ವಾರ್ಷಿಕೋತ್ಸವ: ಸಾಮಾಜಿಕ ಪ್ರಜ್ಞೆ, ಕೌಶಲ ಬೆಳೆಸಿಕೊಳ್ಳುವುದು ಅಗತ್ಯ’

Team Udayavani, Apr 20, 2019, 6:55 AM IST

ಮೂಡುಬಿದಿರೆ: ಜೀವನ ದಲ್ಲಿ ಮಾನವೀಯ ಮೌಲ್ಯಗಳು, ಸಾಮಾ ಜಿಕ ಪ್ರಜ್ಞೆ ಹಾಗೂ ಜೀವನ ಕೌಶಲಗ ಳನ್ನುಬೆಳೆಸಿಕೊಳ್ಳುವುದು ಅಗತ್ಯ ಎಂದು ಬೆಂಗಳೂರು ಎಚ್‌.ಎ.ಎಲ್‌.ನ ಜನರಲ್‌ ಮ್ಯಾನೇಜರ್‌ ಪ್ರಕಾಶ್‌ ಕೆ. ಹೇಳಿದರು.

ಮಿಜಾರಿನ ಆಳ್ವಾಸ್‌ ಎಂಜಿನಿಯರಿಂಗ್‌ ಕಾಲೇಜಿನ ಹನ್ನೊಂದನೇ ವಾರ್ಷಿಕೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು.

ವಿದ್ಯಾರ್ಥಿಗಳು ಕೇವಲ ಪುಸ್ತಕ ಮತ್ತು ಇಂಟರ್‌ನೆಟ್‌ಗಳಿಂದ ಮಾತ್ರವಲ್ಲದೇ ಸಮಾಜ ಹಾಗೂ ಅನುಭವಸ್ಥರಿಂದಲೂ ಜ್ಞಾನ ಸಂಪಾದನೆ ಮಾಡುವುದು ಅಗತ್ಯ. ವಿದ್ಯಾರ್ಥಿ ಜೀವನದಲ್ಲಿ ಪಡೆ ದು ಕೊಂಡ ಜ್ಞಾನವನ್ನು ದೈನಂದಿನ ಜೀವನ ದಲ್ಲಿ ಅಳ ವಡಿ ಸಿಕೊಂಡಾಗಲೇ ಧ್ಯೇಯದ ಕಡೆಗೆ ಸಾಗಬಹುದು. ಕಠಿನ ಪರಿಶ್ರಮ ದಿಂದ ಗುರಿಯನ್ನು ಸುಲಭವಾಗಿ ಸಾಧಿಸ ಬಹುದು.

ಜೀವನದಲ್ಲಿ ಸಮಾಜ, ಕೆಲಸ ಮತ್ತು ಕುಟುಂಬವನ್ನು ಸಮಾನವಾಗಿ ನಿಭಾಯಿ ಸುವುದು ಅತ್ಯಗತ್ಯ ಎಂದರು.

ಸಮ್ಮಾನ
ಶಿಕ್ಷಣ, ಕ್ರೀಡೆ ಹಾಗೂ ಸಾಂಸ್ಕೃತಿಕ ವಿಭಾಗಗಳಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ, ಪ್ರೋತ್ಸಾಹ ಧನ ಹಾಗೂ ಶಾಲು ಹೊದಿಸಿ ಸಮ್ಮಾನಿಸಲಾಯಿತು.ಆಳ್ವಾಸ್‌ ಎಜುಕೇಶನ್‌ ಫೌಂಡೇಶನ್‌ನ ಮ್ಯಾನೇಜಿಂಗ್‌ ಟ್ರಸ್ಟಿ ವಿವೇಕ್‌ ಆಳ್ವ ಅಧ್ಯಕ್ಷತೆ ವಹಿಸಿದ್ದರು. ಪ್ರಾಂಶುಪಾಲ ಡಾಣ ಪೀಟರ್‌ ಫೆರ್ನಾಂಡಿಸ್‌ ಹಾಗೂ ವಿವಿಧ ವಿಭಾಗಗಳ ಡೀನ್‌ಗಳು ಉಪಸ್ಥಿತರಿದ್ದರು.


ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ

  • ಮಂಗಳೂರು: ನಿರ್ಮಾಣ್‌ ಹೋಮ್ಸ್‌ ಹಾಗೂ ಕೋಸ್ಟಲ್‌ ಕರ್ನಾಟಕ ಡೆವಲಪರ್ ಸಂಸ್ಥೆಯ ಸಹಯೋಗದಲ್ಲಿ ಬಿಜೈ ಕಾಪಿಕಾಡ್‌ನ‌ಲ್ಲಿ ನಿರ್ಮಾಣವಾಗಿರುವ ಬಹು ನಿರೀಕ್ಷಿತ 67...

  • ಬೆಂಗಳೂರು: ಬೆಂಗಳೂರು ಉತ್ತರ ವಿಶ್ವವಿದ್ಯಾಲಯ, ಕೋಲಾರ ಸ್ನಾತಕೋತ್ತರ ಕೇಂದ್ರ ಹಾಗೂ ಚಿಕ್ಕಬಳ್ಳಾಪುರದ ಸರ್ಕಾರಿ ಶಿಕ್ಷಣ ಕಾಲೇಜಿನಲ್ಲಿರುವ ಸ್ನಾತಕೋತ್ತರ...

  • ಮಲ್ಪೆ: ಭಗವಂತ ಭಕ್ತರಿಗೆ ಬೇರೆ ಬೇರೆ ರೂಪದಿಂದ ಅನುಗ್ರಹ ಮಾಡುತ್ತಾನೆ. ಆದರಲ್ಲೂ ಕಲಿಯುಗದ ಜನರ ಸಾಧನೆ, ಸಿದ್ಧಿಗೆ ತೊಂದರೆ ಇದ್ದಲ್ಲಿ ಅದನ್ನು ಪರಿಪಾಲನೆ ಮಾಡಲು...

  • ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟಕ್ಕೆ ನಿಚ್ಚಳ ಬಹುಮತವನ್ನು ಒದಗಿಸಿಕೊಟ್ಟ 2019ನೇ ಲೋಕಸಭೆ ಚುನಾವಣೆ ಈ ಕಾರಣಕ್ಕೆ ಮಾತ್ರ ಮುಖ್ಯವಾಗಿಲ್ಲ, ದೇಶದ ರಾಜಕೀಯ...

  • 2014ರಲ್ಲಿ ಅಮೇಠಿಯಲ್ಲಿ ರಾಹುಲ್‌ ಗಾಂಧಿ ವಿರುದ್ಧ ಸ್ಪರ್ಧಿಸಿ ಸೋತಿದ್ದ ಆಮ್‌ ಆದ್ಮಿ ಪಕ್ಷದ ಸಂಸ್ಥಾಪಕ ಡಾ.ಕುಮಾರ್‌ ವಿಶ್ವಾಸ್‌, ಈಗ ತಮ್ಮ ಪಕ್ಷದಿಂದ ಅಂತರ ಕಾಯ್ದುಕೊಂಡಿದ್ದಾರೆ....

  • ಕಾಸರಗೋಡು: ಕೇರಳದಲ್ಲಿ ಈ ಬಾರಿಯಾದರೂ ಖಾತೆ ತೆರೆಯುವ ಬಗ್ಗೆ ಬಹಳಷ್ಟು ನಿರೀಕ್ಷೆಯಿರಿಸಿದ್ದ ಬಿಜೆಪಿಗೆ ಈ ಗುರಿ ಸಾಧಿಸಲು ಸಾಧ್ಯವಾಗದಿದ್ದರೂ, ಈ ಹಿಂದಿನ ಎಲ್ಲ...