ಅಂಗಡಿಗಳಿಗೆ ದಾಳಿ: ಆರೋಗ್ಯ ನಿರೀಕ್ಷಕರಿಗೆ ಗುರಿ ನಿಗದಿ


Team Udayavani, Apr 22, 2018, 10:00 AM IST

22-April-1.jpg

ಮಹಾನಗರ: ನಗರದಲ್ಲಿ ಪ್ಲಾಸ್ಟಿಕ್‌ ಬಳಕೆ ನಿಷೇಧವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಮಹಾನಗರ ಪಾಲಿಕೆ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ಇದಕ್ಕಾಗಿ ಪಾಲಿಕೆ ವ್ಯಾಪ್ತಿಯ ಎಲ್ಲ ಆರೋಗ್ಯ ನಿರೀಕ್ಷಕರಿಗೂ ಪ್ಲಾಸ್ಟಿಕ್‌ ಬಳಕೆ ಮಾಡುವ ಅಂಗಡಿಗಳ ಮೇಲೆ ದಾಳಿ ನಡೆಸಿ ಕ್ರಮ ಕೈಗೊಳ್ಳುವ ಸಂಬಂಧ ಗುರಿ ನಿಗದಿಪಡಿಸಲಾಗಿದೆ. ಅದ ರಂತೆ ಆರೋಗ್ಯ ನಿರೀಕ್ಷಕರು ತಮ್ಮ ವ್ಯಾಪ್ತಿಯ ಪ್ಲಾಸ್ಟಿಕ್‌ ಬಳಕೆ ಮಾಡುವ ಎಲ್ಲ ಅಂಗಡಿಗಳಿಗೆ ದಾಳಿ ನಡೆಸಿ ಕ್ರಮವಹಿಸಲು ಸೂಚಿಸಲಾಗಿದೆ.

ರಾಜ್ಯ ಸರಕಾರವು ಪ್ಲಾಸ್ಟಿಕ್‌ ನಿಷೇಧ ಅಧಿಸೂಚನೆ ಹೊರಡಿಸಿದ ಬಳಿಕ ಈ ಬಗ್ಗೆ ಪಾಲಿಕೆ ವ್ಯಾಪ್ತಿಯಲ್ಲಿಯೂ ಎಚ್ಚರ ವಹಿಸಲಾಗಿತ್ತು. ಕಳೆದ ವರ್ಷದಿಂದ ಪ್ಲಾಸ್ಟಿಕ್‌ ಮಾರಾಟದಲ್ಲಿ ತೊಡಗಿರುವ ಅಂಗಡಿಗಳಿಗೆ ದಾಳಿ ನಡೆಸಿ ಪ್ಲಾಸ್ಟಿಕ್‌ ಕ್ಯಾರಿಬ್ಯಾಗ್‌ಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಪ್ಲಾಸ್ಟಿಕ್‌ ಬಳಸುವ ಅಂಗಡಿಗಳ ಮೇಲೆ ನಿರಂತರ ದಾಳಿ ನಡೆದ ಅನಂತರ ಕೆಲವು ಅಂಗಡಿಗಳಲ್ಲಿ ಸಂಪೂರ್ಣವಾಗಿ ಪ್ಲಾಸ್ಟಿಕ್‌ ನಿಷೇಧಿಸಲಾಗಿತ್ತು. ಜತೆಗೆ ಪ್ಲಾಸ್ಟಿಕ್‌ ಉತ್ಪಾ ದ ನೆ ಮಾಡುವುದೂ ನಿಯಂತ್ರಣಕ್ಕೆ ಬಂದಿತ್ತು. ಆದರೆ ಕ್ರಮೇಣ ಈ ರೀತಿಯ ದಾಳಿ ಕಡಿಮೆಯಾಗುತ್ತಿದ್ದ ಹಿನ್ನೆಲೆಯಲ್ಲಿ ಪ್ಲಾಸ್ಟಿಕ್‌ ಬಳಕೆ ನಿರಾತಂಕವಾಗಿ ಸಾಗುತ್ತಿದೆ. ಸಣ್ಣ ಪುಟ್ಟ ಅಂಗಡಿಗಳಲ್ಲಿ ಈಗಲೂ ಪ್ಲಾಸ್ಟಿಕ್‌ ಬಳಕೆ ಮುಂದುವರಿದಿದೆ. ಈಗ ಮತ್ತೆ ಪಾಲಿಕೆಯು ಎಚ್ಚೆತ್ತಿದ್ದು, ಪ್ಲಾಸ್ಟಿಕ್‌ ಮಾರಾಟ ಮಾಡುವವರ ಮೇಲೆ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ.

ಚುನಾವಣೆ ಬಳಿಕ ವೇಗ
ಪ್ಲಾಸ್ಟಿಕ್‌ ನಿಷೇಧ ಸಂಬಂಧ ಅಂಗಡಿಗಳಿಗೆ ದಾಳಿ ಮಾಡುವುದು ಸಹಿ ತ ಸಂಪೂರ್ಣ ಪ್ರಕ್ರಿಯೆ ಆರೋಗ್ಯ ನಿರೀಕ್ಷಕರ ವ್ಯಾಪ್ತಿಗೆ ಬರುತ್ತದೆ. ಆದರೆ ಇಲ್ಲಿಯವರೆಗೆ ಪಾಲಿಕೆ ವ್ಯಾಪ್ತಿಯಲ್ಲಿದ್ದ ಆರೋಗ್ಯ ನಿರೀಕ್ಷಕರ ಸಂಖ್ಯೆ ಕೇವಲ ಐದು. ಇದರಿಂದ ಪ್ಲಾಸ್ಟಿಕ್‌ ಸಂಪೂರ್ಣ ನಿಷೇಧ ಮಾಡಬೇಕೆಂಬ ತುಡಿತವಿದ್ದರೂ ನಿರಂತರ ದಾಳಿ ಸಾಧ್ಯವಾಗಿರಲಿಲ್ಲ. ಈಗ ಹೊಸದಾಗಿ ಆರೋಗ್ಯ ನಿರೀಕ್ಷಕರ ನೇಮಕಾತಿ ಆಗಿದ್ದು, ಈಗ ಸಂಖ್ಯೆ ಹದಿನಾಲ್ಕು ಆಗಿದೆ. ಹೀಗಾಗಿ ಪ್ಲಾಸ್ಟಿಕ್‌ ನಿಷೇಧಗೊಳಿಸುವ ಪ್ರಕ್ರಿಯೆಯೂ ವೇಗ ಪಡೆದಿದ್ದು, ಕೆಲವು ದಿನಗಳ ಹಿಂದೆ ಪಾಲಿಕೆ ಆಯುಕ್ತರು ಎಲ್ಲ ಆರೋಗ್ಯ ನಿರೀಕ್ಷಕರ ಸಭೆ ಕರೆದು, ಪ್ಲಾಸ್ಟಿಕ್‌ ಬಳಕೆ ಮಾಡುವ ಅಂಗಡಿಗಳಿಗೆ ದಾಳಿ ಮಾಡಿ ಪ್ಲಾಸ್ಟಿಕ್‌ ವಶ ಪಡಿಸಿಕೊಳ್ಳುವ ಸಂಬಂಧ ಗುರಿ ನಿಗದಿ ಮಾಡಿದ್ದಾರೆ. ಆದರೆ ಗುರಿ ನಿರ್ದಿಷ್ಟವಾಗಿ ಎಷ್ಟು ಎಂಬ ಬಗ್ಗೆ ಇನ್ನಷ್ಟೇ ನಿರ್ಧಾರವಾಗಬೇಕಿದೆ.

‘ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಸದ್ಯ ಯಾವುದೇ ಕಾರ್ಯಾಚರಣೆ ನಡೆಯುತ್ತಿಲ್ಲ. ಚುನಾವಣೆ ಮುಗಿದ ತತ್‌ಕ್ಷಣ ಪ್ಲಾಸ್ಟಿಕ್‌ ವಿರುದ್ಧದ ಕಾರ್ಯಾಚರಣೆ ವೇಗ ಪಡೆಯಲಿದೆ’ ಎಂದು ಪರಿಸರ ಇಲಾಖೆಯ ಅಧಿಕಾರಿಯೋರ್ವರು ‘ಉದಯವಾಣಿ-ಸುದಿನ’ಕ್ಕೆ ತಿಳಿಸಿದ್ದಾರೆ.

ಸ್ಪಷ್ಟ ಎಚ್ಚರಿಕೆ
ಆರೋಗ್ಯ ನಿರೀಕ್ಷಕರು ತಮಗೆ ಸಂಬಂಧಪಟ್ಟ ಪ್ರದೇಶಗಳಲ್ಲಿ ಪ್ಲಾಸ್ಟಿಕ್‌ ಕ್ಯಾರಿ ಬ್ಯಾಗ್‌ ಬಳಕೆ ಮಾಡುವವರ ಮೇಲೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಿದ್ದಾರೆ. ಅಲ್ಲದೆ ಈಗಾಗಲೇ ವ್ಯಾಪಾರ ಪರವಾನಿಗೆ ನೀಡುವಾಗ ಪ್ಲಾಸ್ಟಿಕ್‌ ಬಳಸಬಾರದೆಂಬ ಸ್ಪಷ್ಟ ನಿಯಮ ಮತ್ತು ಎಚ್ಚರಿಕೆಯನ್ನೂ ನೀಡುವ ಕಾರ್ಯ ನಡೆಯುತ್ತಿದೆ.

ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಯೋರ್ವರು ಪ್ರತಿಕ್ರಿಯಿಸಿ, ‘ಪಾಲಿಕೆಯಿಂದ ಈಗಾಗಲೇ ಪ್ರಕರಣ
ಹಸ್ತಾಂತರಿಸಿದ್ದಾರೆ. ಅವುಗಳನ್ನು ಪರಿಶೀಲಿಸಿ ಪ್ರಕರಣ ದಾಖಲಿಸಲು ಮುಖ್ಯ ಕಚೇರಿಗೆ ಅನುಮತಿ ಕೇಳಲಾಗಿದೆ’ ಎಂದು ತಿಳಿಸಿದ್ದಾರೆ.

ದ್ವಿಚಕ್ರವಾಹನದಲ್ಲಿ ಮಾರಾಟ
ಪ್ರತಿ ರವಿವಾರ ನಗರದ ಸೆಂಟ್ರಲ್‌ ಮಾರ್ಕೆಟ್‌, ಪುರಭವನ ಮುಂಭಾಗದಲ್ಲಿ ಸಂತೆ ಇರುತ್ತದೆ. ಈ ವೇಳೆ ಕೆಲವರು ಸಂತೆಯಲ್ಲಿ ಮಾರಾಟನಿರತ ವ್ಯಾಪಾರಿಗಳಿಗೆ ದ್ವಿಚಕ್ರ ವಾಹನಗಳಲ್ಲಿ ಬಂದು ಪ್ಲಾಸ್ಟಿಕ್‌ ಕ್ಯಾರಿ ಬ್ಯಾಗ್‌ಗಳನ್ನು ಮಾರಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಬಂದಿದೆ.

ಈ ಸಂಬಂಧ ಒಂದೆರಡು ರವಿವಾರಗಳಂದು ಖುದ್ದಾಗಿ ಪುರಭವನ ಬಳಿ ತೆರಳಿ ಗಮನಿಸಿದ್ದೇನೆ. ಒಂದು ವೇಳೆ ಸಾರ್ವಜನಿಕರು ಅಂತಹ ವಾಹನಗಳ ಬಗ್ಗೆ ಮಾಹಿತಿ ನೀಡಿದ್ದಲ್ಲಿ ವಾಹನ ವಶ ಪಡಿಸಿಕೊಂಡು ಪ್ರಕರಣ ದಾಖಲಿಸಲಾಗುವುದು ಎಂದು ಪಾಲಿಕೆ ಅಧಿಕಾರಿ ಹೇಳಿದ್ದಾರೆ. 

ವರ್ಷಕ್ಕೆ 1,460 ಟನ್‌ ಪಾಸ್ಲಿ ಕ್‌ ಬಳಕೆ
ಮಂಗಳೂರು ನಗರದಲ್ಲಿ ಮನೆ ಬಳಕೆಗಾಗಿಯೇ ಉಪಯೋಗಿಸಿದ ಪ್ಲಾಸ್ಟಿಕ್‌ ಪ್ರಮಾಣ ದಿನವೊಂದಕ್ಕೆ ಅಂದಾಜು ನಾಲ್ಕು ಟನ್‌ನಷ್ಟಿರುತ್ತದೆ. ಅಂದರೆ ವರ್ಷಕ್ಕೆ 1,460 ಟನ್‌ ಪ್ಲಾಸ್ಟಿಕ್‌ ನ್ನು ಬಳಕೆ ಮಾಡಲಾಗುತ್ತದೆ. ಪರಿಸರ, ವಾಯು ಮಾಲಿನ್ಯಕ್ಕೆ ಕಾರಣವಾಗುವುದಲ್ಲದೆ, ಜೀವ ಸಂಕುಲಕ್ಕೂ ಇದು ಮಾರಕವಾಗಿ ಪರಿಣಮಿಸುತ್ತಿದೆ. ಆದರೆ ಪ್ಲಾಸ್ಟಿಕ್‌ ಬಳಕೆ ನಿಷೇಧ ಎಷ್ಟರ ಮಟ್ಟಿಗೆ ಅನುಷ್ಠಾನವಾಗಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಧನ್ಯಾ ಬಾಳೆಕಜೆ

ಟಾಪ್ ನ್ಯೂಸ್

1-wddsa-das

Toxic: ಯಶ್ ಸಿನಿಮಾದಿಂದ ಹೊರಹೋದ ಕರೀನಾ ಕಪೂರ್?

kore

KLE ಸಂಸ್ಥೆ ಬೆಳೆದಿದ್ದು ದಾನಿಗಳಿಂದ, ಕಾಂಗ್ರೆಸ್‍ನಿಂದ ಅಲ್ಲ‌: ಪ್ರಭಾಕರ ಕೋರೆ

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

Bidar; ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

1-wewewqe

Bengaluru ತಂಪೆರೆದ ವರುಣ; ಕೆಲವೆಡೆ ಹಾನಿ: 4 ದಿನ ಮುಂದುವರಿಯುವ ಸಾಧ್ಯತೆ

Yadagiri: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ; ಪ್ರಕರಣ ದಾಖಲು

Yadagiri: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ; ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಇಂಡಿಯಾ ಒಕ್ಕೂಟಕ್ಕೆ ನಾಯಕರೂ ಇಲ್ಲ, ನೇತೃತ್ವವೂ ಇಲ್ಲ: ಸಿ.ಟಿ ರವಿ

ಇಂಡಿಯಾ ಒಕ್ಕೂಟಕ್ಕೆ ನಾಯಕರೂ ಇಲ್ಲ, ನೇತೃತ್ವವೂ ಇಲ್ಲ: ಸಿ.ಟಿ ರವಿ

1-wddsa-das

Toxic: ಯಶ್ ಸಿನಿಮಾದಿಂದ ಹೊರಹೋದ ಕರೀನಾ ಕಪೂರ್?

Karnataka Lok Sabha Poll: ಮೇ 7ಕ್ಕೆ 2ನೇ ಹಂತದ ಮತದಾನ: ಮತ್ತೆ ಬಸ್‌ ದರ ದುಪ್ಪಟ್ಟು

Karnataka Lok Sabha Poll: ಮೇ 7ಕ್ಕೆ 2ನೇ ಹಂತದ ಮತದಾನ: ಮತ್ತೆ ಬಸ್‌ ದರ ದುಪ್ಪಟ್ಟು

kore

KLE ಸಂಸ್ಥೆ ಬೆಳೆದಿದ್ದು ದಾನಿಗಳಿಂದ, ಕಾಂಗ್ರೆಸ್‍ನಿಂದ ಅಲ್ಲ‌: ಪ್ರಭಾಕರ ಕೋರೆ

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.