ಅಡಿಕೆ ಹಳದಿ ಎಲೆ ರೋಗ ಬಾಧೆ : ಪರ್ಯಾಯ ಬೆಳೆ ಬೆಳೆಯಲು ಪ್ರೋತ್ಸಾಹಧನ

Team Udayavani, May 29, 2022, 6:05 AM IST

ಅಡಿಕೆ ಹಳದಿ ಎಲೆ ರೋಗ ಬಾಧೆ : ಪರ್ಯಾಯ ಬೆಳೆ ಬೆಳೆಯಲು ಪ್ರೋತ್ಸಾಹಧನ

ಪುತ್ತೂರು : ಹಲವು ದಶಕಗಳಿಂದ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ, ಪುತ್ತೂರು ಭಾಗದ ಅಡಿಕೆ ತೋಟಗಳನ್ನು ನಾಶ ಮಾಡುತ್ತಿರುವ ಹಳದಿ ಎಲೆ ರೋಗದ ಸಂತ್ರಸ್ತ‌ರಿಗೆ ಪರ್ಯಾಯ ಬೆಳೆಯ ಮೂಲಕ ಪ್ರೋತ್ಸಾಹ ನೀಡಬೇಕು ಎನ್ನುವ ಬೇಡಿಕೆಗೆ ಸರಕಾರ ಸ್ಪಂದಿಸಿದ್ದು, ತೋಟಗಾರಿಕೆ ಇಲಾಖೆಯ ಮೂಲಕ ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನಿಸಿದೆ.

ಅಡಿಕೆ ತೋಟ ನಾಶ ಹೊಂದಿದವರಿಗೆ ಹಾಗೂ ಪರ್ಯಾಯ ಬೆಳೆ ಅಳವಡಿಸಿಕೊಳ್ಳದಿದ್ದವರಿಗೆ ಪರಿಹಾರ ರೂಪದಲ್ಲಿ 25 ಕೋಟಿ ರೂ. ಪ್ಯಾಕೇಜ್‌ ಘೋಷಿಸುವಂತೆ ಶಾಸಕ ಸಚಿವ ಎಸ್‌. ಅಂಗಾರ ನೇತೃತ್ವದಲ್ಲಿ ಕರಾವಳಿ ಶಾಸಕರು ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದ್ದರು. ಜತೆಗೆ ರೋಗ ನಿವಾರಣೆಗೆ ಉನ್ನತ ಮಟ್ಟದ ಸಂಶೋಧನೆಗೆ ಆದೇಶ ನೀಡುವಂತೆಯೂ ಆಗ್ರಹಿಸಿದ್ದರು. ಅದರಂತೆ ಅಂದಿನ ಮುಖ್ಯಮಂತ್ರಿ ಯಡಿಯೂರಪ್ಪ ಬಜೆಟ್‌ನಲ್ಲಿ 25 ಕೋ.ರೂ. ಮೀಸಲಿಟ್ಟಿದ್ದರು. ಆದರೆ ಅಷ್ಟೂ ಮೊತ್ತವನ್ನು ಸಂಶೋಧನೆಗೆ ಬಳಸಲು ನಿರ್ಧರಿಸಿದ ಕಾರಣ ನಷ್ಟ ಪರಿಹಾರ ಸಿಗುವ ನಿರೀಕ್ಷೆ ಕಮರಿತ್ತು. ಆದರೆ ಪರ್ಯಾಯ ಬೆಳೆಗೂ ಉತ್ತೇಜನ ನೀಡಬೇಕು ಎಂಬ ಕೃಷಿಕರ ಬೇಡಿಕೆಗೆ ಇದೀಗ ಮನ್ನಣೆ ಸಿಕ್ಕಿದೆ.

1,043.38 ಹೆಕ್ಟೇರ್‌ ಬಾಧಿತ ಪ್ರದೇಶ
ಹಳದಿ ರೋಗ ಬಾಧಿತ ಪ್ರದೇಶಗಳ ವ್ಯಾಪ್ತಿ ಮತ್ತು ತೀವ್ರತೆಯ ಅಂಕಿ-ಅಂಶಗಳ ನಿಖರ ಅಧ್ಯಯನಕ್ಕೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಸಮೀಕ್ಷೆ ನಡೆಸಲು ಕಳೆದ ಜನವರಿಯಲ್ಲಿ ತಂಡ ರಚಿಸಲಾಗಿತ್ತು. 13,993 ಸರ್ವೇ ನಂಬರ್‌ ಪ್ರದೇಶದಲ್ಲಿ ಸಮೀಕ್ಷೆ ನಡೆಸಿದ್ದು, ಒಟ್ಟು 7,048 ಸರ್ವೇ ನಂಬರ್‌ ವ್ಯಾಪ್ತಿಯಲ್ಲಿ ರೋಗ ಬಾಧೆ ಕಂಡುಬಂದಿತ್ತು. 1,043.38 ಹೆಕ್ಟೇರ್‌ಗಳಲ್ಲಿ ಸುಮಾರು 14,29,440 ಅಡಿಕೆ ಮರಗಳು ರೋಗಬಾಧಿತ ಎಂದು ಪರಿಗಣಿಸಲಾಗಿತ್ತು. ಇತ್ತೀಚೆಗೆ ಪುತ್ತೂರಿನಲ್ಲಿಯೂ ರೋಗ ಲಕ್ಷಣ ಕಂಡು ಬಂದಿದ್ದು 20 ಎಕರೆ ಅಧಿಕ ಪ್ರದೇಶಗಳನ್ನು ಗುರುತಿಸಲಾಗಿದೆ.

2022-23ನೇ ಸಾಲಿನ ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆಯಡಿ ಪರ್ಯಾಯ ಬೆಳೆಗಳಿಗೆ ಹೆಕ್ಟೇರಿಗೆ ಶೇ. 50ರಂತೆ ಪ್ರೋತ್ಸಾಹಧನ ನೀಡಲು ತಿರ್ಮಾನಿಸಲಾಗಿದೆ. ಈ ಬಗ್ಗೆ ಆಯಾ ಗ್ರಾ.ಪಂ. ವ್ಯಾಪ್ತಿಯ ಕೃಷಿಕರಿಗೆ ಮಾಹಿತಿ ನೀಡುತ್ತಿದ್ದೇವೆ.

– ಸುಹನಾ, ಹಿರಿಯ ಸಹಾಯಕ
ತೋಟಗಾರಿಕೆ ನಿರ್ದೇಶಕಿ, ತೋಟಗಾರಿಕೆ ಇಲಾಖೆ, ಸುಳ್ಯ

ಟಾಪ್ ನ್ಯೂಸ್

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

16-adu-jeevitham

Movie Review: ಆಡು ಜೀವಿದಂ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.