ಕರಾವಳಿಯ 44 ಗ್ರಾ.ಪಂ.ಗಳಲ್ಲಿ ಆಧಾರ್‌ ತಿದ್ದುಪಡಿ


Team Udayavani, Jul 9, 2021, 7:00 AM IST

ಕರಾವಳಿಯ 44 ಗ್ರಾ.ಪಂ.ಗಳಲ್ಲಿ ಆಧಾರ್‌ ತಿದ್ದುಪಡಿ

ಮಂಗಳೂರು: ಕಳೆದೊಂದು ವರ್ಷದಿಂದ ಗ್ರಾಮ ಪಂಚಾಯತ್‌ಗಳಲ್ಲಿ ಸ್ಥಗಿತವಾಗಿದ್ದ ಆಧಾರ್‌ ತಿದ್ದುಪಡಿ ಯೋಜನೆಯನ್ನು ಮತ್ತೂಮ್ಮೆ ಹಂತ ಹಂತವಾಗಿ ಎಲ್ಲಾ ಪಂಚಾಯತ್‌ನಲ್ಲಿ ಅನುಷ್ಠಾನಗೊಳಿಸಲು ಸರಕಾರ ನಿರ್ಧರಿಸಿದೆ.

ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ ಹೊರತುಪಡಿಸಿ ರಾಜ್ಯದ ಎಲ್ಲ ಜಿ. ಪಂ.ನ 22 ಗ್ರಾ. ಪಂ.ಗಳಲ್ಲಿ ಆಧಾರ್‌ ನೋಂದಣಿ ಕೇಂದ್ರ ಸ್ಥಾಪಿಸಲು ಸರಕಾರ ತೀರ್ಮಾನಿಸಿದೆ. ಈ ಹಿನ್ನೆಲೆಯಲ್ಲಿ ದ.ಕ. ಹಾಗೂ ಉಡುಪಿ ಜಿಲ್ಲೆಯ ಒಟ್ಟು 44 ಗ್ರಾ. ಪಂ.ಗಳಲ್ಲಿ ನೋಂದಣಿ ಕೇಂದ್ರ ಆರಂಭವಾಗಲಿದೆ. ಕರಾವಳಿಯ ಯಾವೆಲ್ಲ ಪಂಚಾಯತ್‌ ಎಂಬುದು ಶೀಘ್ರ ಅಂತಿಮಗೊಳ್ಳಲಿದೆ.

ಆಧಾರ್‌ ನೋಂದಣಿಗೆ ಸರಕಾರದ ಇ-ಆಡಳಿತ ಇಲಾಖೆ 2,000 ಟ್ಯಾಬ್ಲೆಟ್‌ ಹಾಗೂ ಸಿಂಗಲ್‌ ಫಿಂಗರ್‌ ಪ್ರಿಂಟ್‌ ದೃಢೀಕರಣ ಉಪಕರಣವನ್ನು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ರಾಜ್‌ ಇಲಾಖೆಗೆ ನೀಡಲಿದೆ. ಇಲಾಖೆಯು 28 ಜಿ. ಪಂ.ನ ತಲಾ 22 ಗ್ರಾ.ಪಂ.ಗೆ ಇದನ್ನು ನೀಡಲಿದೆ. ಜು. 19ರಂದು 22 ಗ್ರಾ.ಪಂ.ಗಳ ಪಿಡಿಒ ಹಾಗೂ ಗ್ರಾ.ಪಂ. ಡೇಟಾ ಎಂಟ್ರಿ ಆಪರೇಟರ್‌ಗಳಿಗೆ ಆಧಾರ್‌ ಸಮಾಲೋಚಕರು ತರಬೇತಿ ನೀಡಲಿದ್ದಾರೆ.

ವರ್ಷದಿಂದ ಸ್ಥಗಿತವಾಗಿದೆ ತಿದ್ದುಪಡಿ!:

ಆಧಾರ್‌ ಕಾರ್ಡ್‌ ತಿದ್ದುಪಡಿಯನ್ನು ಜನಸ್ನೇಹಿಯಾಗಿ ಮಾಡುವ ಉದ್ದೇಶದಿಂದ ರಾಜ್ಯದ ಎಲ್ಲಾ ಗ್ರಾ.ಪಂ.ಗಳಲ್ಲಿ ಆಧಾರ್‌ ತಿದ್ದುಪಡಿ ಕೇಂದ್ರಗಳನ್ನು ರಚಿಸಲಾಗಿತ್ತು. ಕೆಲವು ತಿಂಗಳು ಯಶಸ್ವಿಯಾಗಿದ್ದರೂ ಸರ್ವರ್‌/ ದಾಖಲೆ ಸಮಸ್ಯೆಗಳಿಂದಾಗಿ ತಿದ್ದುಪಡಿ ಸ್ಥಗಿತಗೊಂಡಿತ್ತು. ಹೀಗಾಗಿ ಕಳೆದ ಒಂದು ವರ್ಷದಿಂದ ಯಾವ ಪಂಚಾಯತ್‌ನಲ್ಲೂ ತಿದ್ದುಪಡಿಗೆ ಅವ ಕಾಶವಿರಲಿಲ್ಲ.

ಕೊರೊನಾ ಲಸಿಕೆ; ಆಧಾರ್‌ ತಿದ್ದುಪಡಿ! : ಸಾರ್ವಜನಿಕರು ಕೋವಿಡ್‌ 19 ಲಸಿಕೆಯನ್ನು ಆಧಾರ್‌ ದೃಢೀಕರಣದೊಂದಿಗೆ ಪಡೆಯಬೇಕಾಗಿರುವ ಹಿನ್ನೆಲೆಯಲ್ಲಿ ಗ್ರಾಮೀಣ ಪ್ರದೇಶದಲ್ಲಿರುವ ನಿವಾಸಿಗಳು ಮೊಬೈಲ್‌ ಸಂಖ್ಯೆಯನ್ನು ಆಧಾರ್‌ಗೆ ಅಪ್‌ಡೇಟ್‌ ಮಾಡಲು ಹೆಚ್ಚು ಬೇಡಿಕೆ ಇಡುತ್ತಿದ್ದಾರೆ. ಈ ನಿಟ್ಟಿನಲ್ಲಿ ಆಧಾರ್‌ ತಿದ್ದುಪಡಿಗೆ ಉದ್ದೇಶಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್‌ ಮೂಲಗಳು ತಿಳಿಸಿವೆ.

ಯಾವುದೆಲ್ಲ ತಿದ್ದುಪಡಿ?:

ಮೊಬೈಲ್‌ ನಂಬರ್‌ ಅಪ್‌ಡೇಟ್‌, ಇ ಮೇಲ್‌ ಐಡಿ ದಾಖಲಾತಿಗೆ ಅವಕಾಶವಿದೆ. 5 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳ ಆಧಾರ್‌ ನೋಂದಣಿ ಸಹ ಮಾಡಬಹುದು. ಇದರ ಜತೆೆ ಹೆಸರು, ವಿಳಾಸ, ಜನ್ಮದಿನಾಂಕ ಬದಲಾವಣೆ ಸೇರಿದಂತೆ ಆಧಾರ್‌ನಲ್ಲಿ ಇತರ ತಿದ್ದುಪಡಿ ಮಾಡಲು ಕೂಡ ಅವಕಾಶ ದೊರೆಯುವ ಸಾಧ್ಯತೆಯಿದೆ.

“ಗ್ರಾ.ಪಂ. ಆಯ್ಕೆಗೆ ಕ್ರಮ’:

ಜಿಲ್ಲೆಯ 22 ಗ್ರಾ.ಪಂ.ಗಳಲ್ಲಿ ಆಧಾರ್‌ ನೋಂದಣಿ ಕೇಂದ್ರ ಸ್ಥಾಪನೆಗೆ ಆವಶ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು. ಗ್ರಾ.ಪಂ. ಆಯ್ಕೆ ಕೆಲವೇ ದಿನಗಳಲ್ಲಿ ನಡೆಸಿ, ಅಲ್ಲಿನ ಸಿಬಂದಿಗೆ ತರಬೇತಿ ನೀಡಿ ತಿಂಗಳಾಂತ್ಯಕ್ಕೆ ಕೇಂದ್ರ ಕಾರ್ಯನಿರ್ವಹಿಸುವಂತೆ ಮಾಡಲಾಗುವುದು. ಆ ಬಳಿಕ ಎಲ್ಲ ಗ್ರಾ.ಪಂ.ಗಳಲ್ಲಿಯೂ ಕೇಂದ್ರ ಸ್ಥಾಪನೆಗೆ ಸರಕಾರ ಆದ್ಯತೆ ನೀಡಲಿದೆ.– ಡಾ|  ಕುಮಾರ್‌,  ಸಿಇಒ, ಜಿ. ಪಂ. -ದ.ಕ.

ಟಾಪ್ ನ್ಯೂಸ್

ಮಾಜಿ ಕೇಂದ್ರ ಸಚಿವ ಚಿದಂಬರಂ ಆಸ್ತಿ ಮೇಲೆ ಸಿಬಿಐ ದಾಳಿ; ಪುತ್ರನ ವಿರುದ್ಧ ಹೊಸ ಕೇಸ್

ಮಾಜಿ ಕೇಂದ್ರ ಸಚಿವ ಚಿದಂಬರಂ ಆಸ್ತಿ ಮೇಲೆ ಸಿಬಿಐ ದಾಳಿ; ಪುತ್ರನ ವಿರುದ್ಧ ಹೊಸ ಕೇಸ್

777 charlie

‘777 ಚಾರ್ಲಿ’…. ಮನಮುಟ್ಟುವ ಅನುಬಂಧ ಅನಾವರಣ

Mehbooba Mufti,

ಜಮ್ಮು ಕಾಶ್ಮೀರ ಹಿಂಸಾಚಾರಕ್ಕೆ ದಿ ಕಾಶ್ಮೀರ ಫೈಲ್ ಚಿತ್ರವೇ ಕಾರಣ: ಮೆಹಬೂಬಾ ಮುಫ್ತಿ

thumb 2

ಭಾರತ-ನೇಪಾಲ ಸ್ನೇಹ ಹಿಮಾಲಯದಷ್ಟು ಗಾಢ; ಬುದ್ಧನ ನಾಡಿನಲ್ಲಿ ಪ್ರಧಾನಿ ಮೋದಿ ಪ್ರತಿಪಾದನೆ

ರಾಜ್ಯ ವಿಪತ್ತು ಸ್ಪಂದನ ದಳಕ್ಕೆ ಮಾಜಿ ಸೈನಿಕರೇ ಗತಿ

ರಾಜ್ಯ ವಿಪತ್ತು ಸ್ಪಂದನ ದಳಕ್ಕೆ ಮಾಜಿ ಸೈನಿಕರೇ ಗತಿ

ಭೂಮಿ ಗುತ್ತಿಗೆಗೆ ಅನ್ನದಾತರ ಅಪಸ್ವರ; ಒತ್ತುವರಿ ಭೂಮಿ ಹಂಚಿಕೆಗೆ ಹರ್ಷ

ಭೂಮಿ ಗುತ್ತಿಗೆಗೆ ಅನ್ನದಾತರ ಅಪಸ್ವರ; ಒತ್ತುವರಿ ಭೂಮಿ ಹಂಚಿಕೆಗೆ ಹರ್ಷ

astrology

ಮಂಗಳವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಾಜ್ಯ ವಿಪತ್ತು ಸ್ಪಂದನ ದಳಕ್ಕೆ ಮಾಜಿ ಸೈನಿಕರೇ ಗತಿ

ರಾಜ್ಯ ವಿಪತ್ತು ಸ್ಪಂದನ ದಳಕ್ಕೆ ಮಾಜಿ ಸೈನಿಕರೇ ಗತಿ

ಮಳಲಿ ದರ್ಗಾದಲ್ಲಿ ದೇಗುಲ ಕುರುಹು : ಅಷ್ಟಮಂಗಲ ಪ್ರಶ್ನೆಗೆ ವಿಎಚ್‌ಪಿ ನಿರ್ಧಾರ

ಮಳಲಿ ದರ್ಗಾದಲ್ಲಿ ದೇಗುಲ ಕುರುಹು : ಅಷ್ಟಮಂಗಲ ಪ್ರಶ್ನೆಗೆ ವಿಎಚ್‌ಪಿ ನಿರ್ಧಾರ

ರಾಷ್ಟ್ರೀಯ ಡೆಂಗ್ಯೂ ದಿನ: ಕೀಟಜನ್ಯ ರೋಗ ಜಾಗೃತಿ

ರಾಷ್ಟ್ರೀಯ ಡೆಂಗ್ಯೂ ದಿನ: ಕೀಟಜನ್ಯ ರೋಗ ಜಾಗೃತಿ

ವಿಕಲಚೇತನರ ಸಮಸ್ಯೆ ಪರಿಹಾರ ಸಭೆ: ಜಿಲ್ಲಾಧಿಕಾರಿ ಸೂಚನೆ

ವಿಕಲಚೇತನರ ಸಮಸ್ಯೆ ಪರಿಹಾರ ಸಭೆ : ಜಿಲ್ಲಾಧಿಕಾರಿ ಸೂಚನೆ

ಶಾಲೆಯಂಗಳದಲ್ಲಿ ಮತ್ತೆ ಮಕ್ಕಳ ಸಂಭ್ರಮ; ಸಡಗರ

ಶಾಲೆಯಂಗಳದಲ್ಲಿ ಮತ್ತೆ ಮಕ್ಕಳ ಸಂಭ್ರಮ; ಸಡಗರ

MUST WATCH

udayavani youtube

ಜ್ಞಾನವಾಪಿ ಮಸೀದಿ ಸರ್ವೇ ಸಂಪೂರ್ಣ; ಬಾವಿಯಲ್ಲಿ ‘ಶಿವಲಿಂಗ’ಪತ್ತೆ

udayavani youtube

ದತ್ತ ಜಯಂತಿ ಸಮಯದಲ್ಲಿ ಹೋಮದ ಹೊಗೆ.. ಬೇರೆ ಸಮಯದಲ್ಲಿ ಮಾಂಸದ ಹೊಗೆ

udayavani youtube

ಶಾಲಾ ಪ್ರಾರಂಭೋತ್ಸವ ಹಿರಿಯಡ್ಕ ಸರಕಾರಿ ಪಬ್ಲಿಕ್ ಸ್ಕೂಲ್ ನಲ್ಲಿ ಮಕ್ಕಳಿಗೆ ಸಂಭ್ರಮದ ಸ್ವಾಗತ

udayavani youtube

ಶಂಕರನಾರಾಯಣ : ಶಾಲಾರಂಭದ ದಿನದಂದೇ ಸರಕಾರಿ ಶಾಲೆಯಲ್ಲಿ ಪ್ರತಿಭಟನೆ ಬಿಸಿ

udayavani youtube

ಫಲಜ್ಯೋತಿಷ್ಯದಲ್ಲಿ ದೀರ್ಘಕಾಲೀನ ಫಲಾದೇಶ ಮಾಡುವುದು ಹೇಗೆ ?

ಹೊಸ ಸೇರ್ಪಡೆ

1

2.08 ಲಕ್ಷ ಕ್ವಿಂಟಲ್‌ ಕಡಲೆ ಖರೀದಿ

bottadka

ಕಡಬ:ಬೊಟ್ಟಡ್ಕದಲ್ಲಿ ಆಗಬೇಕಿದೆ ರೈಲ್ವೇ ಅಂಡರ್‌ಪಾಸ್‌

ಮಾಜಿ ಕೇಂದ್ರ ಸಚಿವ ಚಿದಂಬರಂ ಆಸ್ತಿ ಮೇಲೆ ಸಿಬಿಐ ದಾಳಿ; ಪುತ್ರನ ವಿರುದ್ಧ ಹೊಸ ಕೇಸ್

ಮಾಜಿ ಕೇಂದ್ರ ಸಚಿವ ಚಿದಂಬರಂ ಆಸ್ತಿ ಮೇಲೆ ಸಿಬಿಐ ದಾಳಿ; ಪುತ್ರನ ವಿರುದ್ಧ ಹೊಸ ಕೇಸ್

777 charlie

‘777 ಚಾರ್ಲಿ’…. ಮನಮುಟ್ಟುವ ಅನುಬಂಧ ಅನಾವರಣ

Mehbooba Mufti,

ಜಮ್ಮು ಕಾಶ್ಮೀರ ಹಿಂಸಾಚಾರಕ್ಕೆ ದಿ ಕಾಶ್ಮೀರ ಫೈಲ್ ಚಿತ್ರವೇ ಕಾರಣ: ಮೆಹಬೂಬಾ ಮುಫ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.