
ಬಾಂಬ್ ಇರಿಸಿದ ಪ್ರಕರಣ: ಆರೋಪಿ ಆದಿತ್ಯ ರಾವ್‌ನಿಗೆ 14 ದಿನಗಳ ನ್ಯಾಯಾಂಗ ಬಂಧನ
ವಿಮಾನ ನಿಲ್ದಾಣದಲ್ಲಿ ಬಾಂಬ್ ಇರಿಸಿದ ಪ್ರಕರಣ
Team Udayavani, Feb 1, 2020, 9:11 PM IST

ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇರಿಸಿದ ಪ್ರಕರಣದ ಆರೋಪಿ ಆದಿತ್ಯರಾವ್‌ಗೆ 6ನೇ ಜೆಎಂಎಫ್‌ಸಿ ನ್ಯಾಯಾಲಯವು 14ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.
ಆದಿತ್ಯ ರಾವ್‌ನ 10 ದಿನಗಳ ಪೊಲೀಸ್ ಕಸ್ಟಡಿ ಅವಧಿ ಮುಗಿದ ಹಿನ್ನೆಲೆಯಲ್ಲಿ ಶನಿವಾರ ಆತನನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರು ಪಡಿಸಿದರು. ನ್ಯಾಯಾಲಯವು 14ದಿನಗಳ ನ್ಯಾಯಾಂಗ ಬಂಧನ ವಿಧಿಸಿತು.
ಜ.20ರಂದು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇರಿಸಿದ್ದ ಆದಿತ್ಯ ರಾವ್ ಜ.22ರಂದು ಬೆಂಗಳೂರಿನಲ್ಲಿ ಪೊಲೀಸರಿಗೆ ಶರಣಾಗಿದ್ದ. ಆತನನ್ನು ಮಂಗಳೂರು ಎಸಿಪಿ ನೇತೃತ್ವದ ಪೊಲೀಸ್ ತನಿಖಾ ತಂಡ ವಶಕ್ಕೆ ಪಡೆದಿತ್ತು. ಜ.23ರಂದು 6 ನೇ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚುವರಿ ವಿಚಾರಣೆಗಾಗಿ ಪೊಲೀಸ್ ಕಸ್ಟಡಿಗೆ ಒಪ್ಪಿಸ ಬೇಕೆಂದು ಪೊಲೀಸ್ ತಂಡ ಮನವಿ ಮಾಡಿತ್ತು. ಮನವಿಯನ್ನು ಮನ್ನಿಸಿದ ನ್ಯಾಯಾಲಯ ಆದಿತ್ಯ ರಾವ್‌ನನ್ನು 10ದಿನಗಳ ಪೊಲೀಸ್ ಕಸ್ಟಡಿಗೆ ನೀಡಿತ್ತು.
ಕಳೆದ 10 ದಿನಗಳ ಅವಧಿಯಲ್ಲಿ ತನಿಖಾ ತಂಡ ಆರೋಪಿಯನ್ನು ಮಂಗಳೂರಿನ ವಿವಿಧೆಡೆ ಹಾಗೂ ಉಡುಪಿ ಮತ್ತು ಕಾರ್ಕಳಕ್ಕೆ ಕರೆದೊಯ್ದು ಸ್ಥಳ ಮಹಜರು ನಡೆಸಿ, ದಾಖಲೆಗಳನ್ನು ಸಂಗ್ರಹಿಸಿತ್ತು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan
