29 ವರ್ಷದ ಯುವಕ, ನರಿಕೊಂಬಿನ 54 ವರ್ಷದ ಪುರುಷ ಹಾಗೂ ಕೊಡ್ಮಾಣ್‌ನ 70 ವರ್ಷದ ಪುರುಷನಲ್ಲಿ ಸೋಂಕು ದೃಢಪಟ್ಟಿದೆ.

ಉಳ್ಳಾಲ: 14 ಮಂದಿಗೆ ಸೋಂಕು
ಉಳ್ಳಾಲ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಎಂಟು ವರ್ಷದ ಬಾಲಕ ಸೇರಿ ಸುಮಾರು 14 ಜನರಿಗೆ ಸೋಂಕು ತಗುಲಿದ್ದು, ಇವರಲ್ಲಿ 10 ಮಂದಿ ಉಳ್ಳಾಲ ನಗರಸಭಾ ವ್ಯಾಪ್ತಿಯವರಾಗಿದ್ದು, ಉಳಿದವರು ಮುನ್ನೂರು, ಕುಂಪಲ, ಕಿನ್ಯ ನಿವಾಸಿಗಳಾಗಿದ್ದಾರೆ.

ಉಳ್ಳಾಲ ನಗರಸಭಾ ವ್ಯಾಪ್ತಿಯ ಉಳ್ಳಾಲ ಅರೆಕೆರೆಯ 20, 16, 53, 39, 18 ವರ್ಷದ ವ್ಯಕ್ತಿ ಮತ್ತು 23 ಮತ್ತು 35 ವರ್ಷದ ಮಹಿಳೆಯರಿಗೆ ಸೋಂಕು ತಗುಲಿದ್ದರೆ ಉಳ್ಳಾಲ ಕೋಟೆಪುರದ 14ರ ಬಾಲಕ, ಮಾಸ್ತಿಕಟ್ಟೆ ಅಝಾದ್‌ ನಗರದ 8ರ ಬಾಲಕ, 65ರ ಮಹಿಳೆ. ಮುನ್ನೂರು ಗ್ರಾಮದ 24ರ ಯುವತಿ ಪಂಡಿತ್‌ಹೌಸ್‌ನ 46ರ ಮಹಿಳೆ ಮತ್ತು ಕಿನ್ಯ ಗ್ರಾಮದ 22ರ ಯುವತಿ ಮತ್ತು ಸೋಮೇಶ್ವರ ಕುಂಪಲದ 20ರ ಯುವಕನಿಗೆ ಸೊಂಕು ತಗುಲಿದೆ.

ಕಾಪು: ಕುಟುಂಬದ 7 ಮಂದಿಗೆ ಪಾಸಿಟಿವ್‌
ಕಾಪು ಪುರಸಭಾ ವ್ಯಾಪ್ತಿಯಲ್ಲಿ ಮಂಗಳವಾರ ಒಂದೇ ಕುಟುಂಬದ ಏಳು ಮಂದಿ, ಪೊಲೀಸ್‌ ಕಾನ್‌ಸ್ಟೆಬಲ್‌ ಸಹಿತ 9 ಮಂದಿಗೆ ಕೋವಿಡ್ 19 ಪಾಸಿಟಿವ್‌ ಧೃಢಪಟ್ಟಿದೆ. ಕಾಪು ಠಾಣೆಗೆ ಸಮೀಪದ ಹೊಟೇಲ್‌ವೊಂದರಲ್ಲಿ ಕ್ವಾರಂಟೈನ್‌ನಲ್ಲಿದ್ದ ಕಾನ್‌ಸ್ಟೆಬಲ್‌ ಇದೀಗ ಪಾಸಿಟಿವ್‌ ಬಂದ ಹಿನ್ನೆಲೆಯಲ್ಲಿ ಕೋವಿಡ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನಂಜೆ ನಿವಾಸಿ, ಮಣಿಪಾಲ ಖಾಸಗಿ ಆಸ್ಪತ್ರೆಯ ಸಿಬಂದಿಯಲ್ಲೂ ಪಾಸಿಟಿವ್‌ ಕಂಡು ಬಂದಿದೆ.

ವಧುವಿನ ಮನೆಯವರಿಗೂ ಪಾಸಿಟಿವ್‌
ಮಲ್ಲಾರು ಕೊಂಬಗುಡ್ಡೆಯ ಒಂದೇ ಮನೆಯ ಏಳು ಮಂದಿಯಲ್ಲಿ ಪಾಸಿಟಿವ್‌ ಕಂಡು ಬಂದಿದೆ. ಹೊಸನಗರಕ್ಕೆ ಮದುವೆ ಮಾಡಿಕೊಡಲಾಗಿದ್ದ ವಧುವಿಗೆ ಜು. 6ರಂದು ದೃಢಪಟ್ಟಿದ್ದು, ಆ ಬಳಿಕ ಆಕೆಯ ಮೆಹಂದಿ ಕಾರ್ಯಕ್ರಮ ನಡೆದ ಮನೆಯವರ ಗಂಟಲ ದ್ರವ ಪರೀಕ್ಷೆ ನಡೆಸಲಾಗಿದ್ದು ಎಲ್ಲರ ವರದಿ ಪಾಸಿಟಿವ್‌ ಬಂದಿರುವುದು ಆತಂಕಕ್ಕೆ ಕಾರಣವಾಗಿದೆ.

ಟಾಪ್ ನ್ಯೂಸ್

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

Dakshina Kannada ಸದ್ಯಕ್ಕೆ ನೀರಿನ ಸಮಸ್ಯೆ ಇಲ್ಲ: ಜಿಲ್ಲಾಧಿಕಾರಿ

Dakshina Kannada ಸದ್ಯಕ್ಕೆ ನೀರಿನ ಸಮಸ್ಯೆ ಇಲ್ಲ: ಜಿಲ್ಲಾಧಿಕಾರಿ

Moodabidri: ಬೃಹತ್ ಜೈನ ಆರಾಧನಾ ಕೋಶ ಸಂಪಾದಕ ಎಂ. ಧರ್ಮರಾಜ ಇಂದ್ರ ನಿಧನ

Moodabidri: ಬೃಹತ್ ಜೈನ ಆರಾಧನಾ ಕೋಶದ ಸಂಪಾದಕ ಎಂ. ಧರ್ಮರಾಜ ಇಂದ್ರ ನಿಧನ

Mangaluru: CCB ಪೊಲೀಸರ ಕಾರ್ಯಾಚರಣೆ… ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ

Mangaluru: CCB ಪೊಲೀಸರ ಕಾರ್ಯಾಚರಣೆ… ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ

ಬಸ್‌ಗಳಿಗೆ ಬಾಗಿಲು ಅಳವಡಿಕೆ ; ಡಿಸಿ ಗಡುವು ಸಮೀಪಿಸಿದರೂ ಬಗೆಹರಿಯದ ಗೊಂದಲ!

ಬಸ್‌ಗಳಿಗೆ ಬಾಗಿಲು ಅಳವಡಿಕೆ ; ಡಿಸಿ ಗಡುವು ಸಮೀಪಿಸಿದರೂ ಬಗೆಹರಿಯದ ಗೊಂದಲ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.