Udayavni Special

ಅನಾಥ ನಾಯಿ ಬೆಕ್ಕುಗಳಿಗೆ ಆಸರೆಯಾಗಿ : ಜುಲೈ 15ಕ್ಕೆ ದತ್ತು ಶಿಬಿರ

Team Udayavani, Jul 14, 2018, 11:50 AM IST

animal.jpg

ಪ್ರಾಣಿಪ್ರಿಯರು ಸಾಕುಪ್ರಾಣಿಗಳನ್ನು ದುಬಾರಿ ಬೆಲೆ ತೆತ್ತು ಖರೀದಿಸುವ  ಬದಲು, ದೇಶೀಯ ತಳಿಯ ನಾಯಿ ಮತ್ತು ಬೆಕ್ಕಿನ ಮರಿಗಳನ್ನು ದತ್ತು ತೆಗೆದುಕೊಳ್ಳುವಂತಾಗಬೇಕು ಎನ್ನುವುದೇ ಅನಿಮಲ್ ಕೇರ್ ಟ್ರಸ್ಟ್ ನ ಧ್ಯೇಯವಾಗಿದೆ. ಈ ಉದ್ದೇಶಕ್ಕಾಗಿ, ಅನಿಮಲ್ ಕೇರ್ ಟ್ರಸ್ಟ್ ವಿವಿಧ ಕಡೆಗಳಲ್ಲಿ ದತ್ತು ಶಿಬಿರಗಳನ್ನು ನಡೆಸಿ, ಅನಾಥ ಸ್ಥಿತಿಯಲ್ಲಿರುವ ದೆಶೀ ತಳಿಯ ನಾಯಿ ಮತ್ತು ಬೆಕ್ಕುಗಳಿಗೆ ಪ್ರೀತಿ ತುಂಬಿದ, ಶಾಶ್ವತವಾದ ಮನೆಗಳ ವ್ಯವಸ್ಥೆಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಿದೆ.

ಇದೇ ಬರುವ ಜುಲೈ 15ರ ಭಾನುವಾರದಂದು ನಗರದ ಕ್ಯಾಂಪ್ಲಾ ಕ್ರಾಸ್ ರಸ್ತೆ, ಅಲಕೆ ಮಂಗಳೂರು ಸಮೀಪದ ಬ್ಲೂ ಅಂಬ್ರೆಲ್ಲಾ ಶಾಲೆಯಲ್ಲಿ ಬೆಳಿಗ್ಗೆ 10 ರಿಂದ ಸಂಜೆ 5 ನಡೆಯಲಿರುವ ಈ ಬೃಹತ್ ದತ್ತು ಸ್ವೀಕಾರ ಶಿಬಿರದಲ್ಲಿ  50 ಕ್ಕೂ ಹೆಚ್ಚಿನ ನಾಯಿಮರಿಗಳನ್ನು ಪ್ರಾಣಿಪ್ರಿಯರು ಪಡೆದುಕೊಳ್ಳಲು ಅವಕಾಶವನ್ನು ಮಾಡಿಕೊಡಲಾಗಿದೆ.

ದಾರಿ ತಪ್ಪಿದ, ಕಾಯಿಲೆಗೆ ಒಳಗಾದ ಮತ್ತು ತೊರೆದ ಪ್ರಾಣಿಗಳಿಗೆ ರಕ್ಷಣೆ ಮತ್ತು ಆಶ್ರಯ ಒದಗಿಸಲು, 2000 ಇಸವಿಯಲ್ಲಿ ಅನಿಮಲ್ ಕೇರ್ ಟ್ರಸ್ಟ್ ಅಸ್ತಿತ್ವಕ್ಕೆ ಬಂದಿತು. ದೇಶೀಯ ತಳಿಗಳನ್ನು ನಿರ್ಲಕ್ಷಿಸುವುದು ಮತ್ತು ದಾರಿಯಲ್ಲಿ ಬಿಟ್ಟುಬಿಡುವುದು ಹೆಚ್ಚಾಗಿರುವಾಗ,  ಅನಿಮಲ್ ಕೇರ್ ಟ್ರಸ್ಟ್ ನವರು, ಈ  ಪ್ರಾಣಿಗಳಿಗೆ ಪ್ರೀತಿಯಿಂದ ನೋಡಿಕೊಳ್ಳುವ ಮನೆಗಳನ್ನು ಹುಡುಕುವ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ.

ನಾಯಿಮರಿಗಳನ್ನು ದತ್ತು ತೆಗೆದುಕೊಳ್ಳಲು ರೂ 200 ರೂಪಾಯಿಗಳ ಶುಲ್ಕವನ್ನು ಸಂಗ್ರಹಿಸಲಾಗುತ್ತದೆ. ಇದರಲ್ಲಿ ರೇಬಿಸ್ ನಿರೋಧಕ ಲಸಿಕೆಯ ಶುಲ್ಕವೂ ಸೇರಿದೆ. ದತ್ತು ತೆಗೆದುಕೊಳ್ಳುವವರ ವಿಳಾಸದ ನಕಲು ಪ್ರತಿಯನ್ನು ನೀಡುವುದು ಅಗತ್ಯವಾಗಿರುತ್ತದೆ.  ಅನಿಮಲ್ ಕೇರ್ ಟ್ರಸ್ಟ್ ನವರು ನೀವು ಅವರಿಂದ ದತ್ತು ತೆಗೆದುಕೊಂಡ ಪ್ರ್ರಾಣಿಯ  ಯೋಗಕ್ಷೇಮದ ಬಗ್ಗೆ ಹಾಗೂ ಅದಕ್ಕೆ ಸಂತಾನ ಹರಣ ಚಿಕಿತ್ಸೆ ನೀಡುವುದರ ವಿಚಾರಗಳಿಗೆ ಸಂಬಂಧಿಸಿದಂತೆ ನಿಮ್ಮನ್ನು ಸಂಪರ್ಕಿಸುತ್ತಿರುತ್ತಾರೆ.

ಅನಿಮಲ್ ಕೇರ್ ಟ್ರಸ್ಟ್ ಬಗ್ಗೆ …

ಅನಿಮಲ್ ಕೇರ್ ಟ್ರಸ್ಟ್, ಅನಿಮಲ್ ವೆಲ್ಫೇರ್ ಬೋರ್ಡ್ ಆಫ್ ಇಂಡಿಯಾದಿಂದ ಗುರುತಿಸಲ್ಪಟ್ಟ ನೋಂದಾಯಿತ ಚಾರಿಟಬಲ್ ಟ್ರಸ್ಟ್ ಆಗಿದೆ. ಮಂಗಳೂರು ಮಹಾನಗರ ಪಾಲಿಕೆಗಾಗಿ ABC/ARVಯನ್ನು ಈ ಟ್ರಸ್ಟ್ ನಡೆಸುತ್ತದೆ ಮಾತ್ರವಲ್ಲದೇ ಮಂಗಳೂರು ಮಹಾನಗರ ಪಾಲಿಕೆಯು ಈ ಟ್ರಸ್ಟ್ ನ ಚಟುವಟಿಕೆಗಳಿಗೆ ಸೂಕ್ತ ಮಾನ್ಯತೆ ನೀಡಿ ಗುರುತಿಸಿದೆ.

ಟಾಪ್ ನ್ಯೂಸ್

ghfyht

ಉಸಿರು ಚೆಲ್ಲಿದೆ ಗಂಗೆ | ಸಕ್ರೆಬೈಲು ಬಿಡಾರದಲ್ಲಿ ಶೋಕ

ರೈತಸಂಘ ಹೋರಾಟದ ಹೆಸರಲ್ಲಿ ಅಭಿವೃದ್ಧಿ ಕೆಲಸಕ್ಕೆ ಅಡ್ಡಿ ಮಾಡುವ ಅಗತ್ಯವಿಲ್ಲ : ಪುಟ್ಟರಾಜು

ರೈತಸಂಘ ಹೋರಾಟದ ಹೆಸರಲ್ಲಿ ಅಭಿವೃದ್ಧಿ ಕೆಲಸಕ್ಕೆ ಅಡ್ಡಿ ಮಾಡುವ ಅಗತ್ಯವಿಲ್ಲ : ಪುಟ್ಟರಾಜು

ಗೋವಾದಲ್ಲಿ ಕನ್ನಡ ಭವನ ನಿರ್ಮಾಣದ ಜೊತೆ ಪದವಿ ಶಿಕ್ಷಣದವರೆಗೆ ಕನ್ನಡ ವಿಸ್ತರಣೆ : ಮಹೇಶ್ ಜೋಶಿ

ಗೋವಾದಲ್ಲಿ ಕನ್ನಡ ಭವನ ನಿರ್ಮಾಣದ ಜೊತೆ ಪದವಿ ಶಿಕ್ಷಣದವರೆಗೆ ಕನ್ನಡ ವಿಸ್ತರಣೆ : ಮಹೇಶ್ ಜೋಶಿ

ಗಂಗಾವತಿ : ಭತ್ತದ ಗದ್ದೆಗೆ ನುಗ್ಗಿದ ಕಲ್ಯಾಣ ಕರ್ನಾಟಕ ಸಾರಿಗೆ ಬಸ್

ಗಂಗಾವತಿ : ಭತ್ತದ ಗದ್ದೆಗೆ ನುಗ್ಗಿದ ಕಲ್ಯಾಣ ಕರ್ನಾಟಕ ಸಾರಿಗೆ ಬಸ್

panjab

ಪಂಜಾಬ್ : ತೀವ್ರ ಬಿಕ್ಕಟ್ಟಿನ ನಡುವೆ ಛನ್ನಿ ಸಂಪುಟ ರಚನೆ

fcgfgtd

ನಾವು ರಾಜೀನಾಮೆ ನೀಡಿ ಬಿಜೆಪಿಗೆ ಬರದಿದ್ದರೆ ಸಚಿವರಾಗುತ್ತಿರಲಿಲ್ಲ : ಬಿ.ಸಿ ಪಾಟೀಲ್

89ನೇ ವಸಂತಕ್ಕೆ ಕಾಲಿರಿಸಿದ ಮಾಜಿ ಪಿಎಂ ಮನಮೋಹನ್‌ ಸಿಂಗ್‌

89ನೇ ವಸಂತಕ್ಕೆ ಕಾಲಿರಿಸಿದ ಮಾಜಿ ಪಿಎಂ ಮನಮೋಹನ್‌ ಸಿಂಗ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಎರಡೂವರೆ ಸಾವಿರ ಬಲ್ಬ್ ಅಳವಡಿಕೆ ಪೂರ್ಣ

ಎರಡೂವರೆ ಸಾವಿರ ಬಲ್ಬ್ ಅಳವಡಿಕೆ ಪೂರ್ಣ

ತುಳು ಭಾಷೆಗೆ ಮಾನ್ಯತೆ ನೀಡುವ ಕೆಲಸ ಮಾಡಲಾಗುವುದು: ಸುನಿಲ್‌ ಕುಮಾರ್‌

ತುಳು ಭಾಷೆಗೆ ಮಾನ್ಯತೆ ನೀಡುವ ಕೆಲಸ ಮಾಡಲಾಗುವುದು: ಸುನಿಲ್‌ ಕುಮಾರ್‌

ಹವಾಮಾನ ವೈಪರೀತ್ಯ ಮಂಗಳೂರಿನಲ್ಲಿ ಇಳಿಯದ ವಿಮಾನ

ಹವಾಮಾನ ವೈಪರೀತ್ಯ ಮಂಗಳೂರಿನಲ್ಲಿ ಇಳಿಯದ ವಿಮಾನ

ayush-1

ಕೇಂದ್ರ ಆಯುಷ್ ಸಚಿವರಿಂದ ವೆನ್‍ಲಾಕ್ ಆಯುಷ್ ಆಸ್ಪತ್ರೆ ಉದ್ಘಾಟನೆ

ಆಳ್ವಾಸ್‌ ಮಲ್ಲಕಂಬ ತಂಡಕ್ಕೆ ಸಮಗ್ರ ಪ್ರಶಸ್ತಿ :  ರಾಜ್ಯ ಮಟ್ಟದ ಮಲ್ಲಕಂಬ ಚಾಂಪಿಯನ್‌ಶಿಪ್‌

ಆಳ್ವಾಸ್‌ ಮಲ್ಲಕಂಬ ತಂಡಕ್ಕೆ ಸಮಗ್ರ ಪ್ರಶಸ್ತಿ :  ರಾಜ್ಯ ಮಟ್ಟದ ಮಲ್ಲಕಂಬ ಚಾಂಪಿಯನ್‌ಶಿಪ್‌

MUST WATCH

udayavani youtube

ನೂತನ ರಾಷ್ಟ್ರೀಯ ಶಿಕ್ಷಣ ನೀತಿ 2020 ಸಮಾಜಕ್ಕೆ ಬಹಳಷ್ಟು ಅವಶ್ಯಕತೆ : ಡಾ| ಅಶ್ವತ್ಥನಾರಾಯಣ

udayavani youtube

ಕೋವಿಡ್ ಆತಂಕದ ನಡುವೆ ಜಾನಪದ ಸಮ್ಮೇಳನದಲ್ಲಿ ಶಾಲಾ ಮಕ್ಕಳು ಭಾಗಿ

udayavani youtube

ಪಾಕ್ – ಚೀನಾ ಹೆಸರು ಹೇಳಲು ಮೋದಿಗೆ ಭಯವೇಕೆ ? ಕಾಂಗ್ರೆಸ್ ಪ್ರಶ್ನೆ|

udayavani youtube

ವಿನಾಯಕ ನಗರಕ್ಕೆ ವಿಘ್ನ ತಂದೊಡ್ಡಲಿರುವ ಅಕ್ರಮ ಗ್ಯಾಸ್ ಫಿಲ್ಲಿಂಗ್

udayavani youtube

ಕಾಪು ಗೃಹೋಪಯೋಗಿ ಮಾರಾಟ ಮಳೆಗೆಯಲ್ಲಿ‌ ಬೆಂಕಿ, ಅಪಾರ ಸೊತ್ತು‌ಹಾನಿ

ಹೊಸ ಸೇರ್ಪಡೆ

ghfyht

ಉಸಿರು ಚೆಲ್ಲಿದೆ ಗಂಗೆ | ಸಕ್ರೆಬೈಲು ಬಿಡಾರದಲ್ಲಿ ಶೋಕ

ರೈತಸಂಘ ಹೋರಾಟದ ಹೆಸರಲ್ಲಿ ಅಭಿವೃದ್ಧಿ ಕೆಲಸಕ್ಕೆ ಅಡ್ಡಿ ಮಾಡುವ ಅಗತ್ಯವಿಲ್ಲ : ಪುಟ್ಟರಾಜು

ರೈತಸಂಘ ಹೋರಾಟದ ಹೆಸರಲ್ಲಿ ಅಭಿವೃದ್ಧಿ ಕೆಲಸಕ್ಕೆ ಅಡ್ಡಿ ಮಾಡುವ ಅಗತ್ಯವಿಲ್ಲ : ಪುಟ್ಟರಾಜು

ಗೋವಾದಲ್ಲಿ ಕನ್ನಡ ಭವನ ನಿರ್ಮಾಣದ ಜೊತೆ ಪದವಿ ಶಿಕ್ಷಣದವರೆಗೆ ಕನ್ನಡ ವಿಸ್ತರಣೆ : ಮಹೇಶ್ ಜೋಶಿ

ಗೋವಾದಲ್ಲಿ ಕನ್ನಡ ಭವನ ನಿರ್ಮಾಣದ ಜೊತೆ ಪದವಿ ಶಿಕ್ಷಣದವರೆಗೆ ಕನ್ನಡ ವಿಸ್ತರಣೆ : ಮಹೇಶ್ ಜೋಶಿ

ಗಂಗಾವತಿ : ಭತ್ತದ ಗದ್ದೆಗೆ ನುಗ್ಗಿದ ಕಲ್ಯಾಣ ಕರ್ನಾಟಕ ಸಾರಿಗೆ ಬಸ್

ಗಂಗಾವತಿ : ಭತ್ತದ ಗದ್ದೆಗೆ ನುಗ್ಗಿದ ಕಲ್ಯಾಣ ಕರ್ನಾಟಕ ಸಾರಿಗೆ ಬಸ್

panjab

ಪಂಜಾಬ್ : ತೀವ್ರ ಬಿಕ್ಕಟ್ಟಿನ ನಡುವೆ ಛನ್ನಿ ಸಂಪುಟ ರಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.