
ವಿಟ್ಲಪಡ್ನೂರು ವ್ಯ.ಸೇ. ಸಹಕಾರಿ ಸೊಸೈಟಿಯಲ್ಲಿ ದರೋಡೆಗೆ ಯತ್ನ
Team Udayavani, Jan 28, 2023, 1:32 AM IST

ವಿಟ್ಲ: ವಿಟ್ಲಪಡ್ನೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಕೋಡಪದವು ಶಾಖೆಯ ಶಟರ್ ತುಂಡರಿಸಿ ದರೋಡೆಗೆ ಯತ್ನಿಸಿದ ಆರೋಪಿಗಳ ಪೈಕಿ ಓರ್ವನನ್ನು ವಾಹನ ಸಹಿತವಾಗಿ ವಿಟ್ಲ ಪೊಲೀಸರು ಬಂಧಿಸಿದ್ದಾರೆ.
ಬಾರೆಬೆಟ್ಟು ನಿವಾಸಿ ಟಿ.ಕೆ. ಅಬ್ದುಲ್ ಸಲಾಂ (37) ಬಂಧಿತ ಆರೋಪಿ. ನ. 23ರಂದು ಬೈಕ್ ಹಾಗೂ ಕಾರಿನಲ್ಲಿ ಆಗಮಿಸಿ ವಿಟ್ಲಪಟ್ನೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಕೋಡಪದವು ಶಾಖೆಯ ಮುಖ್ಯ ಶಟರ್ ಅನ್ನು ಗ್ಯಾಸ್ ಕಟ್ಟರ್ ನಿಂದ ತುಂಡರಿಸಿ ದರೋಡೆಗೆ ವಿಫಲಯತ್ನ ನಡೆಸಿದ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ಕೈಗೊಂಡ ವಿಟ್ಲ ಪೊಲೀಸರ ತಂಡ ಓರ್ವ ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಝೈಲೋ ಕಾರು ಬಳಸಿರುವುದಾಗಿ ಒಪ್ಪಿಕೊಂಡಿದ್ದಾನೆ. ಅದನ್ನು ವಶಕ್ಕೆ ಪಡಿಸಿಕೊಂಡು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ

ಹುಣಸೂರು: ಇಂದಿನಿಂದ ಎಸ್.ಎಸ್.ಎಲ್.ಸಿ. ಪರೀಕ್ಷೆ

ಕಾಡಾನೆಯ ಹನಿಟ್ರ್ಯಾಪ್: ತೀರ್ಥಹಳ್ಳಿ ಪಟ್ಟಣಕ್ಕೆ ನುಗ್ಗಿದ್ದ ಕಾಡಾನೆಯ ಸೆರೆಯಾಗಿಸಿದ ಭಾನುಮತಿ

ಅಗ್ನಿ ಆಕಸ್ಮಿಕ: ಲಕ್ಷಾಂತರ ರೂಪಾಯಿ ಮೌಲ್ಯದ ಪೀಠೋಪಕರಣಗಳು ಬೆಂಕಿಗಾಹುತಿ

ಚಿತ್ರ ವಿಮರ್ಶೆ: ‘ಹೊಯ್ಸಳ’ ಸಾಮ್ರಾಜ್ಯದಲ್ಲಿ ಆ್ಯಕ್ಷನ್ ಅಬ್ಬರ

ಅಂತಾರಾಷ್ಟ್ರೀಯ ಫಿಲ್ಮ್ ಫೆಸ್ಟಿವಲ್ ನಲ್ಲಿ ಜ್ಯೂರಿ ಮೆಚ್ಚುಗೆಯ ಪ್ರಶಸ್ತಿ ಪಡೆದ ‘ಇನ್’