
“ಬಿಜೆಪಿಯಿಂದ ಸಂವಿಧಾನ ವಿರೋಧಿ ನೀತಿ’
Team Udayavani, Mar 25, 2023, 5:30 AM IST

ಮಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಿದ್ದನ್ನು ವಿರೋಧಿಸಿ ಮತ್ತು ಬಿಜೆಪಿಯು ಸರಕಾರಿ ಯಂತ್ರವನ್ನು ದುರುಪಯೋಗ ಪಡಿಸುತ್ತಿದೆ ಎಂದು ಆರೋಪಿಸಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ವತಿಯಿಂದ ಶುಕ್ರವಾರ ಲಾಲ್‌ಬಾಗ್ ಬಳಿಯ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸಲಾಯಿತು.
ವಿಧಾನಪರಿಷತ್ ವಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್ ಮಾತನಾಡಿ, ಬಿಜೆಪಿಯಿಂದ ಪ್ರಜಾಪ್ರಭುತ್ವದ ಕೊಲೆಯಾಗಿದ್ದು, ಅದು ಸಂವಿಧಾನ ವಿರೋಧಿ ನೀತಿ ಅನುಸರಿಸುತ್ತಿದೆ. ಬಿಜೆಪಿಗೆ ಸಂವಿಧಾನದ ಮೇಲೆ ನಂಬಿಕೆಯಿಲ್ಲ. ಬಿಜೆಪಿಯ ಮತ್ತು ಪ್ರಧಾನಿ ಮೋದಿ ಅವರ ಈ ನೀತಿ ಖಂಡಿಸಿ ರಾಷ್ಟ್ರಾದ್ಯಂತ ಪ್ರತಿಭಟನೆ ನಡೆಸುತ್ತೇವೆ ಎಂದರು.
ಪ್ರತಿಭಟನೆಯಲ್ಲಿ ಶಾಸಕ ಯು.ಟಿ. ಖಾದರ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಮಾಜಿ ಸಚಿವ ಅಭಯಚಂದ್ರ ಜೈನ್, ಮಾಜಿ ಶಾಸಕರಾದ ಜೆ.ಆರ್. ಲೋಬೊ, ಮೊದಿನ್ ಬಾವ, ಶಕುಂತಳಾ ಶೆಟ್ಟಿ, ವಿಧಾನ ಪರಿಷತ್ ಮಾಜಿ ಸದಸ್ಯ ಐವನ್ ಡಿ’ಸೋಜಾ ಮತ್ತು ಕಾಂಗ್ರೆಸ್‌ನ ಪ್ರಮುಖ ನಾಯಕರು ಇದ್ದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು
