
ಆದಾಯಕ್ಕಿಂತ ಹೆಚ್ಚು ಆಸ್ತಿ ಪ್ರಕರಣ: ಅಧಿಕಾರಿಗೆ 5 ವರ್ಷ ಜೈಲು, 1.50 ಕೋ.ರೂ. ದಂಡ
Team Udayavani, Jan 28, 2023, 1:20 AM IST

ಮಂಗಳೂರು: ಆದಾಯಕ್ಕಿಂತ ಹೆಚ್ಚಿನ ಪ್ರಮಾಣದ ಆಸ್ತಿ ಹೊಂದಿದ ಪ್ರಕರಣದಲ್ಲಿ ನ್ಯಾಯಾಲಯವು ವಲಯ ಅರಣ್ಯಾಧಿಕಾರಿಗೆ 5 ವರ್ಷಗಳ ಸಾದಾ ಸಜೆ ಮತ್ತು 1.50 ಲ.ರೂ. ದಂಡ ವಿಧಿಸಿ ತೀರ್ಪು ನೀಡಿದೆ.
ಬೆಳ್ತಂಗಡಿ ಸಹ್ಯಾದ್ರಿ ವಲಯದ ವಲಯ ಅರಣ್ಯಾಧಿಕಾರಿಯಾಗಿದ್ದು ಪ್ರಸ್ತುತ ನಿವೃತ್ತರಾಗಿರುವ ಮಂಗಳೂರು ದೇರೆಬೈಲ್ ಕೊಂಚಾಡಿ ನಿವಾಸಿ ಎಸ್.ರಾಘವ ಪಾಟಾಳಿ ಶಿಕ್ಷೆಗೊಳಗಾದ ಅಪರಾಧಿ. ಈತನ ವಿರುದ್ಧ ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ 2011ರ ಜು.21ರಂದು ಭ್ರಷ್ಟಾಚಾರ ತಡೆ ಕಾಯಿದೆ 1988ರಡಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರಿನ ಮೂರನೇ ಹೆಚ್ಚುವರಿ ಜಿಲ್ಲಾ ಸತ್ರ(ವಿಶೇಷ) ನ್ಯಾಯಾಲಯದ ನ್ಯಾಯಾಧೀಶರಾದ ಬಿ.ಬಿ.ಜಕಾತಿ ಅವರು ಶುಕ್ರವಾರದಂದು ಅಪರಾಧಿಗೆ 5 ವರ್ಷಗಳ ಸಾದಾ ಸಜೆ ಹಾಗೂ 1.50 ಕೋ.ರೂ. ದಂಡ, ದಂಡ ಪಾವತಿಸಲು ವಿಫಲನಾದರೆ ಮತ್ತೆ 1 ವರ್ಷ ಹೆಚ್ಚುವರಿ ಸಾದಾ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.
ಪೊಲೀಸ್ ನಿರೀಕ್ಷಕ ಉದಯ ಎಂ.ನಾಯಕ್ ದೂರು ದಾಖಲಿಸಿದ್ದರು. ಪೊಲೀಸ್ ಉಪಾಧೀಕ್ಷಕ ವಿಟuಲ್‌ದಾಸ್ ಪೈ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಲೋಕಾಯುಕ್ತ ವಿಶೇಷ ಸಾರ್ವಜನಿಕ ಅಭಿಯೋಜಕ ರವೀಂದ್ರ ಮುನ್ನಿಪಾಡಿ ಸರಕಾರದ ಪರವಾಗಿ ವಾದ ಮಂಡಿಸಿದ್ದರು.
ಡ್ರಗ್ಸ್ ಪ್ರಕರಣ: ಜಾಮೀನು
ಮಂಗಳೂರು: ನಗರದಲ್ಲಿ ಇತ್ತೀಚೆಗೆ ಮಾದಕ ವಸ್ತು ಸೇವನೆ ಮತ್ತು ಮಾರಾಟ ಪ್ರಕರಣಕ್ಕೆ ಸಂಬಂಧಿಸಿ ಬಂಧಿಸಲ್ಪಟ್ಟಿದ್ದ 13 ಮಂದಿಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ವಿವಿಧ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಗಳ ವೈದ್ಯರು, ವೈದ್ಯ ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 24 ಮಂದಿಯನ್ನು ಪೊಲೀಸರು ಬಂಧಿಸಿದ್ದರು. ಉಳಿದ 11 ಮಂದಿ ಕೂಡ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ.
ಉದ್ಯಮಿಗೆ ಜೀವಬೆದರಿಕೆ: ಆರೋಪಿಗೆ ನ್ಯಾ. ಬಂಧನ
ಮಂಗಳೂರು: ಬಂದರಿನ ಪಟಾಕಿ ವ್ಯಾಪಾರಿಯೋರ್ವರಿಗೆ ಬೆದರಿಕೆ ಹಾಕಿದ್ದ ಆರೋಪಿ ದಿನೇಶ್ ಶೆಟ್ಟಿಯನ್ನು ಪೊಲೀಸರು ಬಂಧಿಸಿದ್ದು ಆತನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಈತ 5 ಲ.ರೂ.ಗಳಿಗೆ ಬೇಡಿಕೆ ಇಟ್ಟಿದ್ದ. ನೀಡದಿದ್ದರೆ ಕೊಲೆ ಮಾಡುವುದಾಗಿ ಬೆದರಿಸಿ ಹಲ್ಲೆ ನಡೆಸಿ ಪರಾರಿಯಾಗಿದ್ದ. ಈತ ಈ ಹಿಂದೆ ಭೂಗತ ಪಾತಕಿ ರವಿ ಪೂಜಾರಿಯ ಸಹಚರನಾಗಿದ್ದ ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ

ಹುಣಸೂರು: ಮೊದಲ ವರ್ಷಧಾರೆಗೆ ನೂರಾರು ಎಕರೆ ಬಾಳೆ ಬೆಳೆ ನಾಶ, ಲಕ್ಷಾಂತರ ರೂ. ನಷ್ಟ

ಗುಜರಾತ್ ನಲ್ಲಿ ಪ್ರಧಾನಿ ಮೋದಿ ವಿರುದ್ಧ ಪೋಸ್ಟರ್ ಅಭಿಯಾನ; 8 ಮಂದಿ ಬಂಧನ: ವರದಿ

ಹುಣಸೂರು: ಇಂದಿನಿಂದ ಎಸ್.ಎಸ್.ಎಲ್.ಸಿ. ಪರೀಕ್ಷೆ

ಕಾಡಾನೆಯ ಹನಿಟ್ರ್ಯಾಪ್: ತೀರ್ಥಹಳ್ಳಿ ಪಟ್ಟಣಕ್ಕೆ ನುಗ್ಗಿದ್ದ ಕಾಡಾನೆಯ ಸೆರೆಯಾಗಿಸಿದ ಭಾನುಮತಿ

ಅಗ್ನಿ ಆಕಸ್ಮಿಕ: ಲಕ್ಷಾಂತರ ರೂಪಾಯಿ ಮೌಲ್ಯದ ಪೀಠೋಪಕರಣಗಳು ಬೆಂಕಿಗಾಹುತಿ