ಡ್ರಗ್ಸ್‌ ಚಟುವಟಿಕೆಗಳ ತಡೆಗೆ ಜಾಗೃತಿ ಅಗತ್ಯ

ವಿದ್ಯಾರ್ಥಿ ಸಮುದಾಯ ಡ್ರಗ್ಸ್‌ ಚಟುವಟಿಕೆಗಳಲ್ಲಿ ಸಕ್ರಿಯ ?

Team Udayavani, Dec 7, 2021, 7:25 AM IST

ಡ್ರಗ್ಸ್‌ ಚಟುವಟಿಕೆಗಳ ತಡೆಗೆ ಜಾಗೃತಿ ಅಗತ್ಯ

ಮಂಗಳೂರು/ಉಡುಪಿ: ಕರಾವಳಿಯಲ್ಲಿ ಇತ್ತೀಚೆಗೆ ಡ್ರಗ್ಸ್‌ ಚಟುವಟಿಕೆ ಉಲ್ಬಣಗೊಂಡಿದ್ದು, ನಿಯಂತ್ರಣಕ್ಕೆ ಜಾಗೃತಿ ಮೂಡಿಸುವುದು ಅತ್ಯಗತ್ಯವಾಗಿದೆ.

ಮುಖ್ಯವಾಗಿ ವಿದ್ಯಾರ್ಥಿ ಸಮುದಾಯ ಮಾದಕ ದ್ರವ್ಯ ಸೇವನೆ, ಮಾರಾಟದಲ್ಲಿ ಸಕ್ರಿಯವಾಗಿರುವುದರ ಸುಳಿವು ಪೊಲೀಸರಿಗೆ ಸಿಕ್ಕಿದೆ. ನ. 12ರಿಂದ ಡಿ. 6ರ ವರೆಗೆ ದ.ಕ.ದಲ್ಲಿ ಗಾಂಜಾ ಸೇವನೆ ಆರೋಪದಲ್ಲಿ ಒಟ್ಟು 25ಕ್ಕೂ ಅಧಿಕ ಮಂದಿಯನ್ನು ಪೊಲೀಸರು ಬಂಧಿಸಿದ್ದು ಇದರಲ್ಲಿ 16 ಮಂದಿ ಕಾಲೇಜು ವಿದ್ಯಾರ್ಥಿಗಳು. ಇದು ಕೆಲವು ವಿದ್ಯಾರ್ಥಿಗಳು ಡ್ರಗ್ಸ್‌ ಚಟುವಟಿಕೆಯಲ್ಲಿ ಸಕ್ರಿಯವಾಗಿರುವುದನ್ನು ದೃಢಪಡಿಸಿದೆ. ಉಡುಪಿ ಜಿಲ್ಲೆಯಲ್ಲಿ ಕಳೆದ 10 ದಿನಗಳಲ್ಲಿ ಮೂರು ಪ್ರಕರಣಗಳಲ್ಲಿ ಆರು ಮಂದಿಯನ್ನು ಬಂಧಿಸಲಾಗಿದೆ. ಡಿ. 1ರಂದು ಗಾಂಜಾ ಸೇವಿಸುತ್ತಿದ್ದ ನಾಲ್ವರನ್ನು ಬಂಧಿಸಿದ್ದರು.

ರ್‍ಯಾಗಿಂಗ್‌, ಹೊಡೆದಾಟ
ನ. 27ರಂದು ನಗರದ ಕಾಲೇಜೊಂದರ ವಿದ್ಯಾರ್ಥಿಗಳಿಬ್ಬರ ಮೇಲೆ ನಡೆದಿದ್ದ ರ್‍ಯಾಗಿಂಗ್‌ ಪ್ರಕರಣದಲ್ಲಿ ಪೊಲೀಸರು 9 ಮಂದಿಯನ್ನು ಬಂಧಿಸಿದ್ದರು. ಇದರಲ್ಲಿ 7 ಮಂದಿ ವಿದ್ಯಾರ್ಥಿಗಳು ಗಾಂಜಾ ವ್ಯಸನಿಗಳು ಎಂಬುದು ದೃಢಪಟ್ಟಿತ್ತು. ಡಿ. 2ರಂದು ವಿದ್ಯಾರ್ಥಿಗಳ ನಡುವಿನ ಹೊಡೆದಾಟ, ಪೊಲೀಸರು ಮತ್ತು ಸಾರ್ವಜನಿಕರ ಮೇಲಿನ ಹಲ್ಲೆ ಪ್ರಕರಣದಲ್ಲಿ ಪೊಲೀಸರು 8 ಮಂದಿ ವಿದ್ಯಾರ್ಥಿಗಳನ್ನು ಬಂಧಿಸಿದ್ದರು. ಅವರನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ನಾಲ್ವರು ಗಾಂಜಾ ಸೇವಿಸಿದ್ದು ದೃಢಪಟ್ಟಿತ್ತು. ಗಾಂಜಾ ಸೇವನೆ ಹಿನ್ನೆಲೆಯಲ್ಲಿ ನ. 17ರಂದು ಉರ್ವ ಪೊಲೀಸರು 5 ಮಂದಿ ವಿದ್ಯಾರ್ಥಿಗಳನ್ನು ಬಂಧಿಸಿದ್ದರು.

ಕೇರಳ ಲಿಂಕ್‌
ಗಾಂಜಾ ಸೇವನೆ ಮಾಡಿರುವ ವಿದ್ಯಾರ್ಥಿಗಳ ಪೈಕಿ ಹೆಚ್ಚಿನವರು ಕೇರಳ ಮೂಲದ ವಿದ್ಯಾರ್ಥಿಗಳು. ಈಗಾಗಲೇ ನಗರಕ್ಕೆ ಕೇರಳ, ಆಂಧ್ರಪ್ರದೇಶ, ಗೋವಾ ಮೊದಲಾದ ಕಡೆಗಳಿಂದ ಗಾಂಜಾ ಮತ್ತಿತರ ಮಾದಕ ದ್ರವ್ಯಗಳು ಪೂರೈಕೆಯಾಗುವುದನ್ನು ಪೊಲೀಸರು ಕಂಡುಕೊಂಡಿದ್ದರು. ಕೇರಳ ಗಡಿಯನ್ನು ಕೇಂದ್ರೀಕರಿಸಿ ಕಾರ್ಯಾಚರಣೆ ನಡೆಸಿ ಬೃಹತ್‌ ಪ್ರಮಾಣದಲ್ಲಿ ಮಾದಕ ದ್ರವ್ಯ ಸಂಗ್ರಹಿಸಿದ್ದರು. ಆದಾಗ್ಯೂ ಕೇರಳ ಭಾಗದ ವಿದ್ಯಾರ್ಥಿಗಳ ಕೈಗೆ ಸುಲಭವಾಗಿ ಗಾಂಜಾ ಸಿಗುತ್ತಿದೆ ಎನ್ನಲಾಗುತ್ತಿದೆ. ಮಾತ್ರವಲ್ಲದೆ ಕೆಲವು ವಿದ್ಯಾರ್ಥಿಗಳು ಮಾದಕ ದ್ರವ್ಯ ವ್ಯಸನಿಗಳಾಗಿರುವ ಜತೆಗೆ ಪೆಡ್ಲರ್‌(ಮಾರಾಟಗಾರರು) ಕೂಡ ಆಗಿರುವ ಸಾಧ್ಯತೆ ಇದೆ ಎನ್ನುತ್ತಾರೆ ಪೊಲೀಸ್‌ ಅಧಿಕಾರಿಗಳು.

ಇದನ್ನೂ ಓದಿ:ಬೆಂಕಿಗೂ ಹೆದರಲ್ಲ, ಜನರಿಗೂ ಬೆದರಲ್ಲ :ನಾಗರಹೊಳೆ ರಸ್ತೆಯಲ್ಲಿ 2 ಗಂಟೆ ಜನರನ್ನು ಕಾಡಿದ ಸಲಗ

ಜಾಗೃತಿಗೆ ಆದ್ಯತೆ
ಮಾದಕ ದ್ರವ್ಯ ಸೇವನೆ ಹಿನ್ನೆಲೆಯಲ್ಲಿ ಈಗಾಗಲೇ ಹಲವಾರು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಇದರ ಜತೆಗೆ ವಿದ್ಯಾರ್ಥಿ ಸಮುದಾಯ ಹಾಗೂ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮಗಳು ಕೂಡ ನಡೆಯುತ್ತಿವೆ. ಈಗಾಗಲೇ ಮೂಲ್ಕಿ, ಮೂಡುಬಿದಿರೆ, ಪಣಂಬೂರು, ಕಾವೂರು, ಸುರತ್ಕಲ್‌, ಉಳ್ಳಾಲ, ಕೊಣಾಜೆ, ಕಂಕನಾಡಿ ಠಾಣಾ ವ್ಯಾಪ್ತಿಯ ಶಿಕ್ಷಣ ಸಂಸ್ಥೆ, ಹಾಸ್ಟೆಲ್‌ಗ‌ಳಲ್ಲಿ ಇಂತಹ ಕಾರ್ಯಕ್ರಮ ನಡೆಸಲಾಗಿದ್ದು, ಮುಂದಿನ ವಾರದಿಂದ ಇತರ ಪೊಲೀಸ್‌ ಠಾಣಾ ವ್ಯಾಪ್ತಿಗಳಲ್ಲಿಯೂ ಜಾಗೃತಿ ಮೂಡಿಸುವ ಕಾರ್ಯಕ್ರಮ ನಡೆಯಲಿದೆ.
-ಎನ್‌. ಶಶಿಕುಮಾರ್‌,
ಪೊಲೀಸ್‌ ಆಯುಕ್ತರು, ಮಂಗಳೂರು

ಟಾಪ್ ನ್ಯೂಸ್

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.