AJ Institute Of Management: ಎಂಬಿಎ ಪದವಿ ಪ್ರದಾನ
Team Udayavani, Aug 16, 2023, 12:46 AM IST
ಮಂಗಳೂರು: ನಗರದ ಲಕ್ಷೀ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್ (ಎಲ್.ಎಂ.ಇ.ಟಿ)ಇದರ ಅಂಗ ಸಂಸ್ಥೆಯಾದ ಎ.ಜೆ. ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ನ ಪದವಿ ಪ್ರದಾನ ಸಮಾರಂಭ ನೆರವೇರಿತು.
ಮುಖ್ಯ ಅತಿಥಿಯಾಗಿದ್ದ ಅಡ್ಜ್ವರ್ವ್ ಬೆಂಗಳೂರಿನ ಹಿರಿಯ ನಿರ್ದೇಶಕ ರಾಜೇಶ್ವರ ರಾವ್ ಮಾತನಾಡಿ, ಇಂದಿನ ವಿದ್ಯಾರ್ಥಿಗಳು ವೃತ್ತಿ ಜೀವನದಲ್ಲಿ ಯಶಸ್ಸು ಕಾಣುವುದಕ್ಕೆ ಚುರುಕುತನ, ಶ್ರದ್ಧೆ ಮತ್ತು ಸರಳತೆ ಈ ಮೂರು ಮುಖ್ಯ ಗುಣಗಳನ್ನು ಅಳವಡಿಸಿಕೊಳ್ಳಬೇಕೆಂದರು.
ಎಂಬಿಎ ಪೂರ್ಣಗೊಳಿಸಿದ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ನೆರವೇರಿಸಲಾಯಿತು. ಅಧ್ಯಕ್ಷತೆ ವಹಿಸಿದ್ದ ಆಡಳಿತ ಮಂಡಳಿಯ ನಿರ್ದೇಶಕಿ ಆಶ್ರಿತ ಪಿ. ಶೆಟ್ಟಿ ಅವರು ವಿದ್ಯಾರ್ಥಿಗಳು ಜ್ಞಾನ ಮತ್ತು ಕೌಶಲ ಬಳಸಿ ಉತ್ತಮ ಉದ್ದೇಶಗಳೊಂದಿಗೆ ಕಾರ್ಯನಿರ್ವಹಿಸಿ ಸಮಾಜದಲ್ಲಿ ಸತøಜೆಗಳಾಗಿ ಬಾಳಬೇಕೆಂದರು.
ಪ್ರಾಂಶುಪಾಲ ಡಾ| ವಿಜಯಕುಮಾರ್, ಅಕಾಡೆಮಿಕ್ ಡೀನ್ ಡಾ| ಸ್ವಪ್ನಾ ಶೆಟ್ಟಿ, ವಿದ್ಯಾರ್ಥಿ ಸಂಘದ ಸಲಹೆಗಾರ ಪ್ರೊ| ಚೇತನ್ ಕುಮಾರ್ ಉಪಸ್ಥಿತರಿದ್ದರು. ನಿರ್ದೇಶಕ ಡಾ| ಟಿ. ಜಯಪ್ರಕಾಶ್ ರಾವ್ ಸ್ವಾಗತಿಸಿ, ಡಾ| ಸ್ವಪ್ನಾ ಶೆಟ್ಟಿ ವಂದಿಸಿದರು. ವಿದ್ಯಾರ್ಥಿಗಳಾದ ಗೌತಮಿ ರೈ ಮತ್ತು ಹರ್ಷಾನಂದ ಭಕ್ತ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ