ಅರಂತೋಡು: ಗ್ರಂಥಾಲಯ ಕಟ್ಟಡ ಪೂರ್ಣ

ಎರಡೂವರೆ ವರ್ಷದ ಆಮೆ ನಡಿಗೆ; ಕೊನೆಗೂ ಉದ್ಘಾಟನೆಗೆ ಸಜ್ಜು

Team Udayavani, Apr 13, 2019, 6:00 AM IST

i-11

ಉದ್ಘಾಟನೆಗೆ ಸಜ್ಜುಗೊಂಡು ಅರಂತೋಡು ಗ್ರಂಥಾಲಯ ಕಟ್ಟಡ.

ಅರಂತೋಡು: ಅರಂತೋಡು ಗ್ರಾಮ ಪಂಚಾಯತ್‌ ವ್ಯಾಪ್ತಿಯ ಸಾರ್ವಜನಿಕ ಗ್ರಂಥಾಲಯ ಕಟ್ಟಡ ಕಾಮಗಾರಿ ಪೂರ್ಣ ಗೊಂಡು ಉದ್ಘಾಟನೆಗೆ ಸಜ್ಜುಗೊಂಡಿದೆ. ಹೊಸ ಕಟ್ಟಡಕ್ಕಾಗಿ ಎರಡೂವರೆ ವರ್ಷ ಗಳಿಂದ ಓದುಗರು ಕಾಯುತ್ತಿದ್ದರು. ಜಿಲ್ಲಾ ಕೇಂದ್ರ ಗ್ರಂಥಾಲಯದ ಅಧೀನದಲ್ಲಿರುವ ಅರಂತೋಡು ಸಾರ್ವಜನಿಕ ಗ್ರಂಥಾಲಯ ಈಗ ಗ್ರಾ.ಪಂ. ಸಮೀಪದ ಹಳೆ ಕಟ್ಟಡದಲ್ಲಿ ಕಾರ್ಯ ನಿರ್ವಹಿಸುತ್ತಿದೆ. ಸುಮಾರು ಮೂರು ವರ್ಷಗಳ ಹಿಂದೆ ಇಲಾಖೆಯಿಂದ ಮಂಜೂರುಗೊಂಡ 10 ಲಕ್ಷ ರೂ. ಅನುದಾನಕ್ಕೆ ತಕ್ಕಂತೆ ನೀಲ ನಕ್ಷೆ ತಯಾರಿಸಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅರಂತೋಡು ಇದರ ಸಮೀಪ ಇಲಾಖೆಯ ಗ್ರಂಥಾಲಯ ಕಟ್ಟಡ ಕಾಮಗಾರಿಯನ್ನು ಆರಂಭಿಸಲಾಗಿತ್ತು. ನಿರ್ಮಿತಿ ಕೇಂದ್ರದವರು ಕಾಮಗಾರಿಯ ಉಸ್ತುವಾರಿ ವಹಿಸಿಕೊಂಡಿದ್ದರು. ಮಂಜೂರುಗೊಂಡ 10 ಲಕ್ಷ ರೂ. ಅನುದಾನದಲ್ಲಿ ಮೊದಲ ಹಂತದಲ್ಲಿ 5 ಲಕ್ಷ ರೂ. ಮಾತ್ರ ಬಿಡುಗಡೆಗೊಂಡು ಕಾಮಗಾರಿ ನಡೆಸಲಾಯಿತು.

ಬಳಿಕ 5 ಲಕ್ಷ ರೂ. ಅನುದಾನ ಬಿಡುಗಡೆ ಗೊಳ್ಳದ ಹಿನ್ನೆಲೆಯಲ್ಲಿ ಕಾಮಗಾರಿಯನ್ನು ಸ್ಥಗಿತಗೊಳಿಸಲಾಗಿತ್ತು. ಕಳೆದ ಜನವರಿ ತಿಂಗಳಿನಲ್ಲಿ ಮತ್ತೆ 5 ಲಕ್ಷ ರೂ. ಅನುದಾನ ಬಿಡುಗಡೆಗೊಂಡು ಕಾಮಗಾರಿಯನ್ನು ಮತ್ತೆ ಆರಂಭಿಸಲಾಯಿತು. ಎರಡನೇ ಹಂತದ ಅನುದಾನ ಬಿಡುಗಡೆಗೆ ವರ್ಷ ಕಳೆದ ಕಾರಣ ಕಾಮಗಾರಿ ಆಮೆ ನಡಿಗೆಯಲ್ಲಿ ಸಾಗಿತ್ತು.

ಅರಂತೋಡು ಗ್ರಂಥಾಲಯ ಕಟ್ಟಡದ ಕಾಮಗಾರಿ ಆರಂಭಿಸಿ 8 ತಿಂಗಳ ಬಳಿಕ ಕಾಮಗಾರಿ ಪ್ರಾರಂಭಿಸಿದ ದೇವಚಳ್ಳ ಗ್ರಂಥಾಲಯ ಕಾಮಗಾರಿ ಪೂರ್ಣಗೊಂಡು ಕಳೆದೊಂದು ವರ್ಷದಿಂದ ಹೊಸ ಕಟ್ಟಡದಲ್ಲಿ ಕಾರ್ಯನಿರ್ವಸುತ್ತಿದೆ. ಆದರೆ 8 ತಿಂಗಳು ಮೊದಲು ಪ್ರಾರಂಭಿಸಿದ್ದ ಅರಂತೋಡು ಗ್ರಂಥಾಲಯ ಕಾಮಗಾರಿ ಪೂರ್ಣಗೊಳ್ಳದಿರುವುದು ವಿಪರ್ಯಾಸ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದರು. ಇದೀಗ ಲೈಬ್ರೆರಿ ಓದುಗರ ಮೊಗದಲ್ಲಿ ಮಂದ ಹಾಸ ಬೀರಿದೆ.

ಓದುಗರಿಗೆ ಲಭ್ಯ
ಅರಂತೋಡು ಗ್ರಂಥಾಲಯ ಕಟ್ಟಡ ಕಾಮಗಾರಿ ಪೂರ್ಣಗೊಂಡಿದೆ. ಸದ್ಯದಲ್ಲಿಯೇ ಓದುಗರ ಉಪಯೋಗಕ್ಕೆ ಲಭ್ಯವಾಗಲಿದೆ.
ಹರೀಶ್‌ ಎಂಜಿನಿಯರ್‌, ನಿರ್ಮಿತಿ ಕೇಂದ್ರ

ತುಂಬಾ ಖುಷಿಯಾಗಿದೆ
ಅರಂತೋಡು ಲೈಬ್ರೆರಿ ಕಟ್ಟಡ ಕಾಮಗಾರಿ ಮುಗಿಯಲು 2 ವರ್ಷ ತಗಲಿದೆ. ಇದೀಗ ಗ್ರಂಥಾಲಯ ಕಟ್ಟಡ ಕಾಮಗಾರಿ ಪೂರ್ಣಗೊಂಡಿದ್ದು, ಮನಸ್ಸಿಗೆ ತುಂಬಾ ಖುಷಿಯಾಗಿದೆ.
ಅಶ್ರಫ್ ಗುಂಡಿ ಲೈಬ್ರೆರಿ ಒದುಗ

ತೇಜೇಶ್ವರ್‌ ಕುಂದಲ್ಪಾಡಿ

ಟಾಪ್ ನ್ಯೂಸ್

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.