ಎಸಿಬಿ ದಾಳಿ: ಪುಡಾ ಅಧಿಕಾರಿ ಬಲೆಗೆ

Team Udayavani, Apr 13, 2017, 1:24 PM IST

ಪುತ್ತೂರು: ಕೆಲಸ ಮಾಡಿಕೊಡಲು ಸಾರ್ವಜನಿಕರೋರ್ವರಿಂದ ಬುಧವಾರ ಲಂಚ ಸ್ವೀಕರಿಸುತ್ತಿದ್ದ ಪುತ್ತೂರು ನಗರಾಭಿವೃದ್ಧಿ ಯೋಜನಾ ಪ್ರಾಧಿಕಾರ (ಪುಡಾ)ದ ಸಹಾಯಕ ನಿರ್ದೇಶಕಿ ಲಾವಣ್ಯ ಅವರನ್ನು ರೆಡ್‌ ಹ್ಯಾಂಡ್‌ ಆಗಿ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ದ ಅಧಿಕಾರಿಗಳು ಸೆರೆಹಿಡಿದಿದ್ದಾರೆ.

ರಾಮ ಮೋಹನ್‌ ಪೈ ಅವರಿಂದ ಭೂ ಪರಿವರ್ತನೆಯ ವಲಯ ದೃಢೀಕರಣಕ್ಕಾಗಿ ಪುಡಾ ಸಹಾಯಕ ನಿರ್ದೇಶಕಿ ಲಾವಣ್ಯ 20,000 ರೂ. ಬೇಡಿಕೆ ಇಟ್ಟಿದ್ದರು. 20 ಸಾವಿರ ರೂ. ನೀಡಲು ಸಾಧ್ಯವಿಲ್ಲ ಎಂದು ತಿಳಿಸಿದ ಬಳಿಕ ಮಾತುಕತೆ ನಡೆಸಿ 10 ಸಾವಿರ ರೂ. ನೀಡುವುದೆಂದು ತೀರ್ಮಾನಿಸಲಾಗಿತ್ತು.

ಪುಡಾದಲ್ಲಿ ಹಣದ ಬೇಡಿಕೆ ಇಟ್ಟಿರುವ ಕುರಿತು ರಾಮ ಮೋಹನ ಪೈ ಅವರ ಪರವಾಗಿ ಕೇಶವ ಸುವರ್ಣ ಅವರು ಎಸಿಬಿ ಪೊಲೀಸರಿಗೆ ದೂರು ನೀಡಿದ್ದರು. ಬುಧವಾರ ಲಂಚದ ಹಣ ನೀಡುತ್ತಿದ್ದ ಸಂದರ್ಭದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿ ರೆಡ್‌ಹ್ಯಾಂಡ್‌ ಆಗಿ ಹಿಡಿದಿದ್ದಾರೆ.

ಭ್ರಷ್ಟಾಚಾರ ನಿಗ್ರಹ ದಳದ ಇನ್ಸ್‌ಪೆಕ್ಟರ್‌ ಯೊಗೀಶ್‌, ಕಾನ್ಸ್‌ಟೆಬಲ್‌ ಹರಿಪ್ರಸಾದ್‌ ದಾಳಿಯಲ್ಲಿ ಪಾಲ್ಗೊಂಡಿದ್ದರು. ಅನಂತರ ಅಧಿಕಾರಿಗಳು ತನಿಖೆ ನಡೆಸಿದ್ದು, ಬಳಿಕ ಲಾವಣ್ಯ ಅವರನ್ನು ಮಂಗಳೂರಿನ ಮೂರನೇ ಜಿಲ್ಲಾ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ